ಕಳೆದ ನಾಲ್ಕೂವರೆ ವರ್ಷಗಳಿಂದ ಪಕ್ಷ ಹಾಗೂ ಕ್ಷೇತ್ರದ ಕಾರ್ಯಕರ್ತರನ್ನು ಮರೆತಿದ್ದ ನಾಯಕರ ಧೋರಣೆಯನ್ನು ಖಂಡಿಸಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ನಗರಸಭೆ ಸದಸ್ಯ ಆರ್.ಮಟಮಪ್ಪ ತಿಳಿಸಿದರು.
ಚಿಕ್ಕಬಳ್ಳಾಪುರ : ಕಳೆದ ನಾಲ್ಕೂವರೆ ವರ್ಷಗಳಿಂದ ಪಕ್ಷ ಹಾಗೂ ಕ್ಷೇತ್ರದ ಕಾರ್ಯಕರ್ತರನ್ನು ಮರೆತಿದ್ದ ನಾಯಕರ ಧೋರಣೆಯನ್ನು ಖಂಡಿಸಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ನಗರಸಭೆ ಸದಸ್ಯ ಆರ್.ಮಟಮಪ್ಪ ತಿಳಿಸಿದರು.
ನಗರದಲ್ಲಿ ಈ ಕುರಿತು ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆ ಬಳಿಕ ಪಕ್ಷ ಸಂಘಟನೆಯನ್ನು ಮರೆತಿದ್ದ ನಾಯಕರ ನಿರ್ಲಕ್ಷ್ಯ ಧೋರಣೆಯಿಂದ ಕ್ಷೇತ್ರದ ಗ್ರಾ.ಪಂ, ತಾ.ಪಂ ಹಾಗೂ ಜಿ.ಪಂ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸುವಂತಾಗಿತ್ತು. ಆದರೆ ಇದೀಗ ಚುನಾವಣೆ ಸಮೀಪಿಸುದ್ದಂತೆ ಮತ್ತೆ ಕ್ಷೇತ್ರ ಪರ್ಯಟನೆ ಮಾಡುತ್ತಿರುವುದು ಸರಿಯಲ್ಲ ಎಂದು ಪರೋಕ್ಷವಾಗಿ ಮಾಜಿ ಶಾಸಕ ಕೆ,ಪಿ.ಬಚ್ಚೇಗೌಡ ವಿರುದ್ದ ಆರೋಪಿಸಿದರು.
ಜೆಡಿಎಸ್ ಕಳೆದ ನಾಲ್ಕೂವರೆ ವರ್ಷಗಳಿಂದ ಕಚೇರಿಗೆ ಸೀಮಿತವಾಗಿತ್ತು. ತಾಲೂಕಿನ ನಿಷ್ಠಾವಂತ ಕಾರ್ಯಕರ್ತರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ಗೋಜಿಗೆ ಕ್ಷೇತ್ರದ ನಾಯಕರು ಮುಂದಾಗಿಲ್ಲ. ಇದರಿಂದ ಬೇಸತ್ತು ಹಲವು ಪಕ್ಷವನ್ನು ತೊರೆದ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಸದೃಢವಾಗಿದ್ದ ಪಕ್ಷವು ಇಂದು ಶಕ್ತಿ ಕಳೆದುಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಲದೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಮನವಿ ನಿರ್ಲಕ್ಷಿಸಿ ತಮನ್ನು ಕಡೆಗಣಿಸಲಾಗಿತ್ತು. ಮುಂಬರುವ ಚುನಾವಣೆಯ ಬಳಿಕವೂ ಪ್ರಸ್ತುತ ಕ್ಷೇತ್ರ ಪರ್ಯಟನೆಯಲ್ಲಿರುವ ನಾಯಕರು ನಾಪತ್ತೆಯಾದಲ್ಲಿ ಕಾರ್ಯಕರ್ತರ ಬೆಂಬಲವಾಗಿ ನಿಲ್ಲುವವರು ಯಾರೂ ಇರುವುದಿಲ್ಲ ಎಂದು ತಮ್ಮ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಹೇಳಿದರು.
ಜೆಡಿಎಸ್ ಅಧಿಕಾರಕ್ಕೆ ಬರಲ್ಲ
ಗುರುಮಠಕಲ್ (ಮಾ.26): ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್ ಕಾರ್ಯಕರ್ತರು ತಮ್ಮ ಮತ ವ್ಯರ್ಥ ಮಾಡಿಕೊಳ್ಳಬಾರದು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಡಿ.ಕೆ.ಶಿವಕುಮಾರ್ ಹೇಳಿದರು. ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ನೂತನ ಕಾಂಗ್ರೆಸ್ ಕಚೇರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ಬಿಜೆಪಿ ಒಂದು ಸಲ ಮುಖ್ಯಮಂತ್ರಿ ಅವಕಾಶ ನೀಡಿದರು. ನಾವು ಸಹ ನೀಡಿದ್ದೇವು. ಆದರೆ, ನಿಭಾಯಿಸಿಕೊಂಡು ಹೋಗಲು ಅವರಿಂದ ಆಗಲಿಲ್ಲ. ಮುಂದೆಯು ಅಧಿಕಾರಕ್ಕೆ ಬರುವುದಿಲ್ಲ ಎಂದರು. ಗುರುಮಠಕಲ್ ಮತ್ತೆ ಕಾಂಗ್ರೆಸ್ ಭದ್ರಕೋಟೆ ಆಗುವಂತೆ ಮಾಡಿ ಡಾ. ಮಲ್ಲಿಕಾರ್ಜುನ ಖರ್ಗೆಗೆ ಶಕ್ತಿ ನೀಡಬೇಕು. ಅವರ ಕೈ ಬಲಪಡಿಸಬೇಕು.
ಗೆಲುವಿನ ಕಾಣಿಕೆಯಾಗಿ ಕೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಖರ್ಗೆ ಅವರ ಋುಣ ತೀರಿಸಲು ನೀವು ಮುಂದಾಗಬೇಕು. ಅವರು ಗುರುಮಠಕಲ್ ಕ್ಷೇತ್ರಕ್ಕೆ ಯಾವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕು. ಆ ರೀತಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಬರಲು ಗುರುಮಠಕಲ್ ಕ್ಷೇತ್ರದಲ್ಲಿ ಜನರು ಅವರಿಗೆ ವಿಶ್ವಾಸ ತುಂಬಬೇಕು ಎಂದರು. ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರದಿಂದ ಕೂಡಿದೆ. ಇದರಿಂದ ರಾಜ್ಯದ ಜನರಿಗೆ ಒಳ್ಳೆಯದಾಗಲು ಪ್ರಿಯಾಂಕಾ ಗಾಂಧಿ ಇಲ್ಲಿನ ಹೆಣ್ಣು ಮಕ್ಕಳಿಗೆ ಆರ್ಥಿಕ ಸಹಾಯವಾಗಲು 2000 ರು.ಗಳು ನೀಡಲು ಹೇಳಿದ್ದಾರೆ ಮತ್ತು ನಮ್ಮ ನಾಯಕ ರಾಹುಲ್ ಗಾಂಧಿ ಸಲಹೆಯಂತೆ ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ 4000 ರು.ಗಳು ನೀಡಲು ಹೇಳಿದ್ದಾರೆ. ಉಚಿತ ವಿದ್ಯುತ್ ಕೊಡಲಾಗುವುದು ಎಂದು ಕಾಂಗ್ರೆಸ್ ಗ್ಯಾರಂಟಿ ಕುರಿತು ಮಾಹಿತಿ ನೀಡಿದರು.
ರಾಹುಲ್ ಗಾಂಧಿ ಒಪ್ಪಿದರಷ್ಟೇ 2 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ?
ರಾಹುಲ್ ಧ್ವನಿ ಹತ್ತಿಕ್ಕಲು ಬಿಜೆಪಿ ಯತ್ನ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕೆ ಕಾಂಗ್ರೆಸ್ ಹೆದರುವುದಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ನಡೆದ ನೂತನ ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರದಿಂದ ಕೂಡಿದೆ. ರಾಜ್ಯದ ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಸಲಹೆಯಂತೆ 2000 ರು. ಹಾಗೂ ನಿರುದ್ಯೋಗಿ ಯುವಕರಿಗೆ ರಾಹುಲ್ ಗಾಂಧಿ ಸಲಹೆಯಂತೆ 4000 ರು. ನೀಡಲಾಗುವುದು. ಅಲ್ಲದೆ, ಉಚಿತ ವಿದ್ಯುತ್ ಕೊಡಲಾಗುವುದು ಎಂದು ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿದರು.
ಬೊಮ್ಮಾಯಿ, ಎಚ್‌ಡಿಕೆ, ಅಶೋಕ್, ಈಶ್ವರಪ್ಪ, ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿ ಇನ್ನೂ ಘೋಷಣೆ ಇಲ್ಲ!
ಗುರುಮಠಕಲ್ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಭದ್ರಕೋಟೆ ಆಗುವಂತೆ ಮಾಡಿ ಡಾ.ಮಲ್ಲಿಕಾರ್ಜುನ ಖರ್ಗೆಗೆ ಶಕ್ತಿ ನೀಡಬೇಕು. ಖರ್ಗೆ ಅವರ ಋುಣ ತೀರಿಸಲು ನೀವು ಮುಂದಾಗಿ, ಗೆಲುವಿನ ಕಾಣಿಕೆ ಕೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಜೆಡಿಎಸ್ ಅಧಿಕಾರಕ್ಕೆ ಬರಲ್ಲ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್ ಕಾರ್ಯಕರ್ತರು ತಮ್ಮ ಮತ ವ್ಯರ್ಥ ಮಾಡಿಕೊಳ್ಳಬಾರದು ಎಂದ ಅವರು, ಕುಮಾರಸ್ವಾಮಿ ಅವರನ್ನು ಬಿಜೆಪಿ ಒಂದು ಸಲ ಮುಖ್ಯಮಂತ್ರಿಯಾಗಲು ಅವಕಾಶ ನೀಡಿದರು. ನಾವೂ ಸಹ ನೀಡಿದ್ದೆವು. ಆದರೆ, ನಿಭಾಯಿಸಿಕೊಂಡು ಹೋಗಲು ಅವರಿಂದ ಆಗಲಿಲ್ಲ. ಮುಂದೆಯೂ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದರು.