'ಕುಮಾರಸ್ವಾಮಿಗೆ ಮಾಡೋಕೆ ಕೆಲ್ಸ ಇಲ್ಲ, ಇದನ್ನಾದ್ರೂ ಮಾಡ್ಲಿ'

By Web DeskFirst Published Nov 25, 2019, 10:05 AM IST
Highlights

ಉಪಚುನಾವಣೆಯಲ್ಲಿ 15 ಕ್ಕೆ 15  ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ| ಯಾರ ಬೆಂಬಲವೂ ಇಲ್ಲದೆ ಮೂರುವರೆ ವರ್ಷ ಅವಧಿ‌ಪೂರ್ಣ ಮಾಡುತ್ತೇವೆ| ಯಾವುದೇ ಪಕ್ಷದ ಬೆಂಬಲ ಇಲ್ಲದೆ ಆಡಳಿತ ನಡೆಸುತ್ತೇವೆ ಎಂದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ|

ದಾವಣಗೆರೆ(ನ.25): ಉಪಚುನಾವಣೆಯಲ್ಲಿ 15 ಕ್ಕೆ 15  ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ಯಾರ ಬೆಂಬಲವೂ ಇಲ್ಲದೆ ಮೂರುವರೆ ವರ್ಷ ಅವಧಿ‌ಪೂರ್ಣ ಮಾಡುತ್ತೇವೆ. ಯಾವುದೇ ಪಕ್ಷದ ಬೆಂಬಲ ಇಲ್ಲದೆ ಆಡಳಿತ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. 

ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಅವರು ಚುನಾವಣೆಯ ಆಯೋಗಕ್ಕೆ ದೂರು ನೀಡಿದ ವಿಚಾರದ ಬಗ್ಗೆ ಸೋಮವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಪ್ರತಿಪಕ್ಷಗಳಿಗೆ ಬೇರೆ ಕೆಲಸ ಇಲ್ಲ ಅದನ್ನಾದರೂ ‌ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬೆಳಗಾವಿ ಚುನಾವಣಾ ಪ್ರಚಾರದಲ್ಲಿ ಯಡಿಯೂರಪ್ಪ ಸರ್ಕಾರವನ್ನು ವೀರಶೈವ ಸಮುದಾಯಕ್ಕೆ ಬೆಂಬಲಿಸುವಂತೆ ಬಹಿರಂಗವಾಗಿ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಕುಮಾರಸ್ವಾಮಿ ಅವರು ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದಾರೆ. 

ಬೆಂಗಳೂರಿನಲ್ಲಿ ಹುಳಿಮಾವು ಕೆರೆ ಒಡೆದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಎಲ್ಲ ಸಂತ್ರಸ್ತರಿಗೆ ಪರಿಹಾರ ವ್ಯವಸ್ಥೆ ಕಲ್ಫಿಸಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ  ಈಗಾಗಲೇ ಸೂಚನೆ ನೀಡಿದ್ದೇನೆ ಹಾಗೂ ಅವರಿಂದ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. 

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.
 

click me!