ಚಿಕ್ಕಮಗಳೂರು ನಗರದಲ್ಲಿರುವ ಇಂದಿರಾ ಕ್ಯಾಂಟಿನ್ ಗೆ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ದಿಢೀರ್ ಭೇಟಿ ನೀಡಿ ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಜೂ.27): ಚಿಕ್ಕಮಗಳೂರು ನಗರದಲ್ಲಿರುವ ಇಂದಿರಾ ಕ್ಯಾಂಟಿನ್ ಗೆ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಟೀನ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಡವರಿಗೆ ಕಡಿಮೆ ದರದಲ್ಲಿ ತಿಂಡಿ ಮತ್ತು ಊಟಗಳು ದೊರೆಯಬೇಕೆಂಬುದು ಸರ್ಕಾರದ ಆಶಯವೆಂದು ಹೇಳಿದರು.
undefined
ಇಂದಿರಾ ಕ್ಯಾಟೀನ್‌ನಲ್ಲಿ ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲಿಸಲು ಸರ್ಕಾರ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕ್ಯಾಂಟೀನ್ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಮೊನ್ನೆ ಕಡೂರು ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಭೇಟಿನೀಡಿ ಪರಿಶೀಲಿಸಿದ್ದು, ಸ್ವಚ್ಚತೆಯಲ್ಲಿ ಕೊರತೆ ಉಂಟಾಗಿತ್ತು. ಸಣ್ಣ,ಪುಟ್ಟ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಲಾಗಿದೆ ಎಂದರು.
ವಿರೋಧಕ್ಕೆ ಡೋಂಟ್ ಕ್ಯಾರ್, ಮಂಗಳೂರು ವಿವಿ ಕಾಲೇಜಿಗೆ ಹಿಂದೂ ಮುಖಂಡ ಅತಿಥಿ!
ಜನರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ:
ನಗರದಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಭೇಟಿಕೊಟ್ಟಂತಹ ಸಮಯದಲ್ಲಿ ಗ್ರಾಹಕರನ್ನು ವಿಚಾರಿಸಿ ಅವರಿಂದ ಮಾಹಿತಿ ಪಡೆದುಕೊಂಡರು. ತಿಂಡಿ, ಊಟ ಉತ್ತಮ ಎನ್ನುವ ಅಭಿಪ್ರಾಯ ಗ್ರಾಹಕರಿಂದ ವ್ಯಕ್ತವಾಯಿತು ಎಂದರು.ಈ ಕ್ಯಾಂಟೀನ್ ಹಿಂಭಾಗದಲ್ಲಿರುವ ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕೆ ತೆರದಿಡದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಪರಿಶೀಲಿಸಿದಾಗ ಬೀಗ ಹಾಕಿರುವುದು ಕಂಡು ಬಂದಿದೆ. ವಿಚಾರಿಸಿದಾಗ ಸಾರ್ವಜನಿಕರು ಶೌಚಾಲಯ ಬಳಸುತ್ತಾರೆಂದು ಹೇಳಿದ್ದಾರೆ. ಊಟದ ಟೋಕನ್ ಪಡೆದವರು ಮಾತ್ರ ಶೌಚಾಲಯ ಬಳಸುವಂತೆ ತಿಳಿಸಲಾಗಿದೆಎಂದುಹೇಳಿದರು.
ಬಯಲುಸೀಮೆ ಬುಡಕಟ್ಟು ಸಮುದಾಯದಿಂದ ಜೋಡೆತ್ತುಗಳ ಎತ್ತಿಗಾಡಿ ಓಟ ಸ್ಪರ್ಧೆ, ರೈತರ
ನಗರದಲ್ಲಿ ಮತ್ತೊಂದು ಇಂದಿರಾ ಕ್ಯಾಂಟೀನ್ ?
ಅಗತ್ಯತೆ ಕಂಡು ಬಂದರೆ ನಗರದಲ್ಲಿ ಮತ್ತೊಂದು ಇಂದಿರಾ ಕ್ಯಾಂಟೀನ್ ತೆರೆಯುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಆಗಾಗ್ಗೆ ಇಂದಿರಾ ಕ್ಯಾಂಟೀನ್ಗೆ ಭೇಟಿನೀಡಿ ಪರಿಶೀಲಿಸುವಂತೆ ತಹಸೀಲ್ದಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಗುಣಮಟ್ಟದ ಆಹಾರ ನೀಡುವಂತೆ ಇಂದಿರಾ ಕ್ಯಾಂಟೀನ್ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಇದನ್ನು ಪಾಲಿಸದಿದ್ದರೆ ಅಂತಹ ಕ್ಯಾಟೀನ್ಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಎಚ್ಚರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಉಮೇಶ್, ಆರೋಗ್ಯ ನಿರೀಕ್ಷಕ ರಂಗಪ್ಪ,ಯೋಜನಾ ನಿರ್ದೇಶಕ ವೀರೇಶ್, ಇಂದಿರಾ ಕ್ಯಾಂಟೀನ್ ವ್ಯವಸ್ಥಾಪಕ ಕೃಷ್ಣೇಗೌಡ ಮತ್ತಿತರರು ಇದ್ದರು.