* ಮಂಡಿ ನೋವು ಚಿಕಿತ್ಸೆಗಾಗಿ ಸಿಎಂ, ಅಮೆರಿಕ ಪ್ರಯಾಣ ವದಂತಿ ಸುಳ್ಳು
* ಮಂಡಿ ನೋವು ಇರುವುದು ನಿಜ, ಅದಕ್ಕೆ ರಾಜ್ಯದಲ್ಲೇ ಚಿಕಿತ್ಸೆ
* ಬೆಳಗಾವಿ ಅಧಿವೇಶನದ ಬಳಿಕ ಶಸ್ತ್ರಚಿಕಿತ್ಸೆ ಸಾಧ್ಯತೆ: ಆಪ್ತರು
ಬೆಂಗಳೂರು(ಡಿ. 10) ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುತ್ತಾರೆ ಎಂಬ ವದಂತಿ ಹಬ್ಬಿದ್ದು, ಇದನ್ನು ಮುಖ್ಯಮಂತ್ರಿಗಳ(Karnataka CM Office) ಕಚೇರಿ ಬಲವಾಗಿ ಅಲ್ಲಗಳೆದಿದೆ.
ಆ ವದಂತಿಗೆ ರೆಕ್ಕೆಪುಕ್ಕ ಬೆಳೆದು ಸುಮಾರು ಎರಡು ಅಥವಾ ಮೂರು ತಿಂಗಳ ಕಾಲ ಶಸ್ತ್ರಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯಬೇಕಾಗಿರುವುದರಿಂದ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation)ನೀಡುತ್ತಾರೆ ಎಂಬ ಸುಳ್ಳುಸುದ್ದಿ ಕೂಡ ಹಬ್ಬಿತ್ತು.
undefined
ಮುಖ್ಯಮಂತ್ರಿಗಳಿಗೆ ಮಂಡಿ ನೋವು ಇರುವುದು ನಿಜ. ಆದರೆ, ಅದಕ್ಕೆ ಸ್ವದೇಶದಲ್ಲೇ, ಅದರಲ್ಲೂ ಕರ್ನಾಟಕದಲ್ಲೇ, ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಅನಿವಾರ್ಯತೆ ಎದುರಾದರೂ ಅದನ್ನು ರಾಜ್ಯದಲ್ಲೇ ಮಾಡಿಸಿಕೊಳ್ಳಲಿದ್ದಾರೆ. ಯಾವುದೇ ಕಾರಣಕ್ಕೂ ವಿದೇಶಕ್ಕೆ ತೆರಳುವ ಯೋಚನೆ ಇಲ್ಲ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಬೊಮ್ಮಾಯಿ ಅವರು ಮಂಡಿ ನೋವಿನಿಂದ ಬಳಲುತ್ತಿದ್ದಾರೆ. ಸಭೆ ಸಮಾರಂಭಗಳಿಗೆ ತೆರಳಿದಾಗ ಅದು ಸ್ಪಷ್ಟವಾಗಿ ವ್ಯಕ್ತವಾಗುತ್ತದೆ. ಇತ್ತೀಚೆಗೆ ಅವರು ಲಿಫ್ಟ್ ಇಲ್ಲದೆ ಮೆಟ್ಟಿಲು ಹತ್ತುವಂಥ ಕಾರ್ಯಕ್ರಮಗಳನ್ನೇ ಒಪ್ಪಿಕೊಳ್ಳುತ್ತಿಲ್ಲ. ಈ ಚಿಕಿತ್ಸೆಗೆ ವಿಶ್ರಾಂತಿ ಅಗತ್ಯವಿದೆ. ಆದರೆ, ಅವರು ಕಾರ್ಯಬಾಹುಳ್ಯದಿಂದಾಗಿ ವಿಶ್ರಾಂತಿ ತೆಗೆದುಕೊಳ್ಳದೆ ಸತತ ಪ್ರವಾಸ ಮಾಡುತ್ತಿದ್ದಾರೆ.
ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಠ
ಪ್ರಸಕ್ತ ಮುಂದಿನ ವಾರದಿಂದ ಆರಂಭವಾಗಲಿರುವ ಬೆಳಗಾವಿ ಅಧಿವೇಶನ ಮುಗಿದ ಬಳಿಕ ಕೆಲವು ದಿನಗಳ ಕಾಲ ಬೆಂಗಳೂರಿನಲ್ಲೇ ತಮ್ಮ ಮಂಡಿನೋವಿಗೆ ಚಿಕಿತ್ಸೆ ಪಡೆದುಕೊಳ್ಳುವ ಸಾಧ್ಯತೆಯಿದೆ ಇದೆ ಎಂದು ತಿಳಿದು ಬಂದಿದೆ.
ಆ ವದಂತಿಗೆ ರೆಕ್ಕೆಪುಕ್ಕ ಬೆಳೆದು ಸುಮಾರು ಎರಡು ಅಥವಾ ಮೂರು ತಿಂಗಳ ಕಾಲ ಶಸ್ತ್ರಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯಬೇಕಾಗಿರುವುದರಿಂದ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಕೂಡ ಹಬ್ಬಿತ್ತು.
ಇದಕ್ಕೆ ಸಷ್ಟನೆ ನೀಡಿರುವ ಮುಖ್ಯಮಂತ್ರಿಗಳ ಆಪ್ತರು, ಅವರಿಗೆ ಮಂಡಿನೋವು ಇರುವುದು ನಿಜ. ಅದಕ್ಕೆ ಶಸ್ತ್ರಚಿಕಿತ್ಸೆಯೇ ಆಗಬೇಕಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಒಂದು ವೇಳೆ, ಮಂಡಿಯ ಸಮಸ್ಯೆಗೆ ಶಸ್ತ್ರಚಿಕಿತ್ಸೆಯೇ ಆಗಬೇಕಿದ್ದಲ್ಲಿ ಮುಖ್ಯಮಂತ್ರಿಗಳು ಸ್ವದೇಶದಲ್ಲೇ, ಅದರಲ್ಲೂ ರಾಜ್ಯದಲ್ಲೇ ಮಾಡಿಸಿಕೊಳ್ಳುತ್ತಾರೆ. ಯಾವುದೇ ಕಾರಣಕ್ಕೂ ವಿದೇಶಕ್ಕೆ ತೆರಳುವ ಚಿಂತನೆ ಮಾಡಿಲ್ಲ ಎಂದು ಹೇಳಿದ್ದಾರೆ.
ಬೊಮ್ಮಾಯಿ ಅವರು ಕಳೆದ ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದಾರೆ. ಸಭೆ ಸಮಾರಂಭಗಳಿಗೆ ತೆರಳಿದಾಗ ಅದು ಸ್ಪಷ್ಟವಾಗಿ ವ್ಯಕ್ತವಾಗುತ್ತದೆ. ಇದಕ್ಕೆ ಚಿಕಿತ್ಸೆ ಅಗತ್ಯವಿದೆ. ಆದರೆ, ಅವರು ಕಾರ್ಯಬಾಹುಳ್ಯದಿಂದಾಗಿ ವಿಶ್ರಾಂತಿ ತೆಗೆದುಕೊಳ್ಳದೆ ಸತತ ಪ್ರವಾಸ ಮಾಡುತ್ತಿದ್ದಾರೆ. ಪ್ರಸಕ್ತ ಮುಂದಿನ ವಾರದಿಂದ ಆರಂಭವಾಗಲಿರುವ ಬೆಳಗಾವಿ ಅಧಿವೇಶನ ಮುಗಿದ ಬಳಿಕ ಕೆಲವು ದಿನಗಳ ಕಾಲ ಬೆಂಗಳೂರಿನಲ್ಲೇ ತಮ್ಮ ಮಂಡಿನೋವಿಗೆ ಚಿಕಿತ್ಸೆ ಪಡೆದುಕೊಳ್ಳುವ ಸಾಧ್ಯತೆಯಿದೆ ಇದೆ ಎಂದು ತಿಳಿದು ಬಂದಿದೆ.
ಬೆಳಗಾವಿ ಅಧಿವೇಶನ: ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ. ಇನ್ನೊಂದು ಕಡೆ ವಿಧಾನ ಪರಿಷತ್ ಚುನಾವಣೆ ಸಹ ಇದೆ. ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ ಎಂಬ ಮಾತುಗಳು ರಾಜಕಾರಣದ ವಲಯದಲ್ಲಿವೆ. ಪರಿಷತ್ ಫಲಿತಾಂಶದ ಪರಿಣಾಮವನ್ನು ಬೊಮ್ಮಾಯಿ ಎದುರಿಸಬೇಕಾಗುತ್ತದೆ. ಅಕಲಿಕ ಮಳೆ ಮತ್ತು ಪರಿಹಾರದ ಕ್ರಮಗಳ ಬಗ್ಗೆಯೂ ಸರ್ಕಾರ ಉತ್ತರ ನೀಡಬೇಕಾಗುತ್ತದೆ. ಇನ್ನೊಂದು ಕಡೆ ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ ಮಾತುಗಳು ಕೇಳಿಬರುತ್ತಿವೆ. ಸಚಿವ ಆಕಾಂಕ್ಷಿಗಳು ದೆಹಲಿ ಪ್ರವಾಸ ಸಹ ಮಾಡಿದ್ದರು.