ಹುಬ್ಬಳ್ಳಿ: ನೇಹಾ ಹತ್ಯೆ ನಡೆದ ಸ್ಥಳ ಮಹಜರು ಮಾಡಿದ ಸಿಐಡಿ

By Kannadaprabha News  |  First Published Apr 25, 2024, 12:31 PM IST

ಅಧಿಕಾರಿಗಳ ತಂಡ ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದ ಫಯಾಜ್‌ನನ್ನು ವಶಕ್ಕೆ ಪಡೆದು ಅಲ್ಲಿಂದ ನೇರವಾಗಿ ಅಪರಾಧ ನಡೆದ ಸ್ಥಳವಾದ ಬಿವಿಬಿ ಕಾಲೇಜ್ ಕ್ಯಾಂಪಸ್‌ಗೆ ಕರೆ ತಂದು ಮಹಜರು ನಡೆಸಿತು. ಸಿಐಡಿಯ ಇನ್ನೊಂದು ತಂಡ ಆರೋಪಿಯ ಊರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮಕ್ಕೆ ತೆರಳಿ ಮಾಹಿತಿ ಕಲೆ ಹಾಕಿದೆ. 


ಹುಬ್ಬಳ್ಳಿ(ಏ.25): ಇಲ್ಲಿನ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಮಾಡಿದ ಆರೋಪಿ ಫಯಾಜ್‌ನನ್ನು ಧಾರವಾಡ ಕೇಂದ್ರ ಕಾರಾಗೃಹದಿಂದ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ಬುಧವಾರ ಕೃತ್ಯ ನಡೆದ ಸ್ಥಳಕ್ಕೆ ಕರೆ ತಂದು ಮಹಜರು ಮಾಡಿದರು.

ಇದಕ್ಕೂ ಮೊದಲು, ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್‌ನನ್ನು 14 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಹುಬ್ಬಳ್ಳಿ ಜೆಎಂಎಫ್‌ಸಿ ಕೋರ್ಟ್‌ ಗೆ ತನಿಖಾಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ಫಯಾಜ್‌ನನ್ನು ಆರು ದಿನ ಸಿಐಡಿ ಅಧಿಕಾರಿಗಳ ವಶಕ್ಕೆ ನೀಡಿ ಆದೇಶ ನೀಡಿದೆ. ಬಳಿಕ ಸಿಐಡಿ ಅಧಿಕಾರಿಗಳು ಫಯಾಜ್‌ನನ್ನು ಧಾರವಾಡದ ಡಿಎಆರ್‌ಮೈದಾನದ ಹತ್ತಿರ ಇರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಿದರು.

Tap to resize

Latest Videos

ಜೈಲಲ್ಲಿರುವ ಫಯಾಜ್‌ ಮೊಬೈಲ್‌ನಲ್ಲಿನ ಫೋಟೋ ಲೀಕ್‌ ಆಗಿದ್ದು ಹೇಗೆ?: ಜೋಶಿ

ಬಳಿಕ, ಅಧಿಕಾರಿಗಳ ತಂಡ ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದ ಫಯಾಜ್‌ನನ್ನು ವಶಕ್ಕೆ ಪಡೆದು ಅಲ್ಲಿಂದ ನೇರವಾಗಿ ಅಪರಾಧ ನಡೆದ ಸ್ಥಳವಾದ ಬಿವಿಬಿ ಕಾಲೇಜ್ ಕ್ಯಾಂಪಸ್‌ಗೆ ಕರೆ ತಂದು ಮಹಜರು ನಡೆಸಿತು. ಸಿಐಡಿಯ ಇನ್ನೊಂದು ತಂಡ ಆರೋಪಿಯ ಊರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮಕ್ಕೆ ತೆರಳಿ ಮಾಹಿತಿ ಕಲೆ ಹಾಕಿದೆ. ನೇಹಾಳನ್ನು ಕೊಲೆ ಮಾಡುವ ಉದ್ದೇಶ ಹೊಂದಿದ್ದ ಆರೋಪಿ ಫಯಾಜ್ 5 ದಿನ ಮೊದಲೇ ಚಾಕು ಖರೀದಿಸಿದ್ದ. ನೇಹಾ ಜತೆ ಕೆಲ ವಾರಗಳಿಂದ ಸಂಪರ್ಕ ಕಡಿತಗೊಂಡಿದ್ದ ರಿಂದಹತಾಶನಾಗಿದ್ವೇಷಸಾಧಿಸುತ್ತಿದ್ದ ಧಾರವಾಡದಲ್ಲಿ ಚಾಕು ಖರೀದಿಸಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಕಾಲೇಜಿಗೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏಪ್ರಿಲ್ 18ರಂದು ಕಾಲೇಜಿಗೆ ಬಂದಿದ್ದ ಫಯಾಜ್, ಬೈಕ್ ಹ್ಯಾಂಡಲ್ ಲಾಕ್ ಮಾಡದೆ, ಕೃತ್ಯ ಮುಗಿಸಿ ಪರಾರಿಯಾಗಲು ಯೋಜಿಸಿದ್ದ. ಬೈಕ್ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಲು ಸಾಧ್ಯವಾಗದಿದ್ದಾಗ ಕಾಲೇಜಿನ ಮುಖ್ಯದ್ದಾ ರದ ಮೂಲಕ ಪರಾರಿಯಾಗಲು ಯತ್ನಿಸಿದ್ದ. ಆ ವೇಳೆ ವಿದ್ಯಾರ್ಥಿಗಳು ಹಾಗೂ ಪೊಲೀಸರ ಕೈಗೆ ಸಿಕ್ಕಿ ಬಿದ್ದಿ ದ್ದಾನೆ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ನೇಹಾ ಮನೆಗೆ ಸುರ್ಜೇವಾಲಾ ಭೇಟಿ

ಹುಬ್ಬಳ್ಳಿ: ಈ ಮನೆ (ವಿದ್ಯಾರ್ಥಿನಿ ನೇಹಾ ಹಿರೇಮಠ) ಯಿಂದ ಹೊರಗೆ ರಾಜಕಾರಣ ಮಾಡಿ, ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ, ಕಾಂಗ್ರೆಸ್‌ನ ಕರ್ನಾಟಕಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು. ಇತ್ತೀಚೆಗೆ ಕಾಲೇಜು ಕ್ಯಾಂಪಸ್‌ನಲ್ಲೇ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ್ ಹಿರೇಮಠ ಪುತ್ರಿ, ಅಲ್ಲ, ಇಡೀ ಕರ್ನಾಟಕದ ಪುತ್ರಿ. ನಿರಂಜನ್ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಟುವಿದೆ. ನಾವೆಲ್ಲ ಅವರ ಜತೆಗಿದ್ದೇವೆ. ನಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ. ಆ ಕೆಲಸ ಸರ್ಕಾರ ಮಾಡುತ್ತದೆ. ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕು. 90 ದಿನಗಳಲ್ಲಿ ನ್ಯಾಯ ಸಿಗಲಿದೆ ಎನ್ನುವ ವಿಶ್ವಾಸವಿದೆ. ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದರು. 

click me!