ಚಾಮರಾಜನಗರ: BJP ಸ್ಥಳೀಯ ಮುಖಂಡ ರಾಜೀನಾಮೆ

Kannadaprabha News   | Asianet News
Published : Mar 15, 2020, 12:22 PM IST
ಚಾಮರಾಜನಗರ: BJP ಸ್ಥಳೀಯ ಮುಖಂಡ ರಾಜೀನಾಮೆ

ಸಾರಾಂಶ

ಪಕ್ಷದ ಆಂತರಿಕ ವಿಚಾರದಲ್ಲಿ ಬೇಸತ್ತು 10ನೇ ವಾರ್ಡ್‌ ಬಿಜೆಪಿ ಸದಸ್ಯ ಜಿ.ಪಿ. ಶಿವಕುಮಾರ್‌ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.  

ಚಾಮರಾಜನಗರ(ಮಾ.15): ಪಕ್ಷದ ಆಂತರಿಕ ವಿಚಾರದಲ್ಲಿ ಬೇಸತ್ತು 10ನೇ ವಾರ್ಡ್‌ ಬಿಜೆಪಿ ಸದಸ್ಯ ಜಿ.ಪಿ. ಶಿವಕುಮಾರ್‌ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷದಲ್ಲಿನ ದುಡಿದ ಕಾರ್ಯಕರ್ತರಿಗೆ ಬೆಲೆ ಇಲ್ಲ. ಯಡಿಯೂರಪ್ಪ ಅವರ ಹುಟ್ಟು ಹಬ್ಬ ಆಚರಣೆ ವಿಚಾರದಲ್ಲಿ ಬಿಜೆಪಿ ಪದಾಧಿಕಾರಿಗಳು ಸ್ಪಂದಿಸಲಿಲ್ಲ ಎಂದು ಬಿಜೆಪಿಯ ಕೆಲ ಪದಾಧಿಕಾರಿಗಳ ಮೇಲೆ ಗಂಭೀರ ಆರೋಪ ಹೊರಿಸಿ ಜಿಲ್ಲಾಧ್ಯಕ್ಷ ಸುಂದರ್‌ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸೋಮವಾರದೊಳಗೆ ಜಿಲ್ಲಾಧ್ಯಕ್ಷರು ಯಾವ ರೀತಿ ಕ್ರಮಕೈಗೊಳ್ಳುವರು ಪರಿಶೀಲಿಸಿ ಬಳಿಕ ರಾಜ್ಯಾಧ್ಯಕ್ಷರಿಗೆ ನನ್ನ ಬಿಜೆಪಿ ಪ್ರಾಥಮಿಕ ಸದಸ್ಯತ್ವದ ರಾಜೀನಾಮೆ ಪತ್ರ ರವಾನಿಸುವೆ.

ಅತೃಪ್ತ ಶಾಸಕರ ಜೊತೆ ಸಭೆ: ಕೇಂದ್ರ ಸಚಿವ ಜೋಶಿ ಪ್ರತಿಕ್ರಿಯೆ?

ಇಲ್ಲಿ ಪಕ್ಷಕ್ಕಾಗಿ ಬಾವುಟ ಕಟ್ಟಿದವರನ್ನು, ದುಡಿದವರನ್ನು ಕಡೆಗಣಿಸಲಾಗುತ್ತಿದೆ. ನಾನು ನಗರಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಲ್ಲ, ಆದರೆ ಬಿಜೆಪಿ ಸದಸ್ಯತ್ವಕ್ಕೆ ರಾಜ್ಯಾಧ್ಯಕ್ಷರಿಗೆ ಶೀಘ್ರ ರಾಜೀನಾಮೆ ಸಲ್ಲಿಸುವೆ ಎಂದು ತಿಳಿಸಿದರು.

PREV
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!