ಚಿತ್ರದುರ್ಗದ ಹೊಳಲ್ಕೆರೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

By Suvarna NewsFirst Published Mar 19, 2023, 10:19 PM IST
Highlights

ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಸಿಎಂ ಬೊಮ್ಮಾಯಿ ನೆರವೇರಿಸಿದರು.

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿತ್ರದುರ್ಗ (ಮಾ.19): ಮಧ್ಯ ಕರ್ನಾಟಕದ ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಯನ್ನು ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಹೊಳಲ್ಕೆರೆ ಪಟ್ಟಣದಲ್ಲಿ ಭಾನುವಾರ ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ, ಅವರು ಕೈಗೊಂಡ ದಿಟ್ಟ ನಿಲುವಿನಿಂದಾಗಿ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ  ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿ, ಕಾಮಗಾರಿ ಆರಂಭಿಸಲಾಯಿತು.  ಕೇಂದ್ರ ಸರ್ಕಾರ ಈ ಯೋಜನೆಗೆ ರೂ.5300 ಕೋಟಿಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ.   ಮಧ್ಯ ಕರ್ನಾಟಕದ ಜನರ ಭೂಮಿಗೆ ನೀರು ಕೊಟ್ಟು, ಬರದ ಭೂಮಿಯನ್ನು ಹಸಿರಾಗಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು.

ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹೊಳಲ್ಕೆರೆ ಪಟ್ಟಣದಲ್ಲಿ ಅಭಿವೃದ್ಧಿಯ ಹೊಳೆ ಹರಿದಿದೆ. ಈ ಕ್ಷೇತ್ರದಲ್ಲಿ ಕಳೆದ ನಾಲ್ಕೂ ಮುಕ್ಕಾಲು ವರ್ಷದಲ್ಲಿ ರೂ.4116 ಕೋಟಿ ವೆಚ್ಚದಲ್ಲಿ ವಿವಿದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಮಾಡಲಾಗಿದೆ.  ಎಂ. ಚಂದ್ರಪ್ಪ ಜನೋಪಯೋಗಿ ಶಾಸಕ, ದಣಿವರಿಯದೆ ಕೆಲಸ ಮಾಡಿದ್ದಾರೆ. ನಾಲ್ಕು ವರ್ಷದಲ್ಲಿ ಹೊಳಲ್ಕೆರೆ ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಕಿರಿದಾದ ರಸ್ತೆಗಳು ಅಭಿವೃದ್ಧಿಯಾಗಿವೆ. ಸರ್ಕಾರಿ ಕಟ್ಟಡಗಳು ಆಧುನಿಕ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಗಿಂತಲೂ ಉತ್ತಮವಾದ ತಾಲ್ಲೂಕು ಆಸ್ಪತ್ರೆ,  ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಪುರಸಭೆ ಕಟ್ಟಡ, ಕ್ಷೇತ್ರದ ಎಲ್ಲೆಡೆ ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದಾರೆ ಎಂದರು.

ಹೊಳಲ್ಕೆರೆ ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿಗೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ 6000 ಕಿ.ಮೀ. ಉದ್ದ ಹೆದ್ದಾರಿ ನಿರ್ಮಿಸಲಾಗಿದೆ. 7100 ಕೋಟಿ ವೆಚ್ಚದಲ್ಲಿ ರೈಲ್ವೇ ಸಂಪರ್ಕ ಅಭಿವೃದ್ಧಿ ಪಡಿಸಲಾಗುತ್ತದೆ. ರೈತರಿಗೆ ನೀರಾವರಿ ಕಲ್ಪಿಸಿಕೊಳ್ಳಲು ಸಬ್ಸಿಡಿ ನೀಡಲಾಗಿದೆ. ಎಸ್.ಸಿ. ಎಸ್.ಟಿ ಜನಾಂಗದವರಿಗೆ ಉಚಿತವಾಗಿ 75 ಯುನಿಟ್ ವಿದ್ಯುತ್ ನೀಡಲಾಗುತ್ತಿದೆ.  ಭೂ ರಹಿತರಿಗೆ ಭೂ ಖರೀದಿಗೆ ರೂ.20 ಲಕ್ಷ ನೀಡಲಾಗುತ್ತಿದೆ. ರಾಜ್ಯದ ಜನರ ಅಭಿವೃದ್ಧಿಯ ಧ್ಯೇಯ ಹೊಂದಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.‌ 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ,  ಸರ್ಕಾರ ಪ್ರತಿಯೊಂದು ವಿಚಾರದಲ್ಲಿ ಸಾರ್ವಜನಿಕರ ಅಭಿವೃದ್ಧಿಗಾಗಿ ಕೆಲಸ ಮಾಡಿದೆ. ಈ ಹಿಂದೆ ಬರಗಾಲದಿಂದ ತಾಲೂಕು ನೀರಿನ ಸಮಸ್ಯೆಗೆ ಸಿಲುಕಿತ್ತು. ರೈತರ ತೋಟಗಳು ಒಣಗಿ ಹೋಗುತ್ತಿದ್ದವು. ಸರ್ಕಾರ ಕೆರೆ ಕಟ್ಟೆಗಳು, ಚಕ್ ಡ್ಯಾಮ್, ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದಿಂದ ಕ್ಷೇತ್ರದಲ್ಲಿ ಜಲ ಸಮೃದ್ದಿಯಾಗಿದೆ.

ಭದ್ರಾ ಮೇಲ್ದಂಡೆ ಯೋಜನೆ ಕುರಿತು ಆಂಧ್ರ ಕ್ಯಾತೆಗೆ ಕೋಟೆನಾಡಿನ ರೈತರು ಆಕ್ರೋಶ

ಅಂರ್ತಜಲ ಮಟ್ಟದ ಹೆಚ್ಚಳದಿಂದ ರೈತರ ಬವಣೆ ದೂರವಾಗಿದೆ. ಹಿಂದೆ ರೈತರಿಗೆ 1 ತಾಸು ವಿದ್ಯುತ್ ನೀಡಲಾಗುತ್ತಿತ್ತು. ಈಗ 5 ರಿಂದ 6 ತಾಸು ವಿದ್ಯುತ್ ನೀಡಲಾಗುತ್ತಿದೆ.  ಇದರಿಂದ ರೈತರ ತೋಟಗಳಿಗೆ ನೀರು ಲಭಿಸುತ್ತಿದೆ. ಮಹಿಳೆಯರು ಸರತಿ ಸಾಲಿನಲ್ಲಿ ಕೊಡ ಹಿಡಿದು ಕುಡಿಯುವ ನೀರಿಗಾಗಿ ಕಾಯುತ್ತಿದ್ದರು. ಇಂದು ಈ ಚಿತ್ರಣ ಬದಲಾಗಿದೆ. ಸರ್ಕಾರ ರೂ.367 ಕೋಟಿ ಕುಡಿಯುವ ನೀರಿಗೆ ಹಾಗೂ ಜಲಜೀವನ್ ಮಿಷನ್ ಅಡಿ 180 ಕೋಟಿ ಅನುದಾನ ನೀಡಿದೆ. ರೂ.544 ಕೋಟಿ ವೆಚ್ಚದಲ್ಲಿ ರಸ್ತೆಗಳು, ರೂ. 220 ಕೋಟಿ ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ.  ಕ್ಷೇತ್ರದಲ್ಲಿ 9 ಸಾವಿರ ಮನೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸರ್ಕಾರ ಅಸ್ತಿತ್ವದಲ್ಲಿ ಇರದ ಸೊಸೈಟಿಗಳ ಹೆಸರಿನಲ್ಲಿರುವ ಭೂಮಿಯನ್ನು ಹಿಂಪಡೆದು ಗೇಣಿದಾರಿಗೆ ನೀಡಲು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 1000 ಎಕರೆಯಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪನೆ ಮಾಡಲು ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.

ಆಂಧ್ರದಿಂದ ಮತ್ತೆ ಕ್ಯಾತೆ..! ಭದ್ರಾ ಮೇಲ್ದಂಡೆ ಯೋಜನೆಗೆ ತಡೆ ನೀಡಲು ಸುಪ್ರೀಂಕೋರ್ಟ್‌ನಲ್ಲಿ ರಿಟ್‌ ಅರ್ಜಿ

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಪುರಸಭೆ ಅಧ್ಯಕ್ಷ ಆರ್.ಎ. ಅಶೋಕ್, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಜಿ.ಪಂ. ಸಿಇಓ ಎಂ.ಎಸ್.ದಿವಾಕರ್,  ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಇದ್ದರು

click me!