ಯಗಚಿ ಹಳ್ಳಕ್ಕೆ ಸೇರುತ್ತಿದೆ ಕಲುಷಿತ ನೀರು: ಪತ್ರಕರ್ತನ ದೂರಿಗೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ

Published : Apr 26, 2026, 04:32 PM IST
Yagachi Halla pollution

ಸಾರಾಂಶ

ಯಗಚಿ ಹಳ್ಳಕ್ಕೆ ಕೊಳಚೆ ನೀರು ಸೇರುತ್ತಿರುವ ಗಂಭೀರ ಸಮಸ್ಯೆ ಈಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಚಿಕ್ಕಮಗಳೂರಿನ ರಾಮೇಶ್ವರ ಬಡಾವಣೆಯಲ್ಲಿರುವ ಈ ಹಳ್ಳದ ನೀರು ನೇರವಾಗಿ ಯಗಚಿ ಡ್ಯಾಂ ಸೇರುತ್ತಿದೆ.

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

ಚಿಕ್ಕಮಗಳೂರು (ಏ.26): ಯಗಚಿ ಹಳ್ಳಕ್ಕೆ ಕೊಳಚೆ ನೀರು ಸೇರುತ್ತಿರುವ ಗಂಭೀರ ಸಮಸ್ಯೆ ಈಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಚಿಕ್ಕಮಗಳೂರಿನ ರಾಮೇಶ್ವರ ಬಡಾವಣೆಯಲ್ಲಿರುವ ಈ ಹಳ್ಳದ ನೀರು ನೇರವಾಗಿ ಯಗಚಿ ಡ್ಯಾಂ ಸೇರುತ್ತಿದ್ದು, ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳೀಯರಲ್ಲಿ ತೀವ್ರ ಆತಂಕ ಮನೆಮಾಡಿದೆ.

ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ದೂರು: ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪತ್ರಕರ್ತ ದಿನೇಶ್ ಪಟವರ್ಧನ್ ಅವರು ಪ್ರಧಾನಿ ಕಚೇರಿಗೆ ಪತ್ರ ಬರೆದು ದೂರು ನೀಡಿದ್ದರು. ಈ ದೂರಿಗೆ ತಕ್ಷಣ ಸ್ಪಂದಿಸಿರುವ ಪ್ರಧಾನಿ ಕಚೇರಿಯು, ಕೂಡಲೇ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (KSPCB) ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಗರದ ರಾಮೇಶ್ವರ ದೇವಸ್ಥಾನದ ಸಮೀಪವೇ ಈ ಕೊಳಚೆ ನೀರು ಹರಿಯುತ್ತಿರುವುದರಿಂದ ಇಡೀ ಪ್ರದೇಶದಲ್ಲಿ ದುರ್ವಾಸನೆ ಹರಡಿದ್ದು, ಪರಿಸರ ಮಾಲಿನ್ಯ ಉಂಟಾಗಿದೆ. ಇದರಿಂದಾಗಿ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮುಕ್ತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಜನರು

ಕಲುಷಿತ ನೀರಿನಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಯಗಚಿ ಹಳ್ಳವನ್ನು ತಕ್ಷಣ ಸ್ವಚ್ಛಗೊಳಿಸಬೇಕೆಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಕಚೇರಿಯ ಮಧ್ಯಪ್ರವೇಶದಿಂದಾಗಿ ಈಗಲಾದರೂ ಹಳ್ಳಕ್ಕೆ ಮುಕ್ತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.

PREV
Read more Articles on
click me!

Recommended Stories

ಚಾರ್ಮಾಡಿ ಘಾಟ್‌ನಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ; ತುಮಕೂರಿನ 20ಕ್ಕೂ ಹೆಚ್ಚು ಮಂದಿಗೆ ಗಾಯ!
ಬೆಂಗಳೂರು ಉದ್ಯಮಿ ಹನಿಟ್ರಾಪ್ ಬಲೆ, ₹1.5 ಕೋಟಿಗೆ ಬೇಡಿಕೆ ಇಟ್ಟ ಇನ್‌ಫ್ಲುಯೆನ್ಸರ್ ವಿರುದ್ಧ ಕೇಸ್