ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣವೇ ನಿಲ್ಲಿಸುವಂತೆ ಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿ ನಡೆಸುತ್ತಿರುವ ಕಾವೇರಿ ಹೋರಾಟಕ್ಕೆ ಚಿಣ್ಣರು ಧುಮುಕಿದರೆ, ಮಕ್ಕಳು ಹಾಗೂ ಮೊಮ್ಮಕ್ಕಳೊಂದಿಗೆ ರೈತರು ಪ್ರತಿಭಟನೆ ನಡೆಸಿದರು.
ಶ್ರೀರಂಗಪಟ್ಟಣ (ಸೆ.04): ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣವೇ ನಿಲ್ಲಿಸುವಂತೆ ಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿ ನಡೆಸುತ್ತಿರುವ ಕಾವೇರಿ ಹೋರಾಟಕ್ಕೆ ಚಿಣ್ಣರು ಧುಮುಕಿದರೆ, ಮಕ್ಕಳು ಹಾಗೂ ಮೊಮ್ಮಕ್ಕಳೊಂದಿಗೆ ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಹಾಗೂ ಸಮಿತಿ ಅಧ್ಯಕ್ಷ ಬಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ಶ್ರೀರಂಗಪಟ್ಟಣ ಸ್ನಾನಘಟ್ಟ ಬಳಿಯ ಕಾವೇರಿ ನದಿ ತೀರದಲ್ಲಿ ರೈತರು ಹಾಗೂ ಚಿಕ್ಕಚಿಕ್ಕ ಮಕ್ಕಳು ನಾಮಪತ್ರಗಳ ಹಿಡಿದು ನಮ್ಮ ನೀರು ನಮ್ಮ ಕಾವೇರಿ ಎಂದು ಘೋಷಣೆಗಳ ಪ್ರತಿಗಳನ್ನು ಕೈಯಲ್ಲಿ ಹಿಡಿದು ಪ್ರತಿಭಟಿಸಿದರು.
ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಅಣೆಕಟ್ಟೆಯಲ್ಲಿ ನೀರು ಭರ್ತಿಯಾಗಿಲ್ಲ. ಈಗಾಗಲೇ ಬೆಳೆದಿರುವ ಬೆಳೆಗಳಿಗೆ ನೀರು ಪೂರೈಸುತ್ತಿಲ್ಲ. ಜೊತೆಗೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಲಿದೆ ಎಂದು ಎಚ್ಚರಿಸಿದರು. ನಮ್ಮ ಅಜ್ಜ-ತಂದೆ ಅವರಿಗೆ ನೀಡಿದ ಕಾವೇರಿ ನೀರನ್ನು ನಮಗೂ ಉಳಿಸಬೇಕು. ಸರ್ಕಾರ ಮೊದಲು ನಮ್ಮ ರಾಜ್ಯದ ಹಿತ ಕಾಪಾಡಬೇಕು ಎಂಬ ನಾಮ ಫಲಕಗಳನ್ನು ಹಿಡಿದು ಚಿಕ್ಕ-ಚಿಕ್ಕ ಮಕ್ಕಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು.
undefined
ಬಿ.ಎಲ್.ಸಂತೋಷ್ 4 ಶಾಸಕರನ್ನು ಕರೆಸಿಕೊಳ್ಳಲಿ ನೋಡೋಣ: ಸಚಿವ ಶಿವರಾಜ ತಂಗಡಗಿ
ಕಾವೇರಿ ನೀರು ಕುಡಿಯುತ್ತಿರುವ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರತಿಯೊಬ್ಬರೂ ಬೀದಿಗಳಿದು ನೀರನ್ನು ರಕ್ಷಿಸಿಕೊಳ್ಳಬೇಕೆಂದು ಮಕ್ಕಳು ದೊಡ್ಡವರಿಗೆ ಕಿವಿಮಾತು ಹೇಳುವ ಮೂಲಕ ನಮ್ಮ ಪೂರ್ವಿಕರ ನೀರು ನಮಗೆ ನೀರು ಉಳಿಸಿ ಎಂದು ಆಗ್ರಹಿಸಿದರು. ಬಳಿಕ ತಾಲೂಕು ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ನಡೆಯನ್ನು ಖಂಡಿಸಿದರು. ವಿವಿಧ ಗ್ರಾಮಗಳ ನೂರಾರು ರೈತರು ಹಾಗೂ ಮಕ್ಕಳು ಭಾಗವಹಿಸಿದ್ದರು.
ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶ ವಿರೋಧಿಸಿ ಪ್ರತಿಭಟನೆ: ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯುಸೆಕ್ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರದ್ದುಗೊಳಿಸಲು ಆಗ್ರಹಿಸಿ ಕರ್ನಾಟಕ ಸೇನಾ ಪಡೆಯವರು ಮೈಸೂರು ಜಿಪಂ ಕಚೇರಿ ಮುಂಭಾಗದಲ್ಲಿ ಶನಿವಾರ ಗೋವಿಂದ ಎಂದು ಕೂಗಿ ಗಂಟೆ ಶಂಖ ಬಾರಿಸುವ ಮೂಲಕ ಪ್ರತಿಭಟಿಸಿದರು. ಕೇಂದ್ರ ಸರ್ಕಾರ ಹಿಂದೆ ತಮಿಳುನಾಡಿನ ನಾಯಕರು ಹಾಗೂ ಸರ್ಕಾರದ ಒತ್ತಡಕ್ಕೆ ಮಣಿದು ಕಾವೇರಿ ನೀರು ನಿರ್ಮಾಣ ಪ್ರಾಧಿಕಾರವನ್ನು ರಚಿಸಿರುವುದೇ ಖಂಡನಿಯ ಹಾಗೂ ರಾಜ್ಯಕ್ಕೆ ಮರಣ ಶಾಸನವಾಗಿದೆ. ಹಿಂದಿನಿಂದಲೂ ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಲೇ ಇದೆ ಎಂದು ಅವರು ಕಿಡಿಕಾರಿದರು.
ಈಗ ಇತ್ತೀಚೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿರುವುದೇ ತಮಿಳುನಾಡಿನ ಹಿತ ರಕ್ಷಣೆಗೆ ಇರುವಂತಿದೆ. ಈ ಪ್ರಾಧಿಕಾರ ಸ್ವಾಭಾವಿಕವಾಗಿ ಪ್ರತಿ ವರ್ಷ ಸರಿಯಾಗಿ ಮಳೆಯಾದಲ್ಲಿ ಕಾವೇರಿ ನೀರು ನಮ್ಮ ರಾಜ್ಯದಿಂದ ತಮಿಳುನಾಡಿಗೆ ಪ್ರಮಾಣಕ್ಕಿಂತ ಹೆಚ್ಚಾಗಿಯೇ ಹರಿಸಲಾಗುತ್ತದೆ. ಆದರೆ, ಈ ವರ್ಷ ಮಳೆ ಸರಿಯಾಗಿ ಬಾರದೆ, ನಮ್ಮ ರಾಜ್ಯ ಕಷ್ಟದಲ್ಲಿದೆ. ನಮಗೆ ಮುಂದಿನ ದಿನಗಳಲ್ಲಿ ಕುಡಿಯಲು ನೀರು ಸಿಗುವುದಿಲ್ಲ, ಬೆಂಗಳೂರಿನಲ್ಲಂತೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ಪ್ರಾಧಿಕಾರ ನಮ್ಮ ರಾಜ್ಯದ ಜಲಾಶಯಗಳ ವಸ್ತುಸ್ಥಿತಿ ಜಲಾಶಯಗಳ ನೀರಿನ ಮಟ್ಟನೋಡಿ ತದನಂತರ ನೀರು ಬಿಡಲು ಆದೇಶಿಸಬೇಕು ಎಂದು ಅವರು ಒತ್ತಾಯಿಸಿದರು.
ತ.ನಾಡಿನ ನಟೋರಿಯಸ್ ರೌಡಿ, ಡಿಎಂಕೆ ಮುಖಂಡ ಅಳಗಿರಿ ಆಪ್ತನ ಮೇಲೆ ಬೆಂಗಳೂರಲ್ಲಿ ಡೆಡ್ಲಿ ಅಟ್ಯಾಕ್!
ಈಗಾಗಲೇ ಕೆಆರ್‌ಎಸ್ ಡ್ಯಾಮ್‌ನಲ್ಲಿ 113 ಅಡಿ ಇದ್ದ ನೀರು 100 ಅಡಿಗೆ ಕುಸಿದಿದೆ. ನಮ್ಮ ರಾಜ್ಯದಲ್ಲಿ ಈಗ 28 ಜನ ಸಂಸದರು, 11 ರಾಜ್ಯಸಭಾ ಸದಸ್ಯರು ಹಾಗೂ ನಾಲ್ಕು ಕೇಂದ್ರ ಮಂತ್ರಿಗಳಿದ್ದಾರೆ. ಇವರು ಈ ಕೂಡಲೇ ಕೇಂದ್ರ ಸರ್ಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಮ್ಮ ರಾಜ್ಯದ ಜಲಾಶಯಗಳ ನೀರಿನ ಮಟ್ಟಮನವರಿಕೆ ಮಾಡಿಸಿ, ನೀರು ಬಿಡದಂತೆ ಹೋರಾಟ ಮಾಡಬೇಕು ಎಂದು ಅವರು ಆಗ್ರಹಿಸಿದರು.