ಚಿತ್ರದುರ್ಗ ಮುರುಘಾ ಮಠದ ಲೇಡಿ ವಾರ್ಡನ್ ರಶ್ಮಿ ಜೈಲಿನಿಂದ ಬಿಡುಗಡೆ

By Sathish Kumar KH  |  First Published Dec 27, 2023, 10:27 PM IST

ಚಿತ್ರದುರ್ಗ ಮುರುಘಾಮಠದ ಸ್ವಾಮೀಜಿಯ ಪೋಕ್ಸೋ ಕೇಸ್‌ನಲ್ಲಿ ಎ2 ಆರೋಪಿಯಾಗಿದ್ದ ಮಠದ ಹಾಸ್ಟೆಲ್‌ ವಾರ್ಡನ್ ರಶ್ಮಿ ಜೈಲಿನಿಂದ ಬಿಡುಗಡೆಯಾದರು.


ಚಿತ್ರದುರ್ಗ  (ಡಿ.27): ಚಿತ್ರದುರ್ಗ ಮುರುಘಾಮಠದ ಸ್ವಾಮೀಜಿಯ ಪೋಕ್ಸೋ ಕೇಸ್‌ನಲ್ಲಿ ಎ2 ಆರೋಪಿಯಾಗಿದ್ದ ಮಠದ ಹಾಸ್ಟೆಲ್‌ ವಾರ್ಡನ್ ರಶ್ಮಿ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದ್ದು, ಅವರನ್ನು ಇಂದು ಜೈಲಿನಿಂದ ಬಿಡುಗಡೆ ಮಾಡಲಾಯಿತು.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣದಲ್ಲಿ ಎ1 ಆರೋಪಿ ಮುರುಘಾ ಶರಣರಿಗೆ ಈಗಾಘಲೇ ಜಾಮೀನು ಮಂಜೂರಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಿ ಒಂದು ತಿಂಗಳಾಗುತ್ತಾ ಬಂದಿದೆ. ಇದರ ಬೆನ್ನಲ್ಲಿಯೇ ಎ2 ಆರೋಪಿ ಲೇಡಿ ವಾರ್ಡನ್ ರಶ್ಮಿ ಕೂಡ ಜಾಮೀನು ಮಂಜೂರಾತಿಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಡಿ.21ರಂದು ಲೇಡಿ ವಾರ್ಡನ್ ಜಾಮೀಜು ಅರ್ಜಿ ವ ವಿಚಾರಣೆ ಮಾಡಿದ್ದ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನ್ಯಾ.ಮೊಹಮ್ಮದ್ ನವಾಜ್ ಅವರ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿತ್ತು.

Tap to resize

Latest Videos

undefined

ಮುರುಘಾ ಸ್ವಾಮೀಜಿಗೆ ಬಿಗ್‌ ರಿಲೀಫ್‌: 2ನೇ ಕೇಸ್‌ನಲ್ಲಿಯೂ ಜಾಮೀನು ಮಂಜೂರು

ಇನ್ನು ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಕೆಲವು ದಾಖಲೆಗಳನ್ನು ಒದಗಿಸಬೇಕಿತ್ತು. ಇನ್ನು ದಾಖಲೆಗಳನ್ನು ಪರಿಶೀಲನೆ ಮಾಡಿದ ಚಿತ್ರದುರ್ಗ‌ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಪರಿಶೀಲಿಸಿ ಬುಧವಾರ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಚಿತ್ರದುರ್ಗ‌ ಜಿಲ್ಲಾ ಕಾರಾಗೃಹದಿಂದ ಎ2 ವಾರ್ಡನ್ ರಶ್ಮಿ ಬಿಡುಗಡೆ ಆಗಿದ್ದಾರೆ. ಜೈಲಿನ ಆವರಣದಿಂದ ಮುಖವನ್ನು ಮುಚ್ಚಿಕೊಂಡೇ ಹೊರಗೆ ಬಂದ ರಶ್ಮಿ ಅವರು, ಅವರಿಗಾಗಿ ಸಿದ್ಧಪಡಿಸಲಾಗಿದ್ದ ಪ್ರತ್ಯೇಕ ಕಾರಿನಲ್ಲಿ ಹೊರಟು ಹೋದರು.

ಮಠದ ಆಡಳಿತ ಮರಳಿ ಪಡೆದ ಮುರುಘಾ ಶ್ರೀ: 14 ತಿಂಗಳ ಕಾಲ ಪೋಕ್ಸೋ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ನವೆಂಬರ್ 20ರಂದು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾ ಶ್ರೀಯವರು ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ 2022ರ ಸೆಪ್ಟೆಂಬರ್‌ 1ರಂದು ಮುರುಘಾ ಶ್ರೀಯವರ ಬಂಧನವಾಗಿತ್ತು. ಸತತ 14 ತಿಂಗಳ ಕಾಲ ಸೆರೆಮನೆವಾಸ ಅನುಭವಿಸಿದ್ದರು. ಈ ವೇಳೆ, ರಾಜ್ಯ ಸರ್ಕಾರ ಮುರುಘಾ ಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್‌ ಅಧಿಕಾರಿ ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿತ್ತು. ಈ ನೇಮಕ ಪ್ರಶ್ನಿಸಿ ಮಠದ ಪರ ವಕೀಲರು ಹೈಕೋರ್ಟ್‌ ಮೊರೆ ಹೋಗಿದ್ದರಿಂದ ಆಡಳಿತಾಧಿಕಾರಿ ನೇಮಕವನ್ನು ಹೈಕೋರ್ಟ್‌ ರದ್ದುಪಡಿಸಿತ್ತು. ಆಗ ಮಠದ ಪೀಠಾಧಿಪತಿಯಾಗಿದ್ದ ಮುರುಘಾ ಶ್ರೀ ಜೈಲಲ್ಲಿ ಇದ್ದ ಕಾರಣ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಿಗೆ ತಾತ್ಕಾಲಿಕವಾಗಿ ಮಠದ ಅಧಿಕಾರ ನೀಡಿತ್ತು. ಹೀಗಾಗಿ, ಈವರೆಗೆ ಚಿತ್ರದುರ್ಗದ ಪಿಡಿಜೆ ಅವರು ಮಠದ ಆಡಳಿತಾಧಿಕಾರಿಯಾಗಿದ್ದರು.

ಪ್ರಯಾಣಿಕರಿಗೆ ಅಭಯ ಕೊಟ್ಟ ಕೆಎಸ್‌ಆರ್‌ಟಿಸಿ: ಅಪಘಾತ ಪರಿಹಾರ ಮೊತ್ತ 10 ಲಕ್ಷ ರೂ.ಗೆ ಹೆಚ್ಚಳ!

ಚಿತ್ರದುರ್ಗಕ್ಕೆ ಹೋಗುವಂತಿಲ್ಲ: ನವಂಬರ್ 16ರಂದು ಮುರುಘಾ ಶ್ರೀ ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಮಠದ ಅಧಿಕಾರಕ್ಕಾಗಿ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್‌, ಮುರುಘಾ ಶ್ರೀಗೆ ಅಧಿಕಾರ ಹಸ್ತಾಂತರಿಸುವಂತೆ ಚಿತ್ರದುರ್ಗದ ಪ್ರಿನ್ಸಿಪಲ್‌ ಡಿಸ್ಟ್ರಿಕ್ಟ್‌ ಮತ್ತು ಸೆಷನ್ಸ್‌ ಜಡ್ಜ್‌ಗೆ ಸೂಚಿಸಿದೆ. ಈ ಮಧ್ಯೆ, ಷರತ್ತಿನನ್ವಯ ಅವರು ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ. ಹೀಗಾಗಿ, ಅವರು ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮಠದ ಆಡಳಿತ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

click me!