ಬೆಂಗಳೂರು ಜನರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

By Suvarna NewsFirst Published Jul 6, 2020, 6:13 PM IST
Highlights

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಬೆಂಗಳೂರು ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಏಕೆ?ಏನು? ಈ ಕೆಳಗಿನಂತಿದೆ ನೋಡಿ.

ಬೆಂಗಳೂರು, (ಜುಲೈ.06): ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಯಾಗಿದ್ದ ಸಂಡೇ ಲಾಕ್​ಡೌನ್​​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರಿಗರಿಗೆ ಸೆಲ್ಯೂಟ್ ಹೊಡೆದಿದ್ದಾರೆ.

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸುನಾಮಿ ಸ್ಫೋಟಕ್ಕೆ ಬ್ರೇಕ್ ಹಾಕಲು ಸಂಡೇ ಲಾಕ್‍ಡೌನ್ ಅಸ್ತ್ರಕ್ಕೆ ಜನರಿಂದ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ಹಂತದಲ್ಲಿ ಮಹಾಮಾರಿ ಕೊರೋನಾ ಕಂಟ್ರೋಲ್‍ಗೆ ಸರ್ಕಾರ ಆದೇಶಿಸಿದ್ದ ಫಸ್ಟ್ ಸಂಡೇ ಲಾಕ್‍ಡೌನ್ ಇಂದು (ಸೋಮವಾರ) ಬೆಳಗ್ಗೆ 5 ಗಂಟೆಗೆ ಯಶಸ್ವಿಯಾಗಿ ಅಂತ್ಯವಾಗಿದೆ. 

ಬೆಂಗಳೂರು ಪೊಲೀಸರ ಬೆನ್ನತ್ತಿದ ಕೊರೋನಾ ಭೂತ..!

Thank you Bangalureans for show of self discipline in enforcing a 36 hour lockdown. Please, let’s do our own bit to enforce wearing of mask and SD. If you call 100, I will assure of immediate action of Hoysala’s strength next to you.

— Bhaskar Rao IPS (@deepolice12)

ಈ ಹಿಂದಿನ ಲಾಕ್‍ಡೌನ್‍ಗಳಿಗೆ ಹೋಲಿಸಿದರೆ 33 ಗಂಟೆಗಳ ಸಂಡೇ ಲಾಕ್‍ಡೌನ್‍ಗೆ ಜನ ಸಹಕರಿಸಿದ್ದಾರೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿ ಬೆಂಗಳೂರು ಜನರಿಗೆ ಧನ್ಯವಾದ ತಿಳಿಸಿದ್ದಾರೆ. 

36 ಗಂಟೆಗಳ ಲಾಕ್ ಡೌನ್​​ಗೆ ತಾವು ಉತ್ತಮ ಪ್ರತಿಕ್ರಿಯೆ ನೀಡಿದ್ದೀರಾ. ನಿಮಗೆಲ್ಲಾ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ.  ಇನ್ನು ಮುಂದೆ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ನಮಗೆ ನಾವೇ ಮುಂಜಾಗೃತ ಕ್ರಮ ತೆಗೆದುಕೊಳ್ಳಬೇಕು. ನಿಮಗೆ ಏನೇ ಸಮಸ್ಯೆಯಾದಲ್ಲಿ 100 ನಂಬರಿಗೆ ಫೋನ್ ಮಾಡಿ. ತಕ್ಷಣ ನಿಮ್ಮ ಪಕ್ಕದಲ್ಲಿರುವ ಹೊಯ್ಸಳ ಅವರು ಬಂದು ಸ್ಪಂದಿಸುತ್ತಾರೆ ಎಂದು ಜನತೆಗೆ ಭರವಸೆ ನೀಡಿದ್ದಾರೆ.

click me!