ಚಾಮುಂಡಿ ಬೆಟ್ಟದ ಪ್ರಾಧಿಕಾರದ ಸಭೆ ಅಕ್ರಮ, ನಾನು ಹೋಗಲ್ಲ: ಸಂಸದ ಯದುವೀರ್

By Girish GoudarFirst Published Sep 3, 2024, 2:26 PM IST
Highlights

ಯದುವಂಶದವರು ಚಾಮುಂಡಿ ಬೆಟ್ಟದ ಪೋಷಕರು. ಈ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಣ ಮಾಡಲು ಸರ್ಕಾರ ಪ್ರಾಧಿಕಾರ ರಚನೆ ಮಾಡುತ್ತಿದೆ. ದೇವಸ್ಥಾನಗಳ ಹುಂಡಿ ಹಣ ಆಯಾ ದೇವಸ್ಥಾನದ ಅಭಿವೃದ್ಧಿಗೆ ಬಳಕೆ ಆಗಬೇಕು. ಹಿಂದೂ ದೇವಾಲಯಗಳ ಮೇಲೆ ಏಕೆ ರೀತಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ ಮೈಸೂರು ಕೊಡಗು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
 

ಮೈಸೂರು(ಸೆ.03):  ಚಾಮುಂಡಿ ಬೆಟ್ಟದ ಪ್ರಾಧಿಕಾರದ ಸಭೆ ಅಕ್ರಮ. ಇದು ನ್ಯಾಯಾಂಗ ನಿಂದನೆ ಆಗುತ್ತದೆ. ನ್ಯಾಯಾಂಗ ನಿಂದನೆಗೆ ಒಳಪಡುವ ಸಭೆಗೆ ನಾನು ಹೋಗಲು ಆಗಲ್ಲ, ಇದಕ್ಕಾಗಿ ಹೋಗಿಲ್ಲ. ಪ್ರಾಧಿಕಾರ ರಚನೆ ಸಂಬಂಧ ಹೈಕೋರ್ಟ್‌ನಲ್ಲಿ ಸೆ. 5 ವರೆಗೆ ತಡೆಯಾಜ್ಞೆ ಇದೆ. ತಡೆಯಾಜ್ಞೆ ನಡುವೆ ಸಭೆ ಮಾಡುವುದು ನ್ಯಾಯಾಂಗ ನಿಂದನೆ. ಸೆ. 5 ರವರೆಗೆ ತಡೆಯಾಜ್ಞೆ ಇರೋದು ಸತ್ಯ ಎಂದು ಮೈಸೂರು ಕೊಡಗು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. 

ಇಂದು(ಮಂಗಳವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾನಾಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಸಿಎಂ ಯಾವ ಆಧಾರದಲ್ಲಿ ತಡೆಯಾಜ್ಞೆ ತೆರವಾಗಿದೆ ಎಂದು ಹೇಳಿದ್ದಾರೋ ನನಗೆ ಗೊತ್ತಿಲ್ಲ.. ಪ್ರಾಧಿಕಾರ ರಚನೆ ಆಗಬಾರದು ಪ್ರಾಧಿಕಾರದಿಂದ ನಮ್ಮ ನಂಬಿಕೆ ಆಚರಣೆ ಪರಂಪರೆಗೆ ಧಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

Latest Videos

ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಪದೇ ಪದೇ ಹೋಗುವುದು ತಪ್ಪಾ?: ಸಚಿವ ಜಮೀರ್‌ ಪ್ರಶ್ನೆ!

ಯದುವಂಶದವರು ಚಾಮುಂಡಿ ಬೆಟ್ಟದ ಪೋಷಕರು. ಈ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಣ ಮಾಡಲು ಸರ್ಕಾರ ಪ್ರಾಧಿಕಾರ ರಚನೆ ಮಾಡುತ್ತಿದೆ. ದೇವಸ್ಥಾನಗಳ ಹುಂಡಿ ಹಣ ಆಯಾ ದೇವಸ್ಥಾನದ ಅಭಿವೃದ್ಧಿಗೆ ಬಳಕೆ ಆಗಬೇಕು. ಹಿಂದೂ ದೇವಾಲಯಗಳ ಮೇಲೆ ಏಕೆ ರೀತಿ ಮಾಡಲಾಗುತ್ತಿದೆ ಎಂದು ಸಂಸದ ಯದುವೀರ್ ಪ್ರಶ್ನಿಸಿದ್ದಾರೆ. 

ಪ್ರಾಧಿಕಾರ ರಚನೆಯಾದರೆ ನಮ್ಮ ಆಚರಣೆಗಳಿಗೂ ಬ್ರೇಕ್ ಬೀಳುವ ಸಾಧ್ಯತೆಯಿದೆ. ಈ ಸಂಬಂಧ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಮೈಸೂರು ಕೊಡಗು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. 

click me!