ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರೂ ಯಾರೂ ಅವರ ರಕ್ಷಣೆಗೆ ಮುಂದಾಗಿರಲಿಲ್ಲ. ಅದೇ ಮಾರ್ಗದಲ್ಲಿ ರಾಯಬಾಗಕ್ಕೆ ತೆರಳುತ್ತಿದ್ದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ಅವರು ತಮ್ಮ ವಾಹನವನ್ನು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಮುಂದಾದರು.
ಬೆಳಗಾವಿ(ಜ.06): ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿ ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಮಾನವೀಯತೆ, ಸಮಯಪ್ರಜ್ಞೆ ಮೆರೆದಿದ್ದಾರೆ.
ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು ಬೈಕ್‌ನಲ್ಲಿ ತೆರಳುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರೂ ಯಾರೂ ಅವರ ರಕ್ಷಣೆಗೆ ಮುಂದಾಗಿರಲಿಲ್ಲ. ಅದೇ ಮಾರ್ಗದಲ್ಲಿ ರಾಯಬಾಗಕ್ಕೆ ತೆರಳುತ್ತಿದ್ದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ಅವರು ತಮ್ಮ ವಾಹನವನ್ನು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಮುಂದಾದರು.
undefined
ಬೆಳಗಾವಿ: ವಿದ್ಯಾರ್ಥಿಗಳ ಹೆಣಗಾಟ; ಸಾರಿಗೆ ಅಧಿಕಾರಿಗಳಿಗೆ ಶಾಪ..!
ತಮ್ಮ ಸರ್ಕಾರಿ ವಾಹನ ಚಾಲಕ ಹಾಗೂ ಇನ್ನೊಬ್ಬರ ನೆರವಿನಿಂದ ಗಾಯಾಳುವನ್ನು ಚಿಕ್ಕೋಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಸಕಾಲದಲ್ಲಿ ಚಿಕಿತ್ಸೆ ಒದಗಿಸಿದರು. ಈ ಕುರಿತು ಮಾತನಾಡಿದ ಮಾಧವ ಅವರು, ಇಂಥ ಘಟನೆಗಳು ನಡೆದಾಗ ಸಾರ್ವಜನಿಕರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಸಕಾಲದಲ್ಲಿ ಚಿಕಿತ್ಸೆ ಒದಗಿಸಿದಲ್ಲಿ ಪ್ರಾಣ ರಕ್ಷಿಸಬಹುದು ಎಂದು ಹೇಳಿದರು. ಗಾಯಾಳು ದತ್ತಾ ಅವರು ಚೇತರಿಸಿಕೊಂಡಿದ್ದು, ಮೆದುಳಿನ ಸಿಟಿ.ಸ್ಕ್ಯಾನ್‌ಗಾಗಿ ಬೆಳಗಾವಿಯ ಬಿಮ್ಸ್‌ಗೆ ಕಳುಹಿಸಲಾಗಿದೆ ಎಂದು ವಿವರಿಸಿದರು.