ಹಾವೇರಿ: ಸ್ವಂತ ಖರ್ಚಲ್ಲಿ ಶಾಸಕ ಕೋಳಿವಾಡರಿಂದ ಮೋಡ ಬಿತ್ತನೆ

By Kannadaprabha NewsFirst Published Sep 3, 2023, 10:29 AM IST
Highlights

ವಿಮಾನ ಮೂರು ದಿನಗಳ ಕಾಲ ಸ್ಥಳೀಯವಾಗಿದ್ದು, ಮೋಡಗಳ ಲಭ್ಯತೆಯ ಅನುಗುಣವಾಗಿ ಅಲ್ಲಲ್ಲಿ ಮೋಡಬಿತ್ತನೆ ಮಾಡಲಿದೆ. ಈ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿಯಿದೆ. ಈಗಾಗಲೇ ಮೋಡಬಿತ್ತನೆ ಮಾಡಲು ಜಿಲ್ಲಾಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದಿಂದ ಪರವಾನಗಿ ಪಡೆದುಕೊಳ್ಳಲಾಗಿದೆ: ಶಾಸಕ ಪ್ರಕಾಶ ಕೋಳಿವಾಡ 

ರಾಣಿಬೆನ್ನೂರು(ಸೆ.03): ಹಾವೇರಿ ಜಿಲ್ಲೆಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲಾಗುವುದು ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿ, ನಮ್ಮ ಪಿಕೆಕೆ (ಪಕ್ಷಾತೀತ ಕಾಯಕದ ಕನಸು) ಸಂಸ್ಥೆಯ ವತಿಯಿಂದ ಈ ಮೋಡ ಬಿತ್ತನೆ ಮಾಡಲಾಗುತ್ತಿದೆ. ಸೆ.4ರಂದು ಮಧ್ಯಾಹ್ನ 2ಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ. 

ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

ವಿಮಾನ ಮೂರು ದಿನಗಳ ಕಾಲ ಸ್ಥಳೀಯವಾಗಿದ್ದು, ಮೋಡಗಳ ಲಭ್ಯತೆಯ ಅನುಗುಣವಾಗಿ ಅಲ್ಲಲ್ಲಿ ಮೋಡಬಿತ್ತನೆ ಮಾಡಲಿದೆ. ಈ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿಯಿದೆ. ಈಗಾಗಲೇ ಮೋಡಬಿತ್ತನೆ ಮಾಡಲು ಜಿಲ್ಲಾಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದಿಂದ ಪರವಾನಗಿ ಪಡೆದುಕೊಳ್ಳಲಾಗಿದೆ. ಸಚಿವರಾದ ಶಿವಾನಂದ ಪಾಟೀಲ, ಎಚ್‌.ಕೆ. ಪಾಟೀಲ, ಸತೀಶ ಜಾರಕಿಹೊಳಿ, ಸಂತೋಷ ಲಾಡ್‌ ಹಾಗೂ ಹಾವೇರಿ, ಧಾರವಾಡ ಜಿಲ್ಲೆಗಳ ಶಾಸಕರು ಈ ಮೋಡ ಬಿತ್ತನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

click me!