ಮಾಜಿ ಪ್ರಧಾನಿ ಇಂದಿರಾಗಾಂಧಿಗೆ ರಾಜಕೀಯ ಮರುಹುಟ್ಟು ನೀಡಿದ ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ಅವರು ಚಿಕ್ಕಮಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಚಿಕ್ಕಮಗಳೂರು (ನ.07): ದೇಶದ ರಾಜಕಾರಣದಲ್ಲಿ ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರಿಗೆ ಕರ್ನಾಟಕದಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟು ಅವರ ಗೆಲುವಿಗೆ ಹಾಗೂ ರಾಜಕೀಯ ಮರುಹುಟ್ಟು ನೀಡಲು ಕಾರಣವಾಗಿದ್ದ ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ (87) ವಿಧಿವಶರಾಗಿದ್ದಾರೆ.
ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರಿಗೆ ಎಂಭತ್ತೇಳು ವರ್ಷವಾಗಿದ್ದು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಂಗ್ರೆಸ್‌ನ ಕಟ್ಟಾಳುವಾಗಿದ್ದ ಚಂದ್ರೇಗೌಡ ಅವರು ಬಹುದಿನಗಳಿಂದ ಹಾಸಿಗೆ ಹಿಡಿದಿದ್ದರು. ಇಂದು ಬೆಳಗ್ಗಿನ ಜಾವ ತಮ್ಮ ಸ್ವಗೃಹ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.
undefined
ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ: ಸಚಿವ ಸಂತೋಷ್ ಲಾಡ್
ಒಂದು ಕಾಲದಲ್ಲಿ ಕಾಂಗ್ರೆಸ್ ಕಟ್ಟಾಳು ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದ ಚಂದ್ರೇಗೌಡ ಅವರು ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಒಟ್ಆರೆ. ರಾಜ್ಯದಲ್ಲಿ 3 ಬಾರಿ ಶಾಸಕರು, 3 ಸಂಸದರು ಹಾಗೂ ಒಂದು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ರಾಜಕೀಯ ಮರು ಹುಟ್ಟು ನೀಡಲು ತಮ್ಮ ಸಂಸದ ಸ್ಥಾನಕ್ಕೆರಾಜೀನಾಮೆ ನೀಡಿದ ಡಿ.ಬಿ. ಚಂದ್ರೇಗೌಡ ಅವರು ಲೋಕಸಭೆಯಲ್ಲಿ ಪ್ರಸಿದ್ಧಿಯಾಗಿದ್ದರು.
ಕೆಎಎಸ್ ಅಧಿಕಾರಿ ಪ್ರತಿಮಾ ಕೊಲೆಗೈದ ಆರೋಪಿ ಕಿರಣ್, ಹಿಂದೊಮ್ಮೆ ಡಕಾಯಿತಿ ಕೇಸಲ್ಲಿ ಜೈಲು ಸೇರಿದ್ದ!
ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು.
ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು… pic.twitter.com/vkW0lPkVFj