ಚಾಮರಾಜನಗರ ದುರಂತ : ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರ ವಜಾಕ್ಕೆ ಆಗ್ರಹ

Kannadaprabha News   | Asianet News
Published : May 05, 2021, 11:44 AM ISTUpdated : May 05, 2021, 11:49 AM IST
ಚಾಮರಾಜನಗರ ದುರಂತ : ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರ  ವಜಾಕ್ಕೆ ಆಗ್ರಹ

ಸಾರಾಂಶ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟಿದ್ದು ಇದಕ್ಕೆ ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರು ಹೊಣೆಯಾಗಿದ್ದು ಅವರನ್ನ ವಜಾ ಮಾಡಬೇಕೆಂದಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. 

ಮೈಸೂರು (ಮೇ.05):  ಚಾಮರಾಜನಗರ ಸಾವಿನ ದುರಂತಕ್ಕೆ ಕಾರಣರಾದವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ, ಜಿಲ್ಲಾ ಉಸ್ತುವಾರಿ ಮತ್ತು ಜಿಲ್ಲಾಧಿಕಾರಿಯನ್ನು ವಜಾಗೊಳಿಸಲು ಆಗ್ರಹಿಸಿ ಮೈಸೂರು ಕನ್ನಡ ವೇದಿಕೆಯವರು ತಮ್ಮ ಮನೆ ಬಳಿಯೕ ಮಂಗಳವಾರ ಮೌನವಾಗಿ ಪ್ರತಿಭಟಿಸಿದರು.

ಆಮ್ಲಜನಕ ಕೊರತೆಯಿಂದ 24 ಮಂದಿ ಸಾವನ್ನಪ್ಪಿದ್ದಾರೆ. ಈ ಸಾವಿಗೆ ಕಾರಣಕರ್ತರಾದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಜನತೆ ಯೋಗಕ್ಷೇಮ ವಿಚಾರಿಸಿದೆ, ಅಲ್ಲಿನ ಜನತೆಗೆ ಆರೋಗ್ಯ ಬಗ್ಗೆ ಮಾಹಿತಿ ಕೊಡದೆ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆ ಇರುವುದನ್ನು ಗಮನಿಸಿದೆ, ಜನ ಸತ್ತ ಮೇಲೆ ಇನ್ನೊಂದು ಜಿಲ್ಲೆಯಿಂದ ಆಕ್ಸಿಜನ್‌ ಬಂದಿಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.

ಚಾಮರಾಜನಗರ ದುರಂತ: ಅನುಮಾನ ಮೂಡಿಸುತ್ತಿದೆ ಡಿಸಿಗಳ ದ್ವಂದ್ವ ಹೇಳಿಕೆ

ಜಿಲ್ಲಾಡಳಿತಕ್ಕೆ ಮತ್ತು ವೈದ್ಯಾಧಿಕಾರಿಗಳಿಗೆ ಒಂದು ಆಸ್ಪತ್ರೆಗೆ ಎಷ್ಟುಆಕ್ಸಿಜನ್‌ ಬೇಕು ಎಂಬುದು ಮೊದಲೇ ಇವರು ಸರ್ಕಾರಕ್ಕೆ ಪತ್ರ ಬರೆದು ತರಿಸಿಕೊಳ್ಳಬೇಕಾಯಿತು. ಜನ ಸತ್ತ ಮೇಲೆ ಅವರಿವರನ್ನು ದೂರುವುದು ಸರಿಯಲ್ಲ. ಕೂಡಲೇ ಸರ್ಕಾರ ಇವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು. ಸಾವನ್ನಪ್ಪಿದ್ದ ಕುಟುಂಬಕ್ಕೆ ತಲಾ  10 ಲಕ್ಷ ರು. ಪರಿಹಾರ ನೀಡಬೇಕು. ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಯನ್ನು ಕೂಡಲೇ ವಜಾ ಮಾಡಬೇಕು. ಸಮರ್ಥರನ್ನು ನೇಮಿಸಬೇಕು. ಚಾಮರಾಜನಗರ ಗ್ರಾಮೀಣ ಪ್ರದೇಶದಿಂದ ಕೂಡಿದರಿಂದ ಹೆಚ್ಚಿನ ಆಕ್ಸಿಜನ್‌ ಮತ್ತು ಬೆಡ್‌ಗಳ ವ್ಯವಸ್ಥೆಯನ್ನು ಮಾಡಿ, ಜನರನ್ನು ಕೊರೋನಾದಿಂದ ಮುಕ್ತಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ಬಸವತತ್ವ ಪ್ರಚಾರಕ, ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀಗಳು ಲಿಂಗೈಕ್ಯ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!