'ರಾಜ್ಯದಲ್ಲಿ ಮೂರೂವರೆ ವರ್ಷ ಸ್ಥಿರ ಸರ್ಕಾರ ಕೊಡುತ್ತೇವೆ'

Published : Dec 08, 2019, 10:13 AM IST
'ರಾಜ್ಯದಲ್ಲಿ ಮೂರೂವರೆ ವರ್ಷ ಸ್ಥಿರ ಸರ್ಕಾರ ಕೊಡುತ್ತೇವೆ'

ಸಾರಾಂಶ

ಫಲಿತಾಂಶ ಬಳಿಕ ಖಂಡಿತ ಬದಲಾವಣೆಯಾಗಲಿದೆ| ಆಡಳಿತ ಪಕ್ಷವಾಗಿ ನಾವು ಇರುತ್ತೇವೆ| ವಿರೋಧ ಪಕ್ಷದ ಸ್ಥಾನದಲ್ಲಿ ಕಾಂಗ್ರೆಸ್ ಇರುತ್ತೆ ಎಂದ ಸಿಎಂ ಯಡಿಯೂರಪ್ಪ| ಮುಂದಿನ ಬಾರಿಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ| ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಸರ್ಕಾರ ರಚಿಸಲಿದೆ|

ಯಲಹಂಕ(ಡಿ.08): ಉಪಚುನಾವಣೆಯಲ್ಲಿ ನಾನು ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು ಎರಡೆರಡು ಸಲ ಪ್ರಚಾರ ಮಾಡಿದ್ದೇವೆ. ನೂರಕ್ಕೆ ನೂರಷ್ಟು ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ‌ರಾಜ್ಯದಲ್ಲಿ ಮೂರೂವರೆ ವರ್ಷ ಸ್ಥಿರ ಸರ್ಕಾರ ಕೊಡುತ್ತೇವೆ. ಪ್ರತಿಪಕ್ಷಗಳೂ ಸಹಕಾರ ಕೊಡುವಂತೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. 

ಫಲಿತಾಂಶ ಬಳಿಕ ಬದಲಾವಣೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ಭಾನುವಾರ ಯಲಹಂಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶ ಬಳಿಕ ಖಂಡಿತ ಬದಲಾವಣೆಯಾಗಲಿದೆ. ಆಡಳಿತ ಪಕ್ಷವಾಗಿ ನಾವು ಇರುತ್ತೇವೆ. ವಿರೋಧ ಪಕ್ಷದ ಸ್ಥಾನದಲ್ಲಿ ಕಾಂಗ್ರೆಸ್ ಇರುತ್ತೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮುಂದಿನ ಬಾರಿಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಸರ್ಕಾರ ರಚಿಸಲಿದೆ. ಇದಕ್ಕೆ ಈಗಿಂದಲೇ ನಾವು ಸಿದ್ಧತೆ ಆರಂಭಿಸಿದ್ದೇವೆ. ಎಂದು ಹೇಳಿದ್ದಾರೆ. ದೆಹಲಿಗೆ ಹೋಗುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಈ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ. 

ಡಿಸೆಂಬರ್ 5ರಂದು ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.
 

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!