ಚಿಕ್ಕಮಗಳೂರು: ಸಿಇಟಿ ಪರೀಕ್ಷೆ ಬರೆಯಲು ಬಂದವರಿಗೆ ಶಾಕ್, ಮೂಗುತಿ ತೆಗೆಯಲಾಗದ ವಿದ್ಯಾರ್ಥಿನಿಯರಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ!

Published : Apr 23, 2026, 12:00 PM IST
 Chikkamagaluru CET Staff use gum tape on female students nose ring

ಸಾರಾಂಶ

ಚಿಕ್ಕಮಗಳೂರಿನ MES ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ, ಮೂಗುತಿ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಸಿಬ್ಬಂದಿ ಗಮ್ ಟೇಪ್ ಅಂಟಿಸಿ ಒಳಗೆ ಕಳುಹಿಸಿದ್ದಾರೆ. ಪರೀಕ್ಷಾ ಅಕ್ರಮ ತಡೆಯುವ ಕಟ್ಟುನಿಟ್ಟಿನ ಕ್ರಮಗಳ ಭಾಗವಾಗಿ ಈ ಘಟನೆ ನಡೆದಿದೆ.

ಚಿಕ್ಕಮಗಳೂರು (ಏ.23): ಕಾಫಿನಾಡಿನ ಸಿಇಟಿ ಪರೀಕ್ಷಾ ಕೇಂದ್ರವೊಂದರಲ್ಲಿ ಇಂದು ಅಚ್ಚರಿಯ ಘಟನೆಯೊಂದು ನಡೆದಿದೆ. ಭವಿಷ್ಯದ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ನೂರಾರು ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರವೇಶ ದ್ವಾರದಲ್ಲೇ ಸಿಬ್ಬಂದಿ ಶಾಕ್ ನೀಡಿದ್ದಾರೆ.

ನಗರದ MES ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಮೂಗುತಿ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರ ಮೂಗುತಿಗೆ ಸಿಬ್ಬಂದಿ ಗಮ್ ಟೇಪ್ ಅಂಟಿಸಿ ಪರೀಕ್ಷಾ ಕೊಠಡಿಯೊಳಗೆ ಕಳುಹಿಸಿದ್ದಾರೆ. ಮೂಗುತಿ ತೆಗೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯರಿಗೆ ಈ ರೀತಿ ಗಮ್ ಟೇಪ್ ಅಂಟಿಸಿ ಕಳಿಸಿರುವ ಸಿಬ್ಬಂದಿ.

ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ:

ರಾಜ್ಯಾದ್ಯಂತ ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಡಿಜಿಟಲ್ ವಾಚ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದ್ದು, ಪ್ರತಿಯೊಬ್ಬ ಪರೀಕ್ಷಾರ್ಥಿಯನ್ನು ತೀವ್ರ ತಪಾಸಣೆ ನಡೆಸಿಯೇ ಒಳಗೆ ಬಿಡಲಾಗುತ್ತಿದೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗಿದೆ. ಕೇವಲ ಹಾಲ್ ಟಿಕೆಟ್ ಮತ್ತು ಗುರುತಿನ ಚೀಟಿ ಪರಿಶೀಲಿಸಿ ಸಿಬ್ಬಂದಿ ವಿದ್ಯಾರ್ಥಿಗಳನ್ನು ಒಳಗೆ ಬಿಡುತ್ತಿದ್ದು, ಪರೀಕ್ಷಾ ಕೇಂದ್ರದ ಮುಂದೆ ವಿದ್ಯಾರ್ಥಿಗಳ ಕಣ್ಣಲ್ಲಿ ಆತಂಕ ಮನೆ ಮಾಡಿದೆ.

PREV
Read more Articles on
click me!

Recommended Stories

ತೀವ್ರ ವಿರೋಧದ ಬೆನ್ನಲ್ಲೇ ಧಾರವಾಡ ಆಕಾಶವಾಣಿ ಪ್ರಾದೇಶಿಕ ಸುದ್ದಿ ವಿಭಾಗ ಸ್ಥಳಾಂತರ ಮತ್ತೆ ರದ್ದು
ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ , ಸಿಲ್ಕ್ ಬೋರ್ಡ್‌ನ ಟ್ರಾಫಿಕ್ ಕಥೆಗೆ ಹೊಸ ತಿರುವು!