ಚಾಮರಾಜನಗರ : ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನೆ

By Suvarna NewsFirst Published Jun 3, 2021, 2:47 PM IST
Highlights
  • ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ನಡೆದು ಒಂದು ತಿಂಗಳು
  • ಸರ್ಕಾರ,ಜಿಲ್ಲಾಡಳಿತ ವಿರುದ್ಧ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ 
  • ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಮುಂಭಾಗ  ಪ್ರತಿಭಟನೆ

ಚಾಮರಾಜನಗರ (ಜೂ.03): ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ನಡೆದು ಒಂದು ತಿಂಗಳಾಗಿದೆ. ಆದರೆ ಇಲ್ಲಿಯವರೆಗೂ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಂಡಿಲ್ಲವೆಂದು ಸರ್ಕಾರ,ಜಿಲ್ಲಾಡಳಿತ ವಿರುದ್ಧ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಮುಂಭಾಗ ನಡೆದ ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಚಾಮರಾಜನಗರ ದುರಂತ ಸಂತ್ರಸ್ತರಿಗೆ ತಲಾ 2 ಲಕ್ಷ ಪರಿಹಾರ: ರಾಜ್ಯ ಸರ್ಕಾರ ...

ಈ ವೇಳೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದು,  ನಾನು ಅಂದು ಆಕ್ಸಿಜನ್ ಕೊರತೆ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೆ. ಆದರೆ ಅವರು ಆ ಸಂದರ್ಭದಲ್ಲಿ ಆಕ್ಸಿಜನ್ ಒದಗಿಸುವ ಬಗ್ಗೆ ಭರವಸೆ ಕೊಟ್ಟರು. ಅಷ್ಟರಲ್ಲಿ ದುರಂತ ನಡೆದು ಸಾವುಗಳಾದವು ಎಂದರು.  

 ಅಂದೇ ನಾನು ಹೇಳಿದ್ದೆ ಸತ್ತಿದ್ದು 24 ಅಲ್ಲ 34 ಕ್ಕೂ ಹೆಚ್ಚು ಎಂದು. ಆದರೆ ಈಗ ದುರ್ಘಟನೆ ನಡೆದು ಒಂದು ತಿಂಗಳಾಗಿದೆ. ಎರಡು ಲಕ್ಷ ಪರಿಹಾರ ಕೊಟ್ಟಿದ್ದಾರೆ. ಅದು ಯಾವುದೇ ಕಾರಣಕ್ಕೂ ಸಾಲುವುದಿಲ್ಲ. ಕಡಿಮೆ ಎಂದರು 10 ಲಕ್ಷ ರು. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಅದಲ್ಲದೇ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!