Chamarajanagar : ಕಾಂಗ್ರೆಸ್ ವಿರುದ್ದ ಎಸ್‌ಡಿಪಿಐ ಪ್ರತಿಭಟನೆ

By Kannadaprabha NewsFirst Published Oct 3, 2023, 8:18 AM IST
Highlights

ಹೊಸ ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅವಕಾಶ ಮಾಡಿಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮದ್ಯ ಭಾಗ್ಯ ಕೊಡುತ್ತಿದ್ದಾರೆಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

  ಚಾಮರಾಜನಗರ :  ಹೊಸ ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅವಕಾಶ ಮಾಡಿಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮದ್ಯ ಭಾಗ್ಯ ಕೊಡುತ್ತಿದ್ದಾರೆಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಭುವನೇಶ್ವರಿ ವೃತ್ತದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮದ್ ಅವರ ನೇತೃತ್ವದಲ್ಲಿ ಭಿತ್ತಿ ಪತ್ರ ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಮದ್ಯಪಾನ ವಿರೋಧಿಯಾಗಿದ್ದ ಮಹಾತ್ಮ ಗಾಂಧಿ ಅವರ ಜಯಂತಿ ಆಚರಿಸಲು ಕಾಂಗ್ರೆಸ್ ಜನಪ್ರತಿನಿಧಿಗಳಿಗೆ ಯಾವುದೇ ನೈತಿಕತೆ ಇಲ್ಲ, ಸಿದ್ದರಾಮಯ್ಯ ಗಾಂಧಿ ಅವರಿಗೆ ಮಾಲಾರ್ಪಣೆ ಮಾಡಬಾರದು, ಕಾಂಗ್ರೆಸ್ ಕಚೇರಿಗಳಲ್ಲಿ ಗಾಂಧಿ ಜಯಂತಿ ಆಚರಿಸಿ ಮಹಾತ್ಮನಿಗೆ ಅಗೌರವ ಸಲ್ಲಿಸಬಾರದು ಎಂದು ಒತ್ತಾಯಿಸಿದರು.

ಅಬ್ರಾರ್ ಅಹಮದ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚುವರಿ ಮದ್ಗದಂಗಡಿಗಳನ್ನು ತೆರೆಯಲು ಮುಂದಾಗಿರುವುದು ಖಂಡನೀಯವಾಗಿದೆ. ಇಂತಹ ಮದ್ಯಪಾನಕ್ಕೆ ಉತ್ತೇಜನ ನೀಡುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಗಾಂಧಿ ಜಯಂತಿ ಆಚರಿಸುವ ಯಾವುದೇ ನೈತಿಕತೆ ಇಲ್ಲ ಎಂದರು.

ಯೋಗೇಶ್ವರ್ ಹೊಸ ಬಾಂಬ್

 ಚನ್ನಪಟ್ಟಣ (ಅ.3) :  ಕಾಂಗ್ರೆಸ್‌ನಲ್ಲಿ ಒಳಬೇಗುದಿ ತೀವ್ರಗೊಂಡಿದ್ದು, ಶಾಸಕರಲ್ಲಿ ಅಸಮಾಧಾನ ಹೆಚ್ಚಳಗೊಂಡಿದೆ. ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದ್ದು, ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರೋದು ಅನುಮಾನ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆ ಗಮನಿಸಿದರೆ, ೨೦೨೩ ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆ ಇದೆ. ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಸ್ಘೋಟಿಸಲಿದ್ದು, ಸರ್ಕಾರ ಪತನಗೊಳ್ಳಲಿದೆ ಎಂದು ಅನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ನಾವು ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದು ಭವಿಷ್ಯ ನುಡಿದರು.

ಕಾವೇರಿ ನೀರಿನ ಸಮಸ್ಯೆಗೆ ಮೇಕೆದಾಟು ಪರಿಹಾರ: ಸಂಸದ ಡಿ.ಕೆ.ಸುರೇಶ್

ಡಮ್ಮಿಯಾದ ಶಾಸಕರು: ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದಾಗ ಸುಭದ್ರ ಸರ್ಕಾರ ಬಂತು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ. ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಾಗೆ ಪಕ್ಷಾಂತರ ಮಾಡಿದರೆ ಅಥವಾ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದರೆ ಆಶ್ಚರ್ಯವಿಲ್ಲ ಎಂದರು.

೨೫ರಿಂದ ೩೦ ಶಾಸಕರು ಈ ಹಿಂದೆಯೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದಿದ್ದರು. ಆ ನಂತರ ಬಸವರಾಜರಾಯರೆಡ್ಡಿ ಬಹಿರಂಗವಾಗಿಯೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಶಾಮನೂರು ಶಿವಶಂಕರಪ್ಪ ಲಿಂಗಾಯತರಿಗೆ ಅನ್ಯಾಯವಾಗುತ್ತಿದೆ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಸವರಾಜ ಶಿವಗಂಗಾ ಸರ್ಕಾರದ ವಿರುದ್ಧ ನೇರ ಆರೋಪ ಮಾಡಿದ್ದಾರೆ. ರಾಜಣ್ಣ ಲೋಕಸಭೆ ಚುನಾವಣೆ ನಂತರ ಈ ಸರ್ಕಾರ ಇರಲಿದೆಯೋ ಇಲ್ಲವೋ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಸರ್ಕಾರದ ಮೇಲೆ ವಿಶ್ವಾಸ ಹೋಗಿದೆ ಎಂದರು.

ಗೃಹಲಕ್ಷ್ಮೀ ಮೂಲಕ ಮಹಿಳೆಯರಿಗೆ 2 ಸಾವಿರ ರು..‌ ಕೊಡುತ್ತೇವೆಂದು ಹೇಳುತ್ತಾರೆ. ಮತ್ತೊಂದೆಡೆ ಹೆಚ್ಚುವರಿಯಾಗಿ ಸಾವಿರ ಮದ್ಯದಂಗಡಿ ತೆರೆಯಲು ಮುಂದಾಗಿದ್ದಾರೆ, ಮದ್ಯಪಾನವನ್ನು ಸಂಪೂರ್ಣವಾಗಿ ಕರ್ನಾಟಕದಲ್ಲಿ ನಿಷೇಧಿಸಲು ಮೂಲಕ ಗಾಂಧಿಯವರ ಅವರ ಕನಸನ್ನು ನನಸು ಮಾಡುಬೇಕು ಎಂದರು.

ನಗರಸಭಾ ಸದಸ್ಯ ಖಲೀಲ್ ಉಲ್ಲಾ, ಎಸ್ ಡಿ ಪಿಐ ಉಪಾಧ್ಯಕ್ಷ ಸಿ.ಎಸ್.ಸೈಯದ್ ಆರೀಪ್, ಜಿಲ್ಲಾ ಖಜಾಂಚಿ ನಯಾಜ್ ಉಲ್ಲಾ, ಜಿಲ್ಲಾ ಸಮಿತಿ ಸದಸ್ಯ ನಸ್ರುಲ್ಲಾ, ಮುಖಂಡರಾದ ಬಂಗಾರಸ್ವಾಮಿ, ರಾಮಸಮುದ್ರ ಸುರೇಶ್, ನಿಜಧ್ವನಿಗೋವಿಂದರಾಜು ಭಾಗವಹಿಸಿದ್ದರು. 

click me!