ಬೆಳಗಾವಿ: ಅಪಘಾತದಲ್ಲಿ ಪೌರಕಾರ್ಮಿಕನ ಸಾವು, ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Suvarna News   | Asianet News
Published : Jul 19, 2020, 03:17 PM IST
ಬೆಳಗಾವಿ: ಅಪಘಾತದಲ್ಲಿ ಪೌರಕಾರ್ಮಿಕನ ಸಾವು, ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಸಾರಾಂಶ

ಅಪಘಾತದಲ್ಲಿ ಮೃತಪಟ್ಟಿದ್ದ ಪೌರಕಾರ್ಮಿಕ ಜಿತೇಂದ್ರ ಡಾವಳೆ| ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪೌರಕಾರ್ಮಿಕರ ಧರಣಿ| ನಗರದ ಜಿಲ್ಲಾಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು|  

ಬೆಳಗಾವಿ(ಜು.19): ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ವಾಹನದಿಂದ ಬಿದ್ದು ಪೌರಕಾರ್ಮಿಕನೊಬ್ಬ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಇಂದು(ಭಾನುವಾರ) ನಡೆದಿದೆ. 

ನಗರದ ಜಿಲ್ಲಾಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು ಮೃತ ಪೌರ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್‌ ಶಾಸಕನಿಗೆ ಅಂಟಿದ ಕೊರೋನಾ ಸೋಂಕು, ಹೆಚ್ಚಿದ ಆತಂಕ..!

ಇಂದು ಬೆಳಗ್ಗೆ ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ವೇಳೆ ಗಂಭೀರವಾಗಿ ಗಾಯಗೊ೦ಡಿದ್ದ ಪೌರಕಾರ್ಮಿಕ ಜಿತೇಂದ್ರ ಡಾವಳೆ(35) ಮೃತಪಟ್ಟಿದ್ದರು. 
 

PREV
click me!

Recommended Stories

ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!
ವಿಭೂತಿಗಳಲ್ಲೇ ಐಕ್ಯರಾದ ಭಾರತದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ! ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ