ಕೇರಳ ಬಾಲಕಿ ಆತ್ಮ*ಹತ್ಯೆ ಹಿನ್ನೆಲೆ: ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್, ಕಠಿಣ ಪೊಲೀಸ್ ಬಂದೋಬಸ್ತ್!

Published : Apr 18, 2026, 05:20 PM IST
Chikkamagaluru

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೇರಳ ಮೂಲದ ಬಾಲಕಿಯ ಅಸಹಜ ಸಾವಿನ ಘಟನೆ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯಲ್ಲಿ ವಿಶೇಷವಾಗಿ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

ಚಿಕ್ಕಮಗಳೂರು (ಏ.18): ಜಿಲ್ಲೆಯಲ್ಲಿ ಕೇರಳ ಮೂಲದ ಬಾಲಕಿಯ ಅಸಹಜ ಸಾವಿನ ಘಟನೆ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯಲ್ಲಿ ವಿಶೇಷವಾಗಿ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜನಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಪ್ರವಾಸಿತಾಣದಲ್ಲಿ ಪೊಲೀಸರ ನಿಗಾ: ಬೇಸಿಗೆ ರಜೆ , ವೀಕೆಂಡ್ ಹಿನ್ನೆಲೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ವಿಶೇಷವಾಗಿ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಮಾಣಿಕ್ಯಾಧಾರ ಪ್ರದೇಶಗಳಲ್ಲಿ ಭಾರೀ ಜನಸಾಗರ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದೆ. ಚಂದ್ರದ್ರೋಣ ಪರ್ವತಶ್ರೇಣಿ ವ್ಯಾಪ್ತಿಯಲ್ಲಿರುವ ಅಪಾಯಕಾರಿ ಪ್ರದೇಶಗಳಲ್ಲಿ ವಿಶೇಷ ನಿಗಾವಹಿಸಲಾಗಿದೆ. ಕಂದಕಗಳು, ಜಲಪಾತಗಳು ಮತ್ತು ಎತ್ತರದ ಪರ್ವತ ಪ್ರದೇಶಗಳಲ್ಲಿ ಪ್ರವಾಸಿಗರು ನಿರ್ಲಕ್ಷ್ಯ ತೋರಬಾರದು ಎಂಬ ಉದ್ದೇಶದಿಂದ ಪೊಲೀಸರ ತಂಡಗಳು ಹದ್ದಿನ ಕಣ್ಣಿನ ನಿಗಾವಹಿಸುತ್ತಿವೆ.

ಪಿಎಸ್ ಐ ನೇತೃತ್ವದಲ್ಲಿ ಭದ್ರತೆ

ದತ್ತಪೀಠ–ಮಾಣಿಕ್ಯಾಧಾರ ತಪ್ಪಲು ಪ್ರದೇಶದಲ್ಲಿ ಪಿ.ಎಸ್.ಐ. ನೇತೃತ್ವದಲ್ಲಿ ನಾಲ್ವರು ಪೊಲೀಸರನ್ನು ಶಾಶ್ವತವಾಗಿ ನಿಯೋಜಿಸಲಾಗಿದೆ. ಜೊತೆಗೆ ಚಿಕ್ಕಮಗಳೂರು ವಿಭಾಗದ 15 ಪೊಲೀಸ್ ಠಾಣೆಗಳ ಪಿ.ಎಸ್.ಐ.ಗಳು ಪರ್ಯಾಯವಾಗಿ ಪ್ರತಿದಿನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ಠಾಣೆಯಿಂದ ಕೆಲ ಸಿಬ್ಬಂದಿಯನ್ನು ವಾರಪೂರ್ತಿ ಅಲ್ಲಿಯೇ ಮೊಕ್ಕಾಂ ಹಾಕುವಂತೆ ಸೂಚನೆ ನೀಡಲಾಗಿದೆ. ಈ ಮೂಲಕ 24 ಗಂಟೆಗಳ ಭದ್ರತೆ ಒದಗಿಸಲಾಗುತ್ತಿದೆ.

ಪ್ರಮುಖ ಪ್ರವಾಸಿ ತಾಣಗಳಲ್ಲಿ ನಿರಂತರ ಗಸ್ತು ನಡೆಸಲಾಗುತ್ತಿದ್ದು, ನಿಯಮ ಉಲ್ಲಂಘಿಸುವ ಪ್ರವಾಸಿಗರಿಗೆ ಸ್ಥಳದಲ್ಲೇ ಎಚ್ಚರಿಕೆ ನೀಡಲಾಗುತ್ತಿದೆ. ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಅತಿರೇಕದ ಸಾಹಸ ಚಟುವಟಿಕೆಗಳಲ್ಲಿ ತೊಡಗುವುದು ಮುಂತಾದ ವರ್ತನೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯವಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.ಸಾರ್ವಜನಿಕರು ಹಾಗೂ ಪ್ರವಾಸಿಗರು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಿ, ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

PREV
Read more Articles on
click me!

Recommended Stories

ವಿಶ್ವಮಾನವ ಎಕ್ಸ್ ಪ್ರೆಸ್ ಗೆ ಎಲ್ಎಚ್ ಬಿ ಬೋಗಿಗಳ ಅಳವಡಿಕೆ, ಪ್ರಯಾಣಿಕರ ಹೊಸ ಪಯಣದ ರಹಸ್ಯ!
ಬೆಂಗಳೂರು: ಲಿವಿಂಗ್ ಇನ್‌ ಟುಗೆದರ್‌, ಮೋಜಿನ ಜೀವನ, ಬೀಗ ಹಾಕಿದ ಮನೆಯೇ ಟಾರ್ಗೆಟ್‌ ಮಂಡ್ಯ ರ್‍ಯಾಪಿಡೋ ಚಾಲಕನ ಕಳ್ಳತನ!