ಹೆಸರಾಂತ ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ವಿಧಿವಶ

By Suvarna News  |  First Published Dec 19, 2019, 3:27 PM IST

ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ನಿಧನ|  ಹೃದಯಾಘಾತದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರು| 50 ಕ್ಕೂ ಹೆಚ್ಚು ಕೃತಿಗಳನ್ನ ರಚಿಸಿದ ಚಂದ್ರಕಾಂತ ಕರದಳ್ಳಿ| 1952ರ ಆಗಸ್ಟ್ 25ರಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಜನಿಸಿದ್ದ ಕರದಳ್ಳಿ|


ಯಾದಗಿರಿ(ಡಿ.19): ಹೆಸರಾಂತ ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರು ಹೃದಯಾಘಾತದಿಂದ ಇಂದು ನಿಧನ ಹೊಂದಿದ್ದಾರೆ. 67 ವರ್ಷದ ಚಂದ್ರಕಾಂತ ಕರದಳ್ಳಿ ಅವರಿಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದಿಢೀರ್ ಆಗಿ ಹೃದಯಾಘಾತವಾದ ಕಾರಣ ಚಂದ್ರಕಾಂತ ಕರದಳ್ಳಿ ಇಹಲೋಕ ತ್ಯಜಿಸಿದ್ದಾರೆ. 

ಚಂದ್ರಕಾಂತ ಕರದಳ್ಳಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ, ಬಾಲಸಾಹಿತ್ಯ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಅರಸಿ ಬಂದಿದ್ದವು. ಚಂದ್ರಕಾಂತ ಕರದಳ್ಳಿ ಅವರು ಮಕ್ಕಳ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಚಂದ್ರಕಾಂತ ಕರದಳ್ಳಿ ಅವರು 50 ಕ್ಕೂ ಹೆಚ್ಚು ಕೃತಿಗಳನ್ನ ರಚಿಸಿದ್ದಾರೆ.

Latest Videos

undefined

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮಕ್ಕಳ ಕತೆ, ಕಾದಂಬರಿ, ಕಾವ್ಯ ರಚಿಸಿರುವ ಕರದಳ್ಳಿ ಅವರಿಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿತ್ತು. 'ಕಾಡು ಕನಸಿನ ಬೀಡಿಗೆ' ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲಸಾಹಿತ್ಯ‌ ಪುರಸ್ಕಾರ 

click me!