ಮೈಸೂರಲ್ಲಿ ಮಳೆ ಬರುವ ಸಂಭವ : ಹವಾಮಾನ ಇಲಾಖೆ ಮುನ್ಸೂಚನೆ

Published : Nov 08, 2023, 10:10 AM IST
ಮೈಸೂರಲ್ಲಿ ಮಳೆ ಬರುವ ಸಂಭವ : ಹವಾಮಾನ ಇಲಾಖೆ ಮುನ್ಸೂಚನೆ

ಸಾರಾಂಶ

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಈ ವಾರದ ಮುನ್ಸೂಚನೆ ಮೈಸೂರು ಜಿಲ್ಲೆಯಲ್ಲಿ ನ.8 ರಿಂದ 12 ರವರೆಗೆ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಬರುವ ಸಂಭವವಿದೆ ಎಂದು ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ, ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

 ಮೈಸೂರು :  ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಈ ವಾರದ ಮುನ್ಸೂಚನೆ ಮೈಸೂರು ಜಿಲ್ಲೆಯಲ್ಲಿ ನ.8 ರಿಂದ 12 ರವರೆಗೆ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಬರುವ ಸಂಭವವಿದೆ ಎಂದು ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ, ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ತೊಗರಿ ಬೆಳೆಯಲ್ಲಿ ಕಾಯಿಕೊರಕವು ಕಂಡು ಬಂದಲ್ಲಿ ಇದರ ಹತೋಟಿಗಾಗಿ ಬೆಳೆ ಹೂ ಮೊಗ್ಗು ಮತ್ತು ಹೂವಿನ ಹಂತದಲ್ಲಿದ್ದಾಗ 0.5 ಮಿ.ಲೀ. ಇಂಡೋಕ್ಸಾಕಾರ್ಬ್ 14.5 ಎಸ್.ಸಿ ಅಥವಾ 0.5 ಮಿ.ಲೀ ಕ್ಲೋರಂಟ್ರಾನಿಲಿಪ್ರೋಲ್ 18.5 ಎಸ್.ಸಿ. ಔಷಧಿಯನ್ನ ಒಂದು ಲೀ. ನೀರಿನಲ್ಲಿ ಬೆರಸಿ ಸಿಂಪಡಿಸಬೇಕು.

ಬದನೆ ಬೆಳೆಯಲ್ಲಿ ಸುಳಿ ಮತ್ತು ಕಾಯಿಕೊರಕ ಕಂಡು ಬಂದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಮೆಲಾಥಿಯಾನ್ 50 ಇಸಿ- 2.0 ಮಿ.ಲೀ./ಲೀ. ನೀರಿಗೆ ಸೇರಿಸಿ ಗಿಡಗಳ ಮೇಲೆ ಸಿಂಪಡಿಸಬೇಕು ಎಂದು ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಸಿ. ರಾಮಚಂದ್ರ, ಸಹ ಸಂಶೋಧಕ ಡಾ.ಜಿ.ವಿ. ಸುಮಂತ್ ಕುಮಾರ್ ಸಲಹೆ ನೀಡಿದ್ದಾರೆ. ರೈತರು ಹೆಚ್ಚಿನ ಮಾಹಿತಿಗಾಗಿ ಮೊ. 95353 45814 ಸಂಪರ್ಕಿಸಬಹುದು.

ಮಳೆ ಮುನ್ಸೂಚನೆ

ಬೆಂಗಳೂರು (ನ.07): ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ್ದು ಟ್ರಫ್‌ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಕದ ದಕ್ಷಿಣ ಒಳನಾಡು, ಕರಾವಳಿ ಭಾಗ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ (ನವೆಂಬರ 7 ರಿಂದ ನವೆಂಬರ್‌ 9ರವರೆಗೆ) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಈ ವೇಳೆ ಮಳೆಯಾಗುವ ಪ್ರದೇಶಗಳಲ್ಲಿ ಸುಮಾರು 35 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಕರಾವಳಿಯ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ  ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ, ಮುಂದಿನ 2 ದಿನಗಳಲ್ಲಿ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ  ಭಾರಿ ಮಳೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು: ಬದುಕು ಕಿತ್ತುಕೊಂಡ ಜಾಗದಲ್ಲೇ ಚಪ್ಪಲಿ ಹೊಲೆಯುವ ಕೆಲಸ ಆರಂಭಿಸಿದ ವೃದ್ಧ ನಂಜುಡಪ್ಪ

ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಭಾಗಗಳಲ್ಲಿ ಕನಿಷ್ಠ ತಾಪಮಾನವು ದಾಖಲಾಗಲಿದೆ. ಅಂದರೆ, ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ. ಇನ್ನು ಮೀನುಗಾರಿಕೆಗೆ ತೆರಳುವವರಿಗೆ ಯಾವುದೇ ಮುನ್ಸೂಚನೆಯಿಲ್ಲ. ಉತ್ತರ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹಗುರದಿಂದ ಮಳೆಯಾಗಲಿದ್ದು, ಮೀನುಗಾರರಿಗೆ ಆತಂಕವಿಲ್ಲ ಎಂದು ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ  ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ. 

ಸರ್ಕಾರಿ ಆಸ್ಪತ್ರೆಗಳಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಹುದ್ದೆ ಖಾಲಿ: ಸುಮೊಟೊ ಪಿಐಎಲ್‌ ದಾಖಲಿಸಿಕೊಂಡ ಹೈಕೋರ್ಟ್‌

ಇನ್ನು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ನಿಗಾ ಕೇಂದ್ರ (ಕೆಎಸ್ಎನ್ ಡಿಎಂಸಿ) ಉಪಗ್ರಹಾಧಾರಿತ ಮಳೆ ನಕ್ಷೆಯ ಮಾಹಿತಿಯಂತೆ ನ. 11ರಿಂದ 14ರವರೆಗೆ ರಾಜ್ಯದಲ್ಲಿ ಎಲ್ಲೂ ಮಳೆಯಾಗುವುದಿಲ್ಲ ಎಂದು ಹೇಳುತ್ತಿದೆ. ಆದರೆ, ನ. 15ರಂದು ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರಗಳಲ್ಲಿ ಮಳೆಯಾಗಲಿದ್ದು, ಅದರಲ್ಲೂ ವಿಶೇಷವಾಗಿ ಮೈಸೂರು, ಚಾಮರಾಜನಗರದಲ್ಲಿ ಗರಿಷ್ಠ 30 ಮಿ.ಮೀ. ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

PREV
Read more Articles on
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!