ಈವರೆಗೂ ಕಾವೇರಿ ಪರ ವಾದ ಮಾಡುವ ವಕೀಲರಿಗೆ 5೦೦ ಕೋಟಿ ರು. ಕೊಡಲಾಗಿದೆ. ಇಷ್ಟೊಂದು ಹಣ ಪಡೆದು ಕರ್ನಾಟಕದ ಪರ ಸಮರ್ಥ ವಾದ ಮಂಡಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯ ಸರ್ಕಾರ ಸಮರ್ಥ ವಾದ ಮಂಡಿಸದೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಮಾಡಲಾಗುತ್ತಿದೆ ಎಂದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ
ಮಂಡ್ಯ(ಸೆ.30): ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಬದುಕು ಹಾಳು ಮಾಡಿ ತಮಿಳುನಾಡಿನೊಂದಿಗೆ ರಾಜಕೀಯ ಹಿತಾಸಕ್ತಿ ಪ್ರದರ್ಶಿಸುತ್ತಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು.
ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿ, ತಮಿಳುನಾಡು ಮುಖ್ಯಮಂತ್ರಿಯೊಂದಿಗಿನ ಸ್ನೇಹ ಗಟ್ಟಿಯಾಗಿ ಉಳಿಸಿಕೊಳ್ಳಬೇಕೆಂಬ ಉದ್ದೇಶದಿಂದ ಪ್ರಾಧಿಕಾರ, ಸುಪ್ರೀಂಕೋರ್ಟ್ ಹೇಳುವ ಮೊದಲೇ ನೀರು ಬಿಡುಗಡೆ ಮಾಡಲಾಗಿದೆ ಎಂದು ಕಿಡಿಕಾರಿದರು.
ಮೇಕೆಗಳನ್ನು ನುಂಗೋದು ಬಿಟ್ರೆ ಮೇಕೆದಾಟಲ್ಲಿ ಕಾಂಗ್ರೆಸ್‌ನವರದ್ದು ಏನೂ ಇಲ್ಲ: ಅಶ್ವತ್ಥ ನಾರಾಯಣ
ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಹೇಳುವ ಧೈರ್ಯ ರಾಜ್ಯ ಸರ್ಕಾರಕ್ಕೆ ಇಲ್ಲ. ತಮಿಳುನಾಡು ಮತ್ತು ಕರ್ನಾಟಕದ ಮುಖ್ಯಮಂತ್ರಿಗಳ ನಡುವೆ ಜಗಳವೇ ಇಲ್ಲ ಎಂದ ಮೇಲೆ ಪ್ರಧಾನಿ ಮಧ್ಯಸ್ಥಿಕೆ ವಹಿಸುವುದಾದರೂ ಹೇಗೆ? ನಮ್ಮ ರೈತರು, ಜನ ಸಂಕಷ್ಟದಲ್ಲಿದ್ದಾರೆ, ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಮಗೆ ಕುಡಿಯಲೇ ನೀರಿಲ್ಲದಿರುವಾಗ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡುತ್ತಿರುವುದು ಸರಿಯಲ್ಲ ಎಂದರು.
ಈವರೆಗೂ ಕಾವೇರಿ ಪರ ವಾದ ಮಾಡುವ ವಕೀಲರಿಗೆ 5೦೦ ಕೋಟಿ ರು. ಕೊಡಲಾಗಿದೆ. ಇಷ್ಟೊಂದು ಹಣ ಪಡೆದು ಕರ್ನಾಟಕದ ಪರ ಸಮರ್ಥ ವಾದ ಮಂಡಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯ ಸರ್ಕಾರ ಸಮರ್ಥ ವಾದ ಮಂಡಿಸದೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಮಾಡಲಾಗುತ್ತಿದೆ ಎಂದರು.