ಚಾಮರಾಜನಗರ: ಹರಳುಕೋಟೆ ಆಂಜನೇಯನ ಆಶೀರ್ವಾದ ಪಡೆದ ಸಿಜೆಐ ಚಂದ್ರಚೂಡ್

Published : Oct 04, 2024, 08:01 PM ISTUpdated : Oct 04, 2024, 08:02 PM IST
ಚಾಮರಾಜನಗರ: ಹರಳುಕೋಟೆ ಆಂಜನೇಯನ ಆಶೀರ್ವಾದ ಪಡೆದ ಸಿಜೆಐ ಚಂದ್ರಚೂಡ್

ಸಾರಾಂಶ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರೆ ಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥನಿಗೆ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ವಿಶೇಷ ಪೂಜೆ, ಅರ್ಚನೆ ಮಾಡಿಸಿದರು. ಬಳಿಕ, ಬಿಳಿಗಿರಿರಂಗನ ಬೆಟ್ಟದಿಂದ ಕೆ.ಗುಡಿಗೆ ಬಂದು ಅರಣ್ಯ ಸೌಂದರ್ಯ ವೀಕ್ಷಿಸಿದ್ದಾರೆ. 

ಚಾಮರಾಜನಗರ(ಅ.04): ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಇಂದು(ಶುಕ್ರವಾರ) ಕುಟುಂಬ ಸಮೇತರಾಗಿ ಬಿಳಿಗಿರಿರಂಗನ ಬೆಟ್ಟ, ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. 

ಯಳಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರೆ ಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥನಿಗೆ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ವಿಶೇಷ ಪೂಜೆ, ಅರ್ಚನೆ ಮಾಡಿಸಿದರು. ಬಳಿಕ, ಬಿಳಿಗಿರಿರಂಗನ ಬೆಟ್ಟದಿಂದ ಕೆ.ಗುಡಿಗೆ ಬಂದು ಅರಣ್ಯ ಸೌಂದರ್ಯ ವೀಕ್ಷಿಸಿದ್ದಾರೆ. 

ಚಾಮರಾಜನಗರ: ಸಿಸಿ ಕ್ಯಾಮೆರಾ ತೆಗಿದಿದ್ರೆ ಪರಿಣಾಮ ಭೀಕರ, ಎಚ್ಚರಿಕೆ ಪತ್ರ ಬರೆದ ಖದೀಮರು, ಆತಂಕದಲ್ಲಿ ಜನತೆ!

ಚಾಮರಾಜನಗರದ ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿ ಹನುಮನ ದರ್ಶನ ಪಡೆದು ಅರ್ಚನೆ ಮಾಡಿಸಿದರು. ಹರಳುಕೋಟೆ ಆಂಜನೇಯಸ್ವಾಮಿ ದೇಗುಲವು ಬಬ್ರುವಾಹನನಿಂದ ಸ್ಥಾಪಿತಗೊಂಡ ಮೂರ್ತಿ ಎಂಬ ನಂಬಿಕೆ ಇದ್ದು ಪುರಾಣ ಐತಿಹ್ಯ ಹಾಗೂ ಇತಿಹಾಸ ಇದೆ.‌ 

PREV
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ