ಚಿಕ್ಕಮಗಳೂರಿಗೆ ಮೆಡಿಕಲ್‌ ಕಾಲೇಜು ಮಂಜೂರು

By Kannadaprabha News  |  First Published Mar 20, 2020, 12:59 PM IST

ಚಿಕ್ಕಮಗಳೂರು ಜಿಲ್ಲೆಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಮಂಜೂರಾಗಿದ್ದು, ಈ ಬಗ್ಗೆ ಆದೇಶ ಪ್ರತಿಯನ್ನು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ದೆಹಲಿಯ ತನ್ನ ಕಚೇರಿಯಲ್ಲಿ ಹಸ್ತಾಂತರಿಸಿದ್ದಾರೆ


ಉಡುಪಿ(ಮಾ.20): ಚಿಕ್ಕಮಗಳೂರು ಜಿಲ್ಲೆಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಮಂಜೂರಾಗಿದ್ದು, ಈ ಬಗ್ಗೆ ಆದೇಶ ಪ್ರತಿಯನ್ನು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ದೆಹಲಿಯ ತನ್ನ ಕಚೇರಿಯಲ್ಲಿ ಹಸ್ತಾಂತರಿಸಿದ್ದಾರೆ.

ಜಿಲ್ಲೆಯ ಜನತೆ ಚಿಕ್ಕಮಗಳೂರಿನಲ್ಲಿ ಉನ್ನತೀಕರಿಸಿದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆಯ ಕುರಿತು ಸಂಸದೆಯಲ್ಲಿ ಬೇಡಿಕೆಯಿಟ್ಟಿದ್ದರು. ಜನತೆಯ ಬೇಡಿಕೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಲುಪಿಸಿದ ಸಂಸದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮನವೊಲಿಸಿ ಚಿಕ್ಕಮಗಳೂರು ಜಿಲ್ಲೆಗೆ ಮೆಡಿಕಲ್‌ ಕಾಲೇಜು ಮಂಜೂರಾತಿ ಮಾಡಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

Tap to resize

Latest Videos

ಕಲಬುರಗಿ ಆಯ್ತು, ಈಗ ಮಡಿಕೇರಿಯಲ್ಲೂ ಬಫರ್ ಜೋನ್..!

ಪ್ರಸ್ತುತ ಕಾರ್ಯಚರಿಸುತ್ತಿರುವ ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸಿ, ಮೆಡಿಕಲ್‌ ಕಾಲೇಜಾಗಿ ಪರಿವರ್ತಿಸಲಾಗುವುದು. ಜಿಲ್ಲೆಗೆ ಅತಿ ಅವಶ್ಯಕವಿದ್ದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕೊರಗನ್ನು ಇದು ನೀಗಿಸಲಿದೆ ಎಂದು ಸಂಸದೆ ತಿಳಿಸಿದ್ದಾರೆ.

click me!