ಮಲೆನಾಡಿನಲ್ಲಿ ಭಾರೀ ಮಳೆ ಆರ್ಭಟ; ಚಿಕ್ಕಮಗಳೂರಿನ ಈ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ತಹಸೀಲ್ದಾರ್!

Published : Jul 06, 2026, 07:29 PM IST
Karnataka Rain School Holiday

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆಗಾಗಿ ಜಿಲ್ಲಾಡಳಿತವು ಜುಲೈ 7 ರಂದು ಪ್ರಾಥಮಿಕ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಚಿಕ್ಕಮಗಳೂರು (ಜು.06): ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಡಳಿತ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ನಾಳೆ ಒಂದು ದಿನ ರಜೆ

ಜುಲೈ 7ರಂದು (ನಾಳೆ) ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ 1ನೇ ತರಗತಿಯಿಂದ 7ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ, ಅನುದಾನಿತ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಿ ಕಳಸ ತಹಸಿಲ್ದಾರ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಿದ್ಯಾರ್ಥಿಗಳು ಶಾಲೆಗೆ ಬರುವಾಗ ಅಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಮುನ್ನೆಚ್ಚರಿಕೆ ವಹಿಸಲಾಗಿದೆ.

ಪೋಷಕರು ತಮ್ಮ ಮಕ್ಕಳನ್ನು ನದಿ ಹಾಗೂ ಹಳ್ಳಗಳ ಹತ್ತಿರ ಬಿಡದಂತೆ ಮತ್ತು ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಸೂಚಿಸಿದೆ. ಮಳೆ ಹೀಗೆಯೇ ಮುಂದುವರಿದರೆ ರಜೆಯನ್ನು ವಿಸ್ತರಿಸುವ ಬಗ್ಗೆ ಮರುಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Read more Articles on
click me!

Recommended Stories

ಬೆಂಗಳೂರಿನಲ್ಲಿ ಕೆಲಸ ಮಾಡಿದ್ರೆ ಹೆಚ್ಚಿನ ಹಣ ಸಿಗುತ್ತಾ? ಊರಿನಲ್ಲಿದ್ರೆ ಜಾಸ್ತಿ ಹಣ ಉಳಿಸಬಹುದಾ?
ಕೋರ್ಟ್ ಮೆಟ್ಟಿಲೇರಿದ್ದ 341 OBC ಶಿಕ್ಷಕಿಯರಿಗೆ ಕೊನೆಗೂ ಸಿಕ್ತು ಮುಕ್ತಿ!; ಷರತ್ತುಬದ್ಧ ಸೇರ್ಪಡೆಗೆ ಶಾಲಾ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್!