ಸಾಹುಕಾರ್‌ನ ಕಾಮಕಾಂಡ: 'ಜಾರಕಿಹೊಳಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿ'

By Kannadaprabha News  |  First Published Mar 5, 2021, 1:56 PM IST

ಅಧಿಕಾರ ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಬಳಸಿಕೊಳ್ಳುತ್ತಿರುವುದು ಶೋಚನೀಯ| ರಮೇಶ ಜಾರಕಿಹೊಳಿ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ| ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಬೇಕು: ರಾಷ್ಟ್ರ ಸಮಿತಿ ಪಕ್ಷ| 


ಹೊಸಪೇಟೆ(ಮಾ.05):  ಮಾಜಿ ಮಂತ್ರಿ ರಮೇಶ ಜಾರಕಿಹೊಳಿ ಅವರ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಪ್ರಕಟಿಸಿರುವ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷ ಚಂದ್ರಶೇಖರ ದೊಡ್ಡಮನಿ, ಪ್ರ. ಕಾರ್ಯದರ್ಶಿ ಪ.ಯ. ಗಣೇಶ, ಅಧಿಕಾರ ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಬಳಸಿಕೊಳ್ಳುತ್ತಿರುವುದು ಶೋಚನೀಯ ಎಂದು ಹೇಳಿದ್ದಾರೆ. 

Tap to resize

Latest Videos

ಬಳ್ಳಾರಿ: ಶಾರ್ಟ್‌ ಸರ್ಕ್ಯೂಟ್‌, ಲಕ್ಷಾಂತರ ಮೌಲ್ಯದ ಕಟ್ಟಿಗೆ, ಜೀನ್ಸ್‌ ಭಸ್ಮ

ಪ್ರಸ್ತುತ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸ್ವಾಗತಿಸುತ್ತದೆ ಹಾಗೂ ಅವರು ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
 

click me!