SAKALA Service : ಸಕಾಲ ವಿಲೇವಾರಿ ಚಿಕ್ಕಬಳ್ಳಾಪುರಕ್ಕೆ ರಾಜ್ಯದಲ್ಲಿ ದ್ವಿತೀಯ ಸ್ಥಾನ

By Kannadaprabha News  |  First Published Dec 7, 2021, 6:18 AM IST
  • ಸಕಾಲ ವಿಲೇವಾರಿ : ಜಿಲ್ಲೆಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ
  •  58,724 ಅರ್ಜಿ ಸಕಾಲ ಯೋಜನೆಯಡಿ ಸ್ವೀಕರಿಸಿ, 59,191 ಅರ್ಜಿ ವಿಲೇವಾರಿ
     

 ಚಿಕ್ಕಬಳ್ಳಾಪುರ(ಡಿ.07):  ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ (Publics)  ಅರ್ಜಿಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ (larnataka govt)  ಜಾರಿಗೆ ತಂದಿರುವ ಸಕಾಲ ಯೋಜನೆಯ ನವೆಂಬರ್‌ ತಿಂಗಳ ಪ್ರಗತಿಯ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಕಳೆದ ನವೆಂಬರ್‌ ತಿಂಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ನವೆಂಬರ್‌ ಮಾಹೆಯಲ್ಲಿ ಒಟ್ಟು 58,724 ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ, ಈ ಪೈಕಿ 59,191 ಅರ್ಜಿಗಳನ್ನು ಸಕಾಲ ನಿಯಮಗಳನ್ವಯ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ. 3,620 ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕೃತಗೊಂಡಿವೆ. 2,026 ಅರ್ಜಿಗಳು ವಿಲೇವಾರಿಯಾಗುವುದು ಬಾಕಿಯಿದೆ.

ಪಾರದರ್ಶಕ ಆಡಳಿತಕ್ಕೆ ಸಹಕಾರಿ

Tap to resize

Latest Videos

ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿಯಾಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ (Govt Office) ಪದೇ ಪದೇ ಅಲೆಯುವುದು ತಪ್ಪುತ್ತದೆ. ಜೊತೆಗೆ ಆಡಳಿತವೂ ಪಾರದರ್ಶಕವಾಗಿ ನಡೆಯಲು ಈ ಯೋಜನೆ ಸಹಕಾರಿಯಾಗಿದೆ. ಸಕಾಲ (sakala) ಯೋಜನೆ ಪ್ರಗತಿಯ ನವೆಂಬರ್‌ ಮಾಹೆಯಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದುಕೊಂಡಿರುವುದು ಸಂತಸ ತಂದಿದೆ ಡೀಸಿ ಆರ್‌.ಲತಾ ಹೇಳಿದರು.

ಇ-ಕ್ಷಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ಜಿಲ್ಲೆಯು 2021ರ ನವೆಂಬರ್‌ ಮಾಹೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿ ರಾಜ್ಯ ಮಟ್ಟದ ಪಟ್ಟಿಯಲ್ಲಿ ತೃತೀಯ ಸ್ಥಾನ ಗಳಿಸಿರುವುದಕ್ಕೆ ಅಟಲ್‌ ಜೀ ಜನ ಸ್ನೇಹಿ ನಿರ್ದೇಶನಾಲಯದ ನಿರ್ದೇಶಕರಾದ ಗಂಗೂಬಾಯಿ ರಮೇಶ್‌ ಮಾನಕರ ಅವರು ಜಿಲ್ಲಾಡಳಿತವನ್ನು ಶ್ಲಾಘಿಸಿ, ಜಿಲ್ಲಾಧಿಕಾರಿ ಆರ್‌.ಲತಾಗೆ ಅಭಿನಂದನಾ ಪತ್ರವನ್ನು ಬರೆದು ಇದೇ ಉತ್ಸಾಹವನ್ನು ಮುಂದುವರೆಸಿಕೊಂಡು ಹೋಗುವಂತೆ ಪ್ರೋತ್ಸಾಹಿಸಿದ್ದಾರೆ.

ಇ-ಕ್ಷಣ ತಂತ್ರಾಂಶದಲ್ಲಿ ಶೇ.35ರಷ್ಟುಸಾಧನೆ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ (Certificates)  ಹಾಗೂ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರಗಳನ್ನು ಪಡೆಯಲು ತಾಲೂಕು ಕಚೇರಿಗಳಲ್ಲಿ ಸಾಲುಗಟ್ಟಿನಿಲ್ಲುವ ವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ ಎನ್‌ಐಸಿ ಮತ್ತು ಅಟಲ್‌ ಜೀ ಜನ ಸ್ನೇಹಿ ನಿರ್ದೇಶನಾಲಯದ ಹಾಗೂ ಭೂಮಿ ಉಸ್ತುವಾರಿ ಕೋಶದ ತಾಂತ್ರಿಕ ತಜ್ಞರ ಸಹಾಯದಿಂದ ಇ-ಕ್ಷಣ ತಂತ್ರಾಂಶವನ್ನು ರೂಪಿಸಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರಗಳನ್ನು ಯಾವುದೇ ಕಾಲ ವಿಳಂಬವಿಲ್ಲದೆ ತುರ್ತಾಗಿ ಪಡೆಯಲು ಸರ್ಕಾರ ವಿನೂತನ ವ್ಯವಸ್ಥೆಯನ್ನು ರೂಪಿಸಿದೆ. ಇ-ಕ್ಷಣ ತಂತ್ರಾಂಶದಲ್ಲಿ ಜಿಲ್ಲೆಯು ಶೇ.35 ರಷ್ಟುಸಾಧನೆಯನ್ನು ಮಾಡಿ ತೃತೀಯ ಸ್ಥಾನ ಗಳಿಸಿ ಉತ್ತಮ ಸಾಧನೆ ಗೈದಿದೆ.

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ : 

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ (Paddy)  ಮಾರಾಟ ಮಾಡಲು ಇಚ್ಚಿಸುವ ಜಿಲ್ಲೆಯ ಆಸಕ್ತ ರೈತರ (Farmers)  ನೋಂದಣಿ ಪ್ರಕ್ರಿಯೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಸಿದ್ದು, ಆಸಕ್ತ ರೈತರು ಬಾಗೇಪಲ್ಲಿ ಮತ್ತು ಗೌರಿಬಿದನೂರು ತಾಲೂಕು ಕೇಂದ್ರದಲ್ಲಿ ತೆರೆದಿರುವ ಭತ್ತ ಖರೀದಿ ಕೇಂದ್ರಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ (DC) ಆರ್‌.ಲತಾ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (Support Price) ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ ಗೆ 1,940 ಹಾಗೂ ಗ್ರೇಡ್‌-ಎ ಭತ್ತಕ್ಕೆ 1,960 ರು. ನಿಗದಿಗೊಳಿಸಲಾಗಿದೆ ಎಂದರು.

2 ಕಡೆ ಖರೀದಿ ಕೇಂದ್ರ:

ಸರ್ಕಾರದ ಸೂಚನೆಯಂತೆ 2021-22ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಆಸಕ್ತ ರೈತರಿಂದ (Farmers) ಭತ್ತವನ್ನು ಖರೀದಿಸಲು ನಿರ್ಧರಿಸಲಾಗಿದೆ.. ಸರ್ಕಾರವು ನಿಗದಿಪಡಿಸಿರುವ ಗುಣಮಟ್ಟಕ್ಕೆ ಅನುಗುಣವಾಗಿ ಭತ್ತವನ್ನು ನೀಡಲು ಇಚ್ಚೆಯನ್ನು ವ್ಯಕ್ತಪಡಿಸುವ ಜಿಲ್ಲೆಯ ರೈತರ (Farmers) ನೊಂದಣೆ ಕಾರ್ಯವನ್ನು ಇಂದಿನಿಂದ ಪ್ರಾರಂಭಿಸಲಾಗಿದೆ. ಜಿಲ್ಲೆಯ ಬಾಗೇಪಲ್ಲಿ ಮತ್ತು ಗೌರಿಬಿದನೂರು ತಾಲೂಕಿನಲ್ಲಿ ಭತ್ತವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಬಾಗೇಪಲ್ಲಿ ತಾಲ್ಲೂಕಿನಲ್ಲಿ 1,896 ಹೆಕ್ಟೇರ್‌ ಮತ್ತು ಗೌರಿಬಿದನೂರು ತಾಲ್ಲೂಕಿನಲ್ಲಿ 353 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತವನ್ನು ಬೆಳೆಯಲಾಗುತ್ತಿದೆ ಎಂದರು.

ಜಿಲ್ಲೆಯ ಇನ್ನುಳಿದ ತಾಲೂಕುಗಳಲ್ಲಿ ಅಲ್ಪ ಪ್ರಮಾಣದಲ್ಲಿ ಭತ್ತ ಬೆಳೆಯುವುದರಿಂದ ಆ ತಾಲೂಕುಗಳನ್ನು  ಹೊರತು ಪಡಿಸಿ ಬಾಗೇಪಲ್ಲಿ ಮತ್ತು ಗೌರಿಬಿದನೂರು ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಆಸಕ್ತ ರೈತರು ಆಧಾರ್‌ ಮತ್ತು ದಾಖಲೆಗಳ ಪ್ರತಿಯೊಂದಿಗೆ ಕೇಂದ್ರಗಳನ್ನು ಸಂಪರ್ಕಿಸಿ ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಬಹುದು. ಜಿಲ್ಲೆಯ ಹೆಚ್ಚಿನ ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ

click me!