ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ

By Suvarna News  |  First Published May 30, 2022, 10:06 PM IST

* ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್‌ಗೆ ಮಸಿ, ಹಲ್ಲೆ ಪ್ರಕರಣ
* ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಖಂಡಿಸಿ  ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
* ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ 


ಚಿಕ್ಕಮಗಳೂರು, (ಮೇ.30) :ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸದ್ದು ಮಾಡಿರುವ  ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ ಘಟನೆಯನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತಸಂಘ, ಹಾಗೂ ವಿವಿಧ ಪಕ್ಷ ಒಳಗೊಂಡಂತೆ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. 

ರಾಷ್ಟ್ರಮಟ್ಟದ ಪ್ರತಿಭಟನೆ ನಡೆಸಿ ದೇಶದ ಗಮನ ಸೆಳೆದಿರುವ ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆಗೆ ಯತ್ನಿಸಿರುವ ಘಟನೆ ಖಂಡಿಸಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಇಂದು ಪ್ರಗತಿಪರ ಸಂಘಟನೆ , ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನೆ ನಡೆಸಿದರು. 

Tap to resize

Latest Videos

ರಾಕೇಶ್ ಟಿಕಾಯತ್‌ಗೆ ಮಸಿ, ಹಲ್ಲೆ: ಭಾರತ ರಕ್ಷಣಾ ವೇದಿಕೆ ಅಧ್ಯಕ್ಷ ಅರೆಸ್ಟ್

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕರಾಳ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ದೊಡ್ಡ ಚಳವಳಿ ನಡೆಸಿದ್ದರು. ಅವರ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ನಡೆಸಿ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ಎಂದು ಪ್ರತಿಭಟನಾನಿತರು ಆರೋಪಿಸಿದರು. ಯಾರೇ ತಪ್ಪಿತಸ್ಥರಾಗಿದ್ದರು, ಎಷ್ಟೇ ಬಲಶಾಲಿಗಳಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಕ್ರಿಮಿನಲ್ ಕೇಸ್ ದಾಖಲಿಸಿ ಗಡೀಪಾರು ಮಾಡಬೇಕೆಂದು ಪ್ರತಿಭಟನಾನಿತರು ಒತ್ತಾಯಿಸಿದರು.ರೈತ ನಾಯಕರ ಮೇಲಿನ ಹಲ್ಲೆ ಬಿಜೆಪಿ ಗೂಂಡಾ ಸಂಸ್ಕೃತಿಯನ್ನು ಬಿಂಬಿಸುತ್ತದೆ. ರಾಷ್ಟ್ರಮಟ್ಟದ ನಾಯಕನಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವೈಫಲ್ಯಕಂಡಿದ್ದು ನೈತಿಕ ಹೊಣೆ ಹೊತ್ತು ಕೂಡಲೇ ಗೃಹಸಚಿವರು ಹಾಗೂ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ಮುಖಂಡರು ಆಗ್ರಹಿಸಿದರು.

ಶಾಂತಿಯ ತೋಟ ಅದಕ್ಕೆ ಮಸಿ ಬಳಿಯುವ ಕೆಲಸ
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಮಾತನಾಡಿ ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ ಎನ್ನುವಂತಿದೆ. ಅದಕ್ಕೆ ಮಸಿ ಬಳಿಯುವ ಕೆಲಸವನ್ನು ಕೆಲವು ಕಿಡಿಗೇಡಿಗಳು ಮಾಡಿದ್ದಾರೆ. ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಟಿ ನಡೆಸುತ್ತಿದ್ದ ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮತ್ತು ಯದುವೀರ್ ಸಿಂಗ್ ಅವರ ಮೇಲೆ ಕೆಲವು ಗೂಂಡಾಗಳು ಮಸಿ ಬಳಿದು ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಹೆಚ್ ಹೆಚ್ ದೇವರಾಜ್ , ಕೆ ಟಿ ರಾಧಕೃಷ್ಣ ರವೀಶ್ ಕ್ಯಾತನಬೀಡು, ಮಹೇಶ್, ಮರ್ಲೆ ಅಣ್ಣಯ್ಯ, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

click me!