ದಾವಣಗೆರೆ: ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಮಕ್ಕಳು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್‌

By Girish Goudar  |  First Published Sep 7, 2023, 8:12 PM IST

ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲಾ ಮಕ್ಕಳು ಆರೋಗ್ಯವಾಗಿ ಸ್ಥಿರವಾಗಿದ್ದಾರೆ ಎಂದು ವೈದ್ಯರು ಹೇಳಿದ ಹಿನ್ನೆಲೆಯಲ್ಲಿ ಆ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಗೋವಿಂದರಾಜು 


ವರದಿ: ವರದರಾಜ್ 

ದಾವಣಗೆರೆ(ಸೆ.07):  ದಾವಣಗೆರೆ ತಾಲೂಕಿನ ಮಾಯಕೊಂಡ ಎಸ್ಸಿ ಮತ್ತು ಎಸ್ಟಿ ಪ್ರತಿಭಾನ್ವಿತ ಬಾಲಕಿಯರ ವಸತಿ ಪ್ರೌಢಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಗುಣಮುಖರಾಗಿ ಇಂದು(ಗುರುವಾರ) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Tap to resize

Latest Videos

ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗೆ ವಿಷಪೂರಿತ ಆಹಾರ ಸೇವಿಸಿ 38 ಮಕ್ಕಳು ಅಸ್ವಸ್ಥಗೊಂಡಿದ್ದರು. ಕೂಡಲೇ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಆ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿತ್ತು. ಅದರಲ್ಲಿ 16 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದ ಕೆಲವು ಮಕ್ಕಳನ್ನು ಪೋಷಕರೊಂದಿಗೆ ಮನೆಗೆ ಕಳುಹಿಸಲಾಯಿತು.

ದಾವಣಗೆರೆ: ವಿಷಪೂರಿತ ಆಹಾರ ಸೇವಿಸಿ 38 ಮಕ್ಕಳು ಅಸ್ವಸ್ಥ, ವಸತಿ ಶಾಲೆಯ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ

ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲಾ ಮಕ್ಕಳು ಆರೋಗ್ಯವಾಗಿ ಸ್ಥಿರವಾಗಿದ್ದಾರೆ ಎಂದು ವೈದ್ಯರು ಹೇಳಿದ ಹಿನ್ನೆಲೆಯಲ್ಲಿ ಆ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಗೋವಿಂದರಾಜು
ತಿಳಿಸಿದ್ದಾರೆ.

ನೀರಿನ ಮಾದರಿ, ಆಹಾರ ಪರೀಕ್ಷೆ

ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಸಾಂಕ್ರಾಮಿಕ ರೋಗಶಾಸ್ತಜ್ಞರು ಹಾಗೂ ಕಚೇರಿ ಸಿಬ್ಬಂದಿ ಬುಧವಾರ ಭೇಟಿ ನೀಡಿ ಆಹಾರ ಮತ್ತು ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು. ಬಳಿಕ ಆಹಾರ ಮತ್ತು ಸುರಕ್ಷಿತ ಪ್ರಭಾರ ಅಧಿಕಾರಿ ಡಾ.ನಾಗರಾಜ್  ಹಾಗೂ ಸಿಬ್ಬಂದಿಗಳು ಆಹಾರ ಮತ್ತು ಆಹಾರ ಪದಾರ್ಥಗಳನ್ನು ಹೆಚ್ಷಿನ ಪರೀಕ್ಷೆಗಾಗಿ ದಾವಣಗೆರೆ ಡಿಪಿಎಚ್ ಎಲ್ ಬೆಂಗಳೂರಿನ ಡಿಪಿಎಚ್ಎಲ್ ಪ್ರಾಯೋಗಾಲಯಕ್ಕೆ ಕಳುಹಿಸಿದ್ದು,  ಫಲಿತಾಂಶದ ನಿರೀಕ್ಷೆಯಲಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗಾಲಯ ಶಾಲಾ ತಂತ್ರಜ್ಞರು ಕುಡಿಯುವ ನೀರಿನ ಮೂಲಗಳನ್ನು ತಕ್ಷಣವೇ ಒಳಪಡಿಸಿದ್ದು, ವರದಿಯು ಕುಡಿಯಲು ಯೋಗ್ಯವಿದೆ ಎಂದು ಬಂದಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ವಿನಾಯಕ ತಿಳಿಸಿದ್ದಾರೆ.

ತುರ್ತುಚಿಕಿತ್ಸೆಗಾಗಿ ವೈದ್ಯರ ನೇಮಕ

ಘಟನೆ ಹಿನ್ನಲೆಯಲ್ಲಿ  ತುರ್ತು ಚಿಕಿತ್ಸೆ ಗಾಗಿ ಸ್ಥಳೀಯ ವೈದ್ಯಾಧಿಕಾರಿಗಳನ್ನು ವಸತಿ ನಿಲಯಕ್ಕೆ ನೇಮಿಸಿದ್ದಾರೆ. ಗುರುವಾರ ಸ್ಥಳೀಯ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ವಿನಾಯಕ, ಸಿಬ್ಬಂದಿ ಹಾಗೂ ಪ್ರಾ.ಆ.ಕೇಂದ್ರ ಹುಚ್ಚವ್ವನಹಳ್ಳಿಯ ಆಡಳಿತ ವೈದ್ಯಾಧಿಕಾರಿ ಡಾ.ಧೀರಜ್, ಆರೋಗ್ಯ ನಿರೀಕ್ಷಣಾಧಿಕಾರಿ ಎ.ಪಿ.ಪ್ರಸನ್ನಕುಮಾರ್  ವಸತಿ ಶಾಲೆಗೆ ಭೇಟಿ ನೀಡಿ, ವಸತಿ ಶಾಲೆಯಲ್ಲಿ ತಯಾರಿಸಿದ್ದ ಆಹಾರ, ಸ್ವಚ್ಛತೆ, ಕುಡಿಯುವ ನೀರು ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಪರೀಕ್ಷೆ ಮಾಡಿದ್ದಾರೆ. ಮುಂದೆ ಇಂತಹ ಘಟನೆಗಳು ಮರು ಕಳುಹಿಸದಂತೆ ಶಾಲೆಯ ಪ್ರಾಂಶುಪಾಲರು, ಅಡುಗೆ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ. ಹಾಗೂ ಮಾಯಕೊಂಡಕ್ಕೆ ಸಂಬಂಧಿಸಿದ ಎಲ್ಲಾ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

click me!