ಚಿಕ್ಕಮಗಳೂರು (ಡಿ.02): ಕಳೆದ ಬಾರಿ ಚಿಕ್ಕಮಗಳೂರು(Chikkamagaluru) ವಿಧಾನಸಭಾ ಚುನಾವಣೆಯಲ್ಲಿ (Assembly Election) ಜೆಡಿಎಸ್‌ನಿಂದ (JDS) ಸ್ಪರ್ಧೆ ಮಾಡಿದ್ದ ಬಿ.ಎಚ್. ಹರೀಶ್ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಡಿ.3ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಕಾಂಗ್ರೆಸ್ ಮತದಾರರ ಸಮಾವೇಶದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದೇನೆ ಎಂದು ಬಿ.ಎಚ್. ಹರೀಶ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಂಗ್ರೆಸ್ ತತ್ತ್ವ, ಸಿದ್ಧಾಂತಗಳನ್ನು ಒಪ್ಪಿ ಸೇರ್ಪಡೆಗೊಳುತ್ತಿದ್ದೇನೆ. ಬಿಜೆಪಿಯ (bjp) ದುರಾಳಿತ ವ್ಯವಸ್ಥೆ ವಿರುದ್ಧವಾಗಿ ಹೋರಾಟ ನಡೆಸಲಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಎಂದು ನನಗನಿಸಿದೆ. ಬೆಂಬಲಿಗರು ಹಾಗೂ ರೈತರೊಂದಿಗೆ ಚರ್ಚಿಸಿ, ಸಲಹೆ, ಅಭಿಪ್ರಾಯ ಪಡೆದು ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ಹೇಳಿದರು.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ(JDS) ಸ್ಪರ್ಧಿಸಿದ್ದಾಗ 30 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಸಮೀಪದ ಸ್ಪರ್ಧಿಯಿಂದ ಸೋಲು ಅನುಭವಿಸಿದ್ದೆ. ರೈತನ ಮಗನಾಗಿದ್ದು, ರೈತರ (Farmers) ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇದೀಗ ಕಾಂಗ್ರೆಸ್ (Congress) ಸೇರ್ಪಡೆ ಒಳಿತು ಎಂದು ತೀರ್ಮಾನಿಸಿದ್ದೇನೆ. ಕಾಂಗ್ರೆಸ್ ನಾಯಕರ ಜತೆ ಮಾತುಕತೆ ನಡೆಸಿದ್ದು, ಕಾಂಗ್ರೆಸ್ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಚಂದ್ರಶೇಖರ್, ಅಬ್ದುಲ್ ಅಜೀದ್, ಉಮೇಶ್, ಬಾಬುಶೇಠ್, ಪುಟ್ಟಸ್ವಾಮಿ ಉಪಸ್ಥಿತರಿದ್ದರು.
undefined
ಸಿ ಆರ್‌ಮನೊಹರ್ ಕಾಂಗ್ರೆಸ್‌ಗೆ :
ಕಳೆದ ಬಾರಿ ಕೋಲಾರ (kolar) ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತುಗೆ ಸ್ಪರ್ಧಿಸಿ ಜೆಡಿಎಸ್‌ನಿಂದ (JDS) ಗೆಲುವು ಸಾಧಿಸಿದ್ದ ಸಿ.ಆರ್.ಮನೋಹರ್ (CR Manohar) ಡಿ.2 ರಂದು ಕಾಂಗ್ರೆಸ್ (congress) ಪಕ್ಷ ಸೇರ್ಪಡೆ ಗೊಳ್ಳಲಿದ್ದಾರೆಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ(Veerappa Moily) ಖಚಿತಪಡಿಸಿದರು. ಚಿಕ್ಕಬಳ್ಳಾಪುರ (Chikkaballapura) ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ಅನಿಲ್ ಕುಮಾರ್ ಪರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ(Election Campaign) ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಎಂ.ವೀರಪ್ಪ ಮೊಯ್ಲಿ ಈ ವಿಚಾರ ಪ್ರಸ್ತಾಪಿಸಿದರು. ಸಿ.ಆರ್.ಮನೋಹರ್ ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದು ಡಿ.2 ರಂದು ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜೆಡಿಎಸ್ (JDS) ತೊರೆದು ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ (congress) ಅಧ್ಯಕ್ಷರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆಂದು ಮೊಯ್ಲಿ ತಿಳಿಸಿದರು. ಅಲ್ಲದೇ ಪಕ್ಷ ಬಿಟ್ಟು ಹೋಗಿರುವ ಎಲ್ಲಾ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬಂದು ಸೇರಿಕೊಳ್ಳಬಹುದೆಂದರು.
ಜೆಡಿಎಸ್ ತೊರೆದು ಶಾಕ್: ಜೆಡಿಎಸ್‌ನ (JDS) ಮತ್ತೊಂದು ವಿಕೆಟ್ ಪತನವಾಗಿದೆ. ಅವಧಿ ಮುಗಿಯುವ ಮೊದಲೇ ಜೆಡಿಎಸ್ ನಾಯಕ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಅಲ್ಲದೇ ವಿಧಾನ ಪರಿಷತ್ ಚುನಾವಣೆ (MLC Election) ಮಧ್ಯೆಯೇ ಸಿ.ಆರ್. ಮನೋಹರ್ (CR Manohar) ಜೆಡಿಎಸ್ (JDS) ಪ್ರಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ(resign) ನೀಡಿದ್ದು, ದಳಪತಿಗಳಿಗೆ ಆಘಾತವಾಗಿದೆ.
ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಿ.ಆರ್. ಮನೋಹರ್ ರಾಜೀನಾಮೆ ನೀಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಇಂದು (ನ.29 ರಾಜೀನಾಮೆ ಪತ್ರ ನೀಡಿದ್ದಾರೆ. ಸಿ.ಆರ್. ಮನೋಹರ್ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಾರೆಂದು ಸುದ್ದಿಯಾಗಿತ್ತು. ಆದರೆ, ಇದೀಗ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಅವರು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿತ್ತು.
ಕಾಂಗ್ರೆಸ್ ಸೇರಲು ಚಿಂತನೆ ನಡೆಸಿರುವ ಸಿ.ಆರ್. ಮನೋಹರ್, ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ರಿಜಿಸ್ಟರ್ ಪೋಸ್ಟ್ ಮೂಲಕ ಮನೋಹರ್ ರಾಜೀನಾಮೆ ಸಲ್ಲಿಸಿದ್ದಾರೆ.ಕೋಲಾರ ಮತ್ತು ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾಗಿರುವ ಸಿ.ಆರ್ ಮನೋಹರ್ ಅವರ ಸದಸ್ಯತ್ವದ ಅವಧಿ 2022ರ ಜ.5ಕ್ಕೆ ಕೊನೆಗೊಳ್ಳಲಿದೆ. ಅವಧಿ ಪೂರ್ಣಕ್ಕೆ ಮೂರು ತಿಂಗಳಷ್ಟೇ ಬಾಕಿ ಇದೆ. ಈ ನಡುವೆ ಜೆಡಿಎಸ್‌ನಿಂದ ಹೆಜ್ಜೆ ಹೊರಗೆ ಇಟ್ಟಿದ್ದಾರೆ.
ಇದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕೀಯ ವಲಯದಲ್ಲಿ ಆಂತರಿಕ ಚರ್ಚೆಗೆ ಕಾರಣವಾಗಿದೆ. ಎರಡೂ ಜಿಲ್ಲೆಗಳಲ್ಲಿ ಗಣನೀಯವಾಗಿರುವ ಬಲಿಜ ಸಮುದಾಯದ ಮೇಲೆ ಮನೋಹರ್ ಅವರಿಗೆ ಉತ್ತಮವಾದ ಹಿಡಿತವಿದೆ. ಆ ಸಮುದಾಯದ ಪ್ರಮುಖ ನಾಯಕರಾಗಿಯೂ ಅವರು ಗುರುತಿಸಿಕೊಂಡಿದ್ದಾರೆ.
2009ರಿಂದಲೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕಾರಣದಲ್ಲಿ ಮನೋಹರ್ ಅವರ ಹೆಜ್ಜೆ ಗುರುತು ಪ್ರಬಲವಾಗಿದೆ. 2009ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಆರ್ ಮನೋಹರ್ 1.86 ಲಕ್ಷ ಮತಗಳನ್ನು ಪಡೆದಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 38 ಸಾವಿರ ಮತಗಳನ್ನು ಪಡೆದಿದ್ದರು