
ಮಂಗಳೂರು (ಮಾ.15): ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರ ಮೇಲೆ ಉಳ್ಳಾಲ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಿ ಪ್ರತಿಭಟನೆ ನಡೆಸಲಾಗಿದೆ.
ಮಂಗಳೂರಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದ್ದು, ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಝೀರೋ ಡ್ರಾಪ್ ಔಟ್ ಅಭಿಯಾನ ಮುಗಿಸಿ ವಾಪಸ್ ಹೋಗುತ್ತಿದ್ದ ವೇಳೆ ಹಲ್ಲೆ ನಡೆದಿರುವ ಆರೋಪ ಮಾಡಲಾಗಿದೆ. ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಗಾಂಜಾ ವ್ಯಸನಿಗಳಿಂದ ಸಿಎಫ್ ಐ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದರೆನ್ನಲಾಗಿದೆ.
ಮಂಗಳೂರು : ಕಾಲೇಜು ವಿದ್ಯಾರ್ಥಿನಿ, ಮಾಡೆಲ್ ಪ್ರೇಕ್ಷಾ ಸಾವಿಗೆ ಹೊಸ ಟ್ವಿಸ್ಟ್ ...
ಈ ವೇಳೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ಹಲ್ಲೆಗೊಳಗಾದವರನ್ನೇ ಬಂಧಿಸಿ ಠಾಣೆಗೆ ಕರೆದೊಯ್ದಿದ್ದರು. ಠಾಣೆಗೆ ಕರೆದೊಯ್ದು ಸಿಎಫ್ ಐ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾಗಿ ಆರೋಪಿಸಲಾಗಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಪಿಎಫ್‌ಐ ಕಾರ್ಯಕರ್ತರು ದಾಖಲಾಗಿದ್ದು, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಗಿದೆ.