* ಕಾಫಿನಾಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
* ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
* ಸಿಎಂ ರಿಂದ ಸಾರ್ವಜನಕ ಅಹವಾಲು ಸ್ವೀಕಾರ
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು
ಚಿಕ್ಕಮಗಳೂರು, (ಮೇ.17): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ನಾಳೆ(ಮೇ.18) ಬಸವರಾಜ ಬೊಮ್ಮಾಯಿ ಭೇಟಿ ನೀಡಿಲಿದ್ದಾರೆ. ಸಿಎಂ ಆದ ಬಳಿಕ ಬೊಮ್ಮಾಯಿ ಅವರು ಜಿಲ್ಲೆಗೆ ಎರಡನೇ ಬಾರಿಗೆ ಆಗಮಿಸುತ್ತಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ. ತದನಂತರ ಸಂಜೆ ನಗರದಲ್ಲಿ ನಡೆಯುವ ಬಸವತತ್ವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಕಾಫಿನಾಡಿನಲ್ಲಿ ಸಿಎಂ ಸವಾರಿ
ಸಿಎಂ ಬಸರಾಜ ಬೊಮ್ಮಾಯಿ ನಾಳೆ(ಬುಧವಾರ) ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿದ್ದು, ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಬಸವ ತತ್ವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಕಛೇರಿ ಸಂಕೀರ್ಣದ ಶಂಕು ಸ್ಥಾಪನೆ, ನೂತನ ಪ್ರವಾಸಿ ಮಂದಿರ ಕಟ್ಟಡದ ಉದ್ಘಾಟನೆ ಕಾರ್ಯಕ್ರಮಗಳನ್ನು ಅವರು ನೆರವೇರಿಸಲಿದ್ದಾರೆ.
undefined
ಶಾಸಕರೇ ಉದ್ಘಾಟನೆ ಮಾಡ್ಬೇಕೆಂಬ ಹುಂಬತನ, ರಸ್ತೆಗೆ ತಂತಿ ಬೇಲಿ ಹಾಕಿ ದಿಗ್ಬಂದನ
ಸಖರಾಯಪಟ್ಟಣದಲ್ಲಿ ನಿರ್ಮಿಸಲಾಗಿರುವ ಐಟಿಐ ಕಾಲೇಜನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿಗಳು, ಕಲ್ಯಾಣನಗರ ಬಳಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹಿಳಾ ಕ್ರೀಡಾ ವಿದ್ಯಾರ್ಥಿನಿಲಯ 3.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪುಟ್ಬಾಲ್ ಅಂಕಣ, ಶೃಂಗೇರಿಯಲ್ಲಿ 24.22 ಕೋಟಿ ರೂ. ಹಾಗೂ ಕಳಸದಲ್ಲಿ 22.67 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳನ್ನು ಉದ್ಘಾಟಿಸಲಿದ್ದಾರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ. 4.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದ ಉದ್ಘಾಟನೆ , ಲೋಕೋಪಯೋಗಿ ಇಲಾಖೆಯಿಂದ ಪ್ರತಿ ಗ್ರಾಮದಲ್ಲಿ ಒಟ್ಟು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಮುದಾಯ ಭವನಗಳಿಗೆ ವರ್ಚುವಲ್ ಆಗಿ ಚಾಲನೆ ನೀಡಲಿರುವ ಅವರು ಸರ್ಕಾರದಿಂದ ಮಂಜೂರಾಗಿರುವ ಒಟ್ಟು 14.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ 4 ಸೇತುವೆಗಳಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ .
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ಬಪರ್ ಕೊಡುಗೆ
ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಿ.ಟಿ ರವಿ ಪ್ರತಿನಿಧಿಸುವ ಕ್ಷೇತ್ರಕ್ಕೆ ಹಲವು ಯೋಜನೆಯ ಕಾಮಗಾರಿಗಳಿಗೆ ಅನುದಾನ ಬಿಡುಗೆಡೆಯಾಗಿದೆ.ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ 16 ರಸ್ತೆಗಳಿಗೆ ಅವರು ಶಂಕು ಸ್ಥಾಪನೆ ಮಾಡಲಿದ್ದಾರೆ. ನರೇಗಾ ಯೋಜನೆಯಡಿ ನಿರ್ಮಿಸಲಾಗಿರುವ ಶಾಲೆ, ಅಂಗನವಾಡಿ ಕೇಂದ್ರಗಳು, ವಿದ್ಯಾರ್ಥಿ ನಿಲಯಗಳಿಗೆ ಅವರು ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ..
ಸೂಕ್ತ ಕಾನೂನು ಸುವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಕ್ಕಮಗಳೂರಿಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಭದ್ರತೆ, ರಕ್ಷಣಾ ವ್ಯವಸ್ಥೆ , ಪ್ರವಾಸ ಕಾಲದಲ್ಲಿ ಸೂಕ್ತ ಕಾನೂನು ಸುವ್ಯವಸ್ಥೆ ಮತ್ತು ಶಿಸ್ತುಪಾಲನಾ ಕ್ರಮಗಳನ್ನು ಪಾಲಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದ್ದಾರೆ.