ಸ್ವಾಸ್ಥ್ಯ ಸಮಾಜಕ್ಕಾಗಿ ಸ್ವಚ್ಛತಾ ಆಂದೋಲನ

By Kannadaprabha News  |  First Published Oct 2, 2023, 6:04 AM IST

ದೇಶಾದ್ಯಂತ ಗಾಂಧೀ ಜಯಂತಿಯನ್ನು ಆಚರಿಸುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಒಂದು ದಿನ ಮುನ್ನ ದೇಶಾದ್ಯಂತ ಸ್ವಚ್ಛತಾ ಆಂದೋಲನದಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಪ್ರಧಾನಿ ಮೋದಿಯವರ ಆಶಯದಂತೆ ಎಲ್ಲರೂ ಸ್ವಚ್ಛತೆ ಕಾಪಾಡಲು ಮುಂದಾಗಬೇಕು ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಡಾ.ಪ್ರಭಾಕರ್‌ ಅಭಿಪ್ರಾಯಪಟ್ಟರು.


  ತುಮಕೂರು :  ದೇಶಾದ್ಯಂತ ಗಾಂಧೀ ಜಯಂತಿಯನ್ನು ಆಚರಿಸುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಒಂದು ದಿನ ಮುನ್ನ ದೇಶಾದ್ಯಂತ ಸ್ವಚ್ಛತಾ ಆಂದೋಲನದಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಪ್ರಧಾನಿ ಮೋದಿಯವರ ಆಶಯದಂತೆ ಎಲ್ಲರೂ ಸ್ವಚ್ಛತೆ ಕಾಪಾಡಲು ಮುಂದಾಗಬೇಕು ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಡಾ.ಪ್ರಭಾಕರ್‌ ಅಭಿಪ್ರಾಯಪಟ್ಟರು.

ಸಿದ್ದಾರ್ಥ ಮಹಾವಿದ್ಯಾಲಯ ಕಾಲೇಜು ಹಾಗೂ ಹೆಗ್ಗೆರೆ ಗ್ರಾಮಸಹಯೋಗದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಹೆಗ್ಗೆರೆ ಗ್ರಾಮದಲ್ಲಿ ಸ್ವಚ್ಛತಾ ಆಂದೋಲನ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Latest Videos

undefined

ಕೇಂದ್ರ ಸರ್ಕಾರ ಗಾಂಧಿ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನ ಎಂಬ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಘ ಸಂಸ್ಥೆಗಳ ಸಯೋಗದೊಂದಿಗೆ ತಮ್ಮ ಸ್ಥಳೀಯ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳುವ ಮೂಲಕ ರಸ್ತೆಗಳು, ರೈಲ್ವೆ ನಿಲ್ದಾಣ ಹಾಗೂ ಶಾಲಾ ಆವರಣಗಳ ಕಸ ಗುಡಿಸಿ ಸ್ವಚ್ಛತೆಯಡೆಗೆ ಒಂದು ಹೆಜ್ಜೆ ಮುಂದಿಟ್ಟಿದ್ದೇವೆ ಎಂದರು.

ನಮ್ಮ ಸುತ್ತಮುತ್ತಲೂ ಉಂಟಾಗುವ ಗಲೀಜಿನಿಂದಾಗಿ ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತಿದ್ದು, ರಾಷ್ಟ್ರಪಿತ ಮಹಾತ್ಮಗಾಂಧಿಯವರು ತಾವೇ ಸ್ವತಃ ಸ್ವಚ್ಛತಾಕಾರ್ಯಕ್ಕೆ ಇಳಿಯುವ ಮೂಲಕ ಪೊರಕೆ ಹಿಡಿದು ನಿಂತಿದ್ದರು. ಆದ್ದರಿಂದ ಗಾಂಧಿ ಜಯಂತಿಗೂ ಮುನ್ನವೇ ದೇಶಾದ್ಯಂತ ಸ್ವಚ್ಛತೆಗೆ ಎಲ್ಲರೂ ಮುಂದಾಗಿದ್ದು, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಆರೋಗ್ಯಕರವಾದ ಜೀವನ ನಡೆಸಬಹುದಾಗಿದೆ ಎಂದರು.

ಹೆಗ್ಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸಂಪತ್‌ಕುಮಾರ್ ಮಾತನಾಡಿ, ಸಿದ್ದಾರ್ಥ ವೈದ್ಯಕೀಯ ಮಹಾ ವಿದ್ಯಾಲಯವು ಹೆಗ್ಗೆರೆ ಗ್ರಾಮಸ್ಥರ ಸಹಯೋಗದೊಂದಿಗೆ ಗ್ರಾಮದ ಪ್ರಮುಖ ಸ್ಥಳಗಳನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ದೇಶದ ಸ್ವಚ್ಛ ಭಾರತ ಆಂದೋಲನ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮುಂದಾಗಿದ್ದಾರೆಎಂದರು.

ಸಿದ್ಧಾರ್ಥ ವೈದ್ಯಕೀಯ ಮಹಾ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಹೆಗ್ಗೆರೆಗ್ರಾಮ ಪಂಚಾಯಿತಿಯ ಸ್ವಚ್ಛತಾ ಸಿಬ್ಬಂದಿಗಳೊಂದಿಗೆ ಪೊರಕೆ ಮತ್ತು ಡಸ್ಟ್ ಬಿನ್ ಗಳನ್ನು ಹಿಡಿದು ಗ್ರಾಮದ ಪ್ರಮುಖ ಬೀದಿಗಳು ಸೇರಿದಂತೆ ರೈಲ್ವೆ ನಿಲ್ದಾಣ ಹಾಗೂ ಗ್ರಾಮ ಪಂಚಾಯಿತಿ ಕಚೇರಿ ಆವರಣವನ್ನು ಸ್ವಚ್ಛಗೊಳಿಸಿದರು.

ಸ್ವಚ್ಛತಾ ಅಭಿಯಾನದಲ್ಲಿ ಸಾಹೇ ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಶಶಿಧರ್ ಸೇರಿದಂತೆ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಗ್ರಾಪಂ ಸದಸ್ಯರು, ಸಿಬ್ಬಂದಿ ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.

click me!