ಮೈಸೂರು: ದಸರಾ ಹಿನ್ನೆಲೆ ಮಾರ್ಗ ಬದಲಾವಣೆ ಎಲ್ಲೆಲ್ಲಿ..?

Published : Sep 25, 2019, 01:06 PM ISTUpdated : Sep 25, 2019, 01:51 PM IST
ಮೈಸೂರು: ದಸರಾ ಹಿನ್ನೆಲೆ ಮಾರ್ಗ ಬದಲಾವಣೆ ಎಲ್ಲೆಲ್ಲಿ..?

ಸಾರಾಂಶ

ದಸರಾ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹಲವು ಮಾರ್ಗಗಳ ಬದಲಾವಣೆ ಮಾಡಲಾಗಿದೆ. ಸಂಚಾರ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದ್ದು, ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ದಸರಾ ಮಹೋತ್ಸವದ ಸಂಬಂಧ ನಡೆಯುವ ವಿವಿಧ ಕಾರ್ಯಕ್ರಮಗಳ ಸ್ಥಳದ ಬಳಿಯೇ ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಮೈಸೂರು(ಸೆ.25): ದಸರಾ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸೆ.28 ರಿಂದ ಅ.8 ರವರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಅರಮನೆ ಸುತ್ತಮುತ್ತ ರಸ್ತೆಗಳು, ನ್ಯೂ ಸಯ್ಯಾಜಿರಾವ್‌ ರಸ್ತೆ, ಬಿ.ಎನ್‌. ರಸ್ತೆ, ಬನುಮಯ್ಯ ರಸ್ತೆ, ತ್ಯಾಗರಾಜ ರಸ್ತೆ, ಕೆಆರ್‌ಬಿ ರಸ್ತೆಗಳಲ್ಲಿ ಏಕ ಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ಸದರಿ ರಸ್ತೆಗಳ ಬದಿಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ನಿಷೇಧಿಸಲಾಗಿದೆ. ಕೆಎಸ್‌ಆರ್‌ಟಿಸಿ ಗ್ರಾಮಾಂತರ ಬಸ್‌ಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಅ.7 ಮತ್ತು 8 ರಂದು ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ನಗರದ ಹೊರ ಭಾಗದಲ್ಲಿ ತಾತ್ಕಾಲಿಕ ಬಸ್‌ ನಿಲ್ದಾಣದ ವ್ಯವಸ್ಥೆ ಮಾಡಲಾಗುವುದು.

ಈ ಸರ್ಕಾರಿ ಕಂಪನಿ ಎಲ್ಲಾ ನೌಕರರಿಗೂ ದಸರಾಗೆ ತಲಾ 1 ಲಕ್ಷ ರು. ಬೋನಸ್‌!

ಸಾರ್ವಜನಿಕರ ಅನುಕೂಲಕ್ಕಾಗಿ ದಸರಾ ಮಹೋತ್ಸವದ ಸಂಬಂಧ ನಡೆಯುವ ವಿವಿಧ ಕಾರ್ಯಕ್ರಮಗಳ ಸ್ಥಳದ ಬಳಿಯೇ ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಸೆ.29 ರಂದು ದಸರಾ ಉದ್ಘಾಟನೆ ಸಮಯದಲ್ಲಿ ಚಾಮುಂಡಿಬೆಟ್ಟಕ್ಕೆ ಮುಖ್ಯಮಂತ್ರಿಗಳು ಆಗಮಿಸುವ ಮತ್ತು ತೆರಳುವ ಸಮಯದಲ್ಲಿ ಜೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಲಾಗುತ್ತದೆ. ಈ ಸಮಯದಲ್ಲಿ ಸಾರ್ವಜನಿಕರ ವಾಹನಗಳು ಚಾಮುಂಡಿಬೆಟ್ಟಕ್ಕೆ ತೆರಳಲು ಮತ್ತು ಹಿಂತಿರುಗುವುದನ್ನು ನಿರ್ಬಂಧಿಸಲಾಗುವುದು ಎಂದು ಪೊಲೀಸ್‌ ಆಯುಕ್ತ ಕೆ.ಟಿ. ಬಾಲಕೃಷ್ಣ ತಿಳಿಸಿದರು.

ಮೈಸೂರು ದಸರಾ: KSRTCಯಿಂದ ವಿಶೇಷ ಪ್ರವಾಸ ಪ್ಯಾಕೇಜ್..ಮಿಸ್ ಮಾಡ್ಕೊಬೇಡಿ

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ