ಲಾಕ್‌ಡೌನ್ ಸಡಿಲಿಕೆ: ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ

By Suvarna NewsFirst Published May 2, 2020, 1:21 PM IST
Highlights

ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆ ಪ್ರಾರಂಭ|ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ| ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮ ವಹಿಸಲು ಸೂಚನೆ|

ಬೆಂಗಳೂರು(ಮೇ.02): ಮಹಾಮಾರಿ ಕೋವಿಡ್-9 ನಿಯಂತ್ರಣ ಹಾಗೂ ಲಾಕ್‌ಡೌನ್ ವಿಷಯಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು(ಶನಿವಾರ) ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆ. ದೇಶಾದ್ಯಂತ ಮೂರನೇ ಹಂತದ ಲಾಕ್‌ಡೌನ್‌ ಮೇ. 4 ರಿಂದ ಮೇ. 17 ರ ವರೆಗೆ ಮುಂದೂಡಲಾಗಿದೆ. ಹೀಗಾಗಿ ಈ ವಿಡಿಯೋ ಕಾನ್ಫರೆನ್ಸ್ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. 

ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಮುಖ್ಯಾಂಶಗಳು ಇಂತಿವೆ

ಲಾಕ್‌ಡೌನ್ ವಿಸ್ತರಣೆ; 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ತುರ್ತು ಸಭೆ

1. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಸೂಚಿಸಲಾಯಿತು.

2. ಕಂಟೈನ್‌ಮೆಂಟ್ ಝೋನ್ ಹೊರತು ಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ತಿಳಿಸಲಾಯಿತು.

3. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮ ವಹಿಸಲು ಸೂಚಿಸಲಾಯಿತು.

4. ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡುವಂತೆ ತಿಳಿಸಲಾಯಿತು.

5. ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂತಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಯಿತು.

6.  ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು.

7. ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
 

click me!