ಸಿರಿಧಾನ್ಯಕ್ಕೆ ಜಿಲ್ಲೆಯಲ್ಲಿ ಆದ್ಯತೆ

By Kannadaprabha News  |  First Published Aug 19, 2023, 8:22 AM IST

ಜಿಲ್ಲೆಯ 15 ರೈತ ಮಹಿಳೆಯರಿಗೆ ಸಿರಿಧಾನ್ಯದ ಸವಲತ್ತು ಹಾಗೂ ಉತ್ಪಾದನೆಗೆ ಸಹಕಾರ ನೀಡುವುದಾಗಿ ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಗೋವಿಂದೇಗೌಡ ತಿಳಿಸಿದ್ದಾರೆ.


  ಕುಣಿಗಲ್‌ : ಜಿಲ್ಲೆಯ 15 ರೈತ ಮಹಿಳೆಯರಿಗೆ ಸಿರಿಧಾನ್ಯದ ಸವಲತ್ತು ಹಾಗೂ ಉತ್ಪಾದನೆಗೆ ಸಹಕಾರ ನೀಡುವುದಾಗಿ ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಗೋವಿಂದೇಗೌಡ ತಿಳಿಸಿದ್ದಾರೆ.

ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ತಿಪಟೂರಿನ ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಏರ್ಪಡಿಸಿದ್ದ ಸಿರಿಧಾನ್ಯ ಪಾಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

Tap to resize

Latest Videos

ಜಿಲ್ಲೆಯಲ್ಲಿ 15 ರೈತ ಮಹಿಳೆಯರಿಗೆ ಸಿರಿಧಾನ್ಯಗಳ ಬೆಳೆಯುವ ಬಗ್ಗೆ ಐದು ದಿನ ತರಬೇತಿ ನೀಡಿ ಅವರಿಗೆ ಬೇಕಾದ ಎಲ್ಲಾ ರೀತಿಯ ಸಹಕಾರ ಆರ್ಥಿಕ ನೆರವು ನೀಡುವುದರ ಜೊತೆಗೆ ಮಾರುಕಟ್ಟೆಸಹಾಯ ಮಾಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಹಲವಾರು ಮಹಿಳೆಯರು ಸಿರಿಧಾನ್ಯಗಳಿಂದ ವಿವಿಧ ಖಾದ್ಯಗಳನ್ನು ತಯಾರಿಸಿ ಪ್ರದರ್ಶನ ಮಾಡುವುದರ ಜೊತೆಗೆ ಬಂದಿದ್ದ ಸಭಿಕರಿಗೆ ಉಣ ಬಡಿಸಿದರು. ಉತ್ತಮವಾದ ಸಿರಿಧಾನ್ಯ ತಯಾರಿಕೆ ಮಾಡಿದ್ದ ಹಲವಾರು ಮಹಿಳೆಯರಿಗೆ ಇಲಾಖೆಯ ವತಿಯಿಂದ ಪ್ರಮಾಣ ಪತ್ರ ಮತ್ತು ಬಹುಮಾನವನ್ನು ನೀಡಲಾಯಿತು

ಈ ಸಂದರ್ಭದಲ್ಲಿ ಹಿರಿಯ ವಿಜ್ಞಾನಿಗಳಾದ ಡಾ. ನಿತ್ಯಶ್ರೀ, ಕೀರ್ತಿಶಂಕರ್‌, ಕುಣಿಗಲ್‌ ಸಹಾಯಕ ಪ್ರಭಾರ ಕೃಷಿ ನಿರ್ದೇಶಕರಾದಂತಹ ನೂರ ಅಹಮದ್‌, ತೋಟಗಾರಿಕಾ ಹಿರಿಯ ನಿರ್ದೇಶಕರಾದ ಭಾಗ್ಯ ಲಕ್ಷ್ಮಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತಮ್ಮ, ಐ.ಆರ್‌.ಪರಮಶಿವಯ್ಯ, ಎಸ್‌ಬಿಐ ಕೃಷಿ ಬ್ಯಾಂಕ್‌ ಅಧಿಕಾರಿ ಹೇಮಾ, ಡೆಪ್ಯುಟಿ ಮ್ಯಾನೇಜರ್‌ ಅನುಷಾ ಸೇರಿದಂತೆ ಹಲವರು ಇದ್ದರು.

ದೇಶಾದ್ಯಂತ ತಲುಪಿದ ಬೀದರ್ ಸಿರಿಧಾನ್ಯ

ಬೀದರ್(ಆ.09): ಕೋವಿಡ್ ಸಂಕಷ್ಟದ ಆ ದಿನಗಳು, ಜನಾರೋಗ್ಯದ ಚಿಂತೆ, ವಿಷಕಾರಿ ಆಹಾರದ ಆತಂಕದ ಮಧ್ಯಯೇ ಚಿಗುರೊಡೆದ ವ್ಯಾಪಾರೋದ್ಯಮದ ಕನಸು, 5 ಸಾವಿರ ರು. ಬಂಡವಾಳ, ಸರ್ಕಾರದ ಪ್ರೋತ್ಸಾಹದೊಂದಿಗೆ ಮೂರು ವರ್ಷಗಳ ಹಿಂದೆ ಆರಂಭಿಸಿದ ಸಿರಿಧಾನ್ಯದ ವ್ಯಾಪಾರ ಇದೀಗ ಕೋಟ್ಯಂತರ ರೂಪಾಯಿ ವ್ಯವಹಾರದೊಂದಿಗೆ ಬೃಹದಾಕಾರವಾಗಿ ಬೆಳೆದು ನಿಂತಿದೆ. ಹಳ್ಳಿ, ಪಟ್ಟಣಗಳಿಗೆ ಸೀಮಿತವಾಗಿದ್ದ ಮಾರಾಟ ಇದೀಗ ದಿಲ್ಲಿ, ಮುಂಬೈಗೂ ತಲುಪಿಯಾಗಿದೆ.

ಅರಬ್ ದೇಶಗಳಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ಎಂಜಿನಿಯರ್. ಸಾವಿರಾರು ಜನ ಎಂಜಿನಿಯರ್ ಸಿಬ್ಬಂದಿಗೆ ಮೇಲಾಧಿಕಾರಿಯಾಗಿ ಕೈತುಂಬಾ ಸಂಬಳ ಪಡೆಯುತ್ತಿದ್ದ ಸಂಜೀವಕುಮಾರ್ ಭಾಸನ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ ಆಗಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಶಶಿಧರ್ ಭಾಸನ್ ಇಲ್ಲಿನ ಜಿಲ್ಲೆಯ ಹೊಚಕನಳ್ಳಿ ಗ್ರಾಮದ ಸಹೋದರರು ಕೋವಿಡ್ ದಿನಗಳಲ್ಲಿ ತಮ್ಮ ವೃತ್ತಿ ತೊರೆದು ಆರಂಭಿಸಿರುವ ಈ ಸ್ಟಾರ್ಟ್ಅಪ್ ಇದೀಗ ದೇಶದ ವಿವಿಧೆಡೆ ತಮ್ಮ ವ್ಯಾಪಾರ ವಿಸ್ತರಿಸಿದೆ. 

ಕಲ್ಪವೃಕ್ಷ ನೀಡಿದ ಕಲ್ಪರಸ, ಇದು ಕರಾವಳಿಯ ಕಾಮಧೇನು!

ಕೋವಿಡ್ ವಿಶ್ವ ವ್ಯಾಪಿಯಾಗಿದ್ದ 2020ರಲ್ಲಿ ರುಚಿತ್-ಬಿ ಸಿರಿಧಾನ್ಯಗಳ ಸಿರಿ ಎಂಬ ಹೆಸರಿನೊಂದಿಗೆ ಬೀದರ್ ಕೈಗಾರಿಕಾ ಪ್ರದೇಶದಲ್ಲಿ ಆರಂಭವಾಗಿರುವ ಮೆ. ಭಾಸನ್ ಎಂಟರ್‌ಪ್ರೈಸಸ್‌ನ ಏಕದಳ ಧಾನ್ಯಗಳ ಆಹಾರೋತ್ಪನ್ನ, ಪೌಷ್ಠಿಕ ಆಹಾರ ಪ್ರೋತ್ಸಾಹ ಉದ್ಯಮವೀಗ ಹೆಮ್ಮರವಾಗಿ ಬೆಳೆಯುತ್ತಿದೆ.

ವ್ಯಾಪಾರೋದ್ಯಮ ಆರಂಭಿಸಲು ಪ್ರೇರಣೆ:

ಕೋವಿಡ್ ಸಂಕಷ್ಟದ ಕಾಲದಲ್ಲಿ ಜನರಿಗೆ ಪೌಷ್ಠಿಕಾಂಶಗಳನ್ನು ಹೊಂದಲು ಸಿರಿಧಾನ್ಯಗಳ ಆಹಾರ ಸೇವನೆಯ ಸಲಹೆ ನೀಡುತ್ತ ಮನೆಯಲ್ಲಿಯೇ ಸಿರಿಧಾನ್ಯಗಳಿಂದ ಆಹಾರ ಪದಾರ್ಥಗಳನ್ನು ತಯಾರಿಸಿ ಪ್ರತಿ ಭಾನುವಾರ ಸಂಬಂಧಿಕರಿಗೆ, ಸ್ನೇಹಿತರಿಗೆ ನೀಡುತ್ತಾ ಹೋದದ್ದು, ಮುಂದೆ ವ್ಯಾಪಾರವಾಗಿ ಬೆಳೆಯಿತು. ರಾಯಚೂರು ಕೃಷಿ ವಿವಿಯಲ್ಲಿ ನಡೆದ ಸಿರಿಧಾನ್ಯ ಮೇಳದಲ್ಲಿ ಸಿಕ್ಕ ಸರ್ಕಾರದ ಪ್ರೋತ್ಸಾಹ ಕೈ ಹಿಡಿದು ಬೆಳೆಸಿದೆ. 

click me!