ಕೊಪ್ಪಳ: ಆರ್‌ಎಸ್‌ಎಸ್‌ ಬಗ್ಗೆ ಪುರುಷೋತ್ತಮ ಬಿಳಿಮಲೆ ಟೀಕೆ, ಸಾಹಿತ್ಯಾಸಕ್ತರ ವಿರೋಧ

By Girish Goudar  |  First Published Nov 24, 2024, 10:20 PM IST

ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಬಾರದು ಅಂತ ಕಾನೂನಿದೆಯೇ ಅಂತ ಪುರುಷೋತ್ತಮ ಬಿಳಿಮಲೆ ಪ್ರಶ್ನಿಸಿ ಬೇಕಾದ್ರೆ ಇರಿ ಬೇಡವಾದ್ರೆ ಎದ್ದು ಹೊರಹೋಗುವಂತೆ ತಿಳಿಸಿದ್ದರು. ಹೀಗಾಗಿ ಕಾರ್ಯಕ್ರಮದಿಂದ ಕೆಲ ಸಾಹಿತ್ಯಾಸಕ್ತರು ಹೊರಬಂದ ಘಟನೆ ಕೊಪ್ಪಳದಲ್ಲಿ ನಡೆದಿದೆ. 


ಕೊಪ್ಪಳ(ನ.24):  ಇತಿಹಾಸ ವೈಭವಿಕರಿಸೋದು ಬೇಡ. ಅದನ್ನು ಆರ್‌ಎಸ್‌ಎಸ್‌ನವರು ಮಾಡುತ್ತಾರೆ ಅಂತ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಕ್ಕೆ ಕೆಲ ಸಾಹಿತ್ಯಾಸಕ್ತರು ವಿರೋಧ ವ್ಯಕ್ತಪಡಿಸಿದ ಘಟನೆ ಇಂದು(ಭಾನುವಾರ) ನಡೆದಿದೆ. 

ಕೊಪ್ಪಳ ನಗರದ ನೌಕರರ ಭವನದಲ್ಲಿ ಕವಿ ದಿ. ಗವಿಸಿದ್ದ ಬಳ್ಳಾರಿ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಪುರುಷೋತ್ತಮ ಬಿಳಿಮಲೆ ಅವರು ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡಿದ್ದರು. ಹೀಗಾಗಿ ಬಿಳಿಮಲೆ ವಿರುದ್ಧ ಕೆಲ ಸಾಹಿತ್ಯಾಸಕ್ತರು ಆಕ್ರೋಶವನ್ನ ಹೊರಹಾಕಿದ್ದಾರೆ. 

Latest Videos

undefined

ಬೆಂಗ್ಳೂರಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರಾಗುವ ಭೀತಿ: ಪುರುಷೋತ್ತಮ ಬಿಳಿಮಲೆ

ಬಿಳಿಮಲೆ ಭಾಷಣಕ್ಕೆ ಕೆಲ‌ ಸಾಹಿತ್ಯಾಸಕ್ತರು ವಿರೋಧ ವ್ಯಕ್ತಪಡಿಸಿದ್ದರು. ಕಾರ್ಯಕ್ರಮ ಕೆಲಹೊತ್ತು ಗದ್ದಲದ ಗೂಡಾಗಿತ್ತು. ಯಾರ ಕಾರ್ಯಕ್ರಮಕ್ಕೆ ಬಂದಿದ್ದೀರಿ ಅವರ ಬಗ್ಗೆ ಮಾತನಾಡಿ. ನೀವು ವಕ್ಫ್‌ ಸೇರಿದಂತೆ ಬೇರೆ ವಿಷಯದ ಬಗ್ಗೆ ಯಾಕೆ ಮಾತಡಲ್ಲಾ ಅಂತ ಪ್ರಶ್ನೆ ಮಾಡಿದ್ದಾರೆ. 

ಇದಕ್ಕೆ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಬಾರದು ಅಂತ ಕಾನೂನಿದೆಯೇ ಅಂತ ಪುರುಷೋತ್ತಮ ಬಿಳಿಮಲೆ ಪ್ರಶ್ನಿಸಿ ಬೇಕಾದ್ರೆ ಇರಿ ಬೇಡವಾದ್ರೆ ಎದ್ದು ಹೊರಹೋಗುವಂತೆ ತಿಳಿಸಿದ್ದರು. ಹೀಗಾಗಿ ಕಾರ್ಯಕ್ರಮದಿಂದ ಕೆಲ ಸಾಹಿತ್ಯಾಸಕ್ತರು ಹೊರಬಂದ ಘಟನೆ ನಡೆದಿದೆ. 

ಪ್ರಾಥಮಿಕ ಶಾಲೆಗೆ ಆಂಗ್ಲ ಮಾಧ್ಯಮ ಬೇಡ: ಡಾ.ಪುರುಷೋತ್ತಮ ಬಿಳಿಮಲೆ ಮನವಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿತ್ತು. 

Jana Sahitya Sammelana: ಈಗಿನ ಸಾಹಿತ್ಯ ಪರಿಷತ್ ಅಧ್ಯಕ್ಷರು ಸಾಹಿತಿಯಲ್ಲ: ಚಿಂತಕ ಪುರುಷೋತ್ತಮ ಬಿಳಿಮಲೆ

ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ(Dr.Purushothama Bilimale) ಅವರು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದರು.
ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಮತ್ತು ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ)ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರ ಈಗಾಗಲೇ ನಿರ್ಣಯ ಕೈಗೊಂಡಿದೆ. ಈ ಆದೇಶವು ಕನ್ನಡ ಭಾಷೆಯಲ್ಲಿ ಶಿಕ್ಷಣ ಒದಗಿಸುವುದಕ್ಕೆ ಹಿನ್ನಡೆಯನ್ನುಂಟು ಮಾಡುತ್ತದೆ. ಸದರಿ ಆದೇಶ ಕನ್ನಡ ಭಾಷಾ ಕಲಿಕಾ ಅಧಿನಿಯಮ ೨೦೧೫ಕ್ಕೆ ವಿರುದ್ಧವಾಗಿದೆ. ಜತೆಗೆ ಕನ್ನಡ ಭಾಷೆಯ ಸಾರ್ವಭೌಮತ್ವಕ್ಕೆ ಧಕ್ಕೆಯನ್ನುಂಟು ಮಾಡುತ್ತದೆ. ಆದ್ದರಿಂದ ಈ ಆದೇಶವನ್ನು ಹಿಂಪಡೆದು ಶಿಕ್ಷಣದಲ್ಲಿ ಕನ್ನಡ ಭಾಷಾ ಮಾಧ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು. 

click me!