ಅಲ್ಲಮಪ್ರಭು ಮಹಾಸ್ವಾಮೀಜಿ ಅವರು ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಾಕಾರಿಯಾಗದೆ ಇಂದು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ.
ಚಿಕ್ಕೋಡಿ(ನ.11): ಅನಾರೋಗ್ಯದಿಂದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ(63) ಇಂದು(ಭಾನುವಾರ) ಲಿಂಗೈಕ್ಯರಾಗಿದ್ದಾರೆ.
ಅಲ್ಲಮಪ್ರಭು ಮಹಾಸ್ವಾಮೀಜಿ ಅವರು ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಾಕಾರಿಯಾಗದೆ ಇಂದು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಶ್ರೀಗಳು ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಉಡುಪಿ: ಮಾಜಿ ರಾಜ್ಯಪಾಲ ಶ್ರೀ ಪಿ ಬಿ ಆಚಾರ್ಯ ನಿಧನ- ಒಂದು ಸ್ಮರಣೆ
ಚಿಂಚಣಿ ಶ್ರೀಗಳು ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದರು. ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತ ವೃಂದ ಶೋಕಸಾಗದಲ್ಲಿ ಮುಳುಗಿದೆ.