ಸರ್ಕಾರಿ ಶಾಲೆ ಎಂದರೇ ಮೂಗು ಮುರಿಯುವ ಪೋಷಕರೇ ಜಾಸ್ತಿ. ಅಂತದರಲ್ಲಿ ಇಲ್ಲೊಂದು ಶಾಲೆಗೆ ಸುತ್ತಮುತ್ತಲ ನಿವಾಸಿಗಳೇ ಕಂಟಕವಾಗಿದ್ದಾರೆ. ಸಂಜೆ ಶಾಲೆ ಮುಗಿಯುತ್ತಿದ್ದಂತೆ ಅನೈತಿಕ ಚಟುವಟಿಕೆಗಳ ಅಡ್ಡವಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಮೇ.26): ಸರ್ಕಾರಿ ಶಾಲೆ ಎಂದರೇ ಮೂಗು ಮುರಿಯುವ ಪೋಷಕರೇ ಜಾಸ್ತಿ. ಅಂತದರಲ್ಲಿ ಇಲ್ಲೊಂದು ಶಾಲೆಗೆ ಸುತ್ತಮುತ್ತಲ ನಿವಾಸಿಗಳೇ ಕಂಟಕವಾಗಿದ್ದಾರೆ. ಸಂಜೆ ಶಾಲೆ ಮುಗಿಯುತ್ತಿದ್ದಂತೆ ಅನೈತಿಕ ಚಟುವಟಿಕೆಗಳ ಅಡ್ಡವಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.
undefined
ಬೆಳಿಗ್ಗಿನಿಂದ ಸಂಜೆ ತನಕ ಶಾಲೆ-ಸಂಜೆ ಮುಗಿಯುತ್ತಿದ್ದಂತೆ ಅನೈತಿಕ ಚಟುವಟಿಕೆ ಅಡ್ಡ: ಚಿಕ್ಕಮಗಳೂರು ನಗರದ ಶಂಕರಪುರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಡಾವಣೆಯ ನಿವಾಸಿಗಳಿಂದ ಕಂಟಕ ಎದುರಾಗಿದೆ. 1ನೇ ತರಗತಿಯಿಂದ 7ನೇ ತರಗತಿವರೆಗೂ ಇದ್ದು, 75 ಮಕ್ಕಳು ಶಿಕ್ಷಣ ಪಡೆದುಕೊಳ್ಳುತ್ತಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೂ ಮಕ್ಕಳ ಆಟ, ಪಾಠದಲ್ಲಿ ತಲ್ಲೀನವಾಗುವ ಈ ಶಾಲಾ ಆವರಣ ಸಂಜೆಯಾಗುತ್ತಿದ್ದಂತೆ ಕುಡುಕರ ಅಡ್ಡವಾಗಿ ಮಾರ್ಪಡುತ್ತಿದೆ. ಪ್ರತಿನಿತ್ಯ ಬೆಳಿಗ್ಗೆ ಶಿಕ್ಷಕರು ಶಾಲಾ ಆವರಣ ಪ್ರವೇಶಿಸುತ್ತಿದ್ದಂತೆ ಕುಡುಕರು ಕುಡಿದು ಎಸೆದ ಬಾಟಲಿಗಳನ್ನು ಹೆಕ್ಕಿ ಹೊರಹಾಕುವುದೇ ಕಾಯಕವಾಗಿದೆ.
Chikkamagaluru; ಕರ್ಕಶ ಶಬ್ದದ ಬೈಕಿನ ಸೈಲೆನ್ಸರ್ ನಾಶ ಪಡಿಸಿದ ಕಡೂರು ಪೊಲೀಸ್
ವಾರದಲ್ಲಿ ಎರಡರಿಂದ ಮೂರು ದಿನ ಇದೇ ಪರಿಸ್ಥಿತಿ ಉದ್ಬವಾಗುವುದರಿಂದ ಶಿಕ್ಷಕರು ಬೇಸತ್ತು ಹೋಗಿದ್ದಾರೆ. ಈ ಪುಂಡರು ಇಷ್ಟಕ್ಕೇ ಸುಮ್ಮನಿರುವುದಿಲ್ಲ. ಕುಡಿದ ಅಮಲಿನಲ್ಲಿ ಶಾಲೆಯ ಮೇಲ್ಚಾವಣಿ ಹೆಂಚುಗಳನ್ನು ಓಡೆದು ಹಾಕುತ್ತಾರೆ. ಶಾಲೆಯ ಸುತ್ತಲು ಕಂಪೌಂಡ್ ನಿರ್ಮಿಸಿದ್ದರು. ಕಾಂಪೌಂಡ್ ಎಗರಿ ಶಾಲಾ ಆವರಣ ಒಳ ಪ್ರವೇಶಿಸುತ್ತಾರೆ ಎನ್ನುವುದು ಹೆಸರು ಹೇಳು ಇಚ್ಚಿಸಿದ ಸ್ಥಳೀಯ ನಿವಾಸಿಯೊಬ್ಬರ ಮಾತಾಗಿದೆ. ಈ ಬಗ್ಗೆ ಪೊಲೀಸರ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಜ್ಞಾನ ದೇಗುಲ ಕುಡುಕರ ಅಡ್ಡವಾಗಿರುವುದು ಅತ್ಯಂತ ಶೋಚನೀಯ ಎಂದು ಕೆಲ ನಿವಾಸಿಗಳು ಬೇಸರ ವ್ಯಕ್ತಪಡಿಸುತ್ತಾರೆ.
ಅತ್ಯಂತ ಹಳೇ ಕಟ್ಟಡ: 1956ರಲ್ಲಿ ಪ್ರಾರಂಭವಾದ ಈ ಶಾಲೆ 11 ಕೊಠಡಿಗಳನ್ನು ಒಳಗೊಂಡಿದೆ. 1 ರಿಂದ 7ನೇ ತರಗತಿ ಇದ್ದು, ಇಲ್ಲಿನ ಸುತ್ತಮುತ್ತಲ 75ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಶಾಲಾ ಕಟ್ಟಡದ ಮೇಲ್ಚಾವಣಿ ಹೆಂಚುಗಳು ಶಿಥಿಲಗೊಂಡ ಪರಿಣಾಮ ಮಳೆ ಬಂದರೇ ಎಲ್ಲ ಕಡೆಗಳಲ್ಲಿ ಸೋರುತ್ತದೆ. ದಾನಿಗಳ ನೆರೆವುನಿಂದ ಹೆಂಚುಗಳು ತೆಗೆಸಿ ಹೊಸ ಹೆಂಚುಗಳನ್ನು ಹಾಕಿಸಿದ್ದು, ಬಿಸಿಯೂಟದ ಅಡುಗೆ ಕೋಣೆ ಶಿಥಿಲಗೊಂಡು ಚಿಂತಾಜನಕವಾಗಿದೆ. ಸರ್ಕಾರಿ ಶಾಲೆ ಎಂದರೇ ಅಸಡ್ಡೆ ತೋರುವ ಈ ದಿನಗಳಲ್ಲಿ ಇಲ್ಲಿನ ಸರ್ಕಾರಿ ಶಾಲೆಗೆ ಸೇರಿಸಲು ಪೋಷಕರು ಮುಂದೇ ಬಂದರೂ ಮೂಲಭೂತ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ.
Chikkamagaluru ಧರ್ಮಸ್ಥಳದ ಬಾಗಿಲು ಬಡಿದ ನಗರಸಭೆ ವಿವಾದ
ಮಾತ್ರವಲ್ಲದೇ ಸ್ಥಳೀಯ ಪುಂಡರ ಕಾಟವು ವಿಪರೀತವಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎನ್ನುವುದು ಕೆಲ ಸ್ಥಳೀಯ ನಿವಾಸಿಗಳ ಆಗ್ರಹವಾಗಿದೆ. ಸಂಜೆಯಾಗುತ್ತಿದಂತೆ ಶಾಲಾ ಆವರಣ ಕುಡುಕರ ಅಡ್ಡವಾಗಿ ಮಾರ್ಪಡುತ್ತದೆ. ಕಾಂಪೌಂಡ್ ಎಗರಿ ಬರುವ ಪುಂಡರು ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಾರೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ನಿತ್ಯ ಕಿರಿಕಿರಿ ಉಂಟು ಮಾಡುತ್ತಿದೆ. ಪೊಲೀಸರ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆ ಸುಸರ್ಜಿತ ಶಾಲಾ ಕಟ್ಟಡ ನಿರ್ಮಿಸಿ, ಸಿಸಿ ಕ್ಯಾಮರ ಅಳವಡಿಸಿ ಪುಂಡರ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಗಮನಹರಿಸಬೇಕಾಗಿದೆ.