ಬೊಮ್ಮಾಯಿ ಸರ್ಕಾರ ದೇಶದ ಅತ್ಯಂತ ಭ್ರಷ್ಟಸರ್ಕಾರವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ಎಲ್ಲ ಅರ್ಹತೆ ಕಳೆದುಕೊಂಡಿದೆ. ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ ಎಂದು ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ ಹರಿಹಾಯ್ದರು.
ಹುಬ್ಬಳ್ಳಿ (ಡಿ.21) : ಬೊಮ್ಮಾಯಿ ಸರ್ಕಾರ ದೇಶದ ಅತ್ಯಂತ ಭ್ರಷ್ಟಸರ್ಕಾರವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ಎಲ್ಲ ಅರ್ಹತೆ ಕಳೆದುಕೊಂಡಿದೆ. ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ ಎಂದು ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ ಹರಿಹಾಯ್ದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಭ್ರಷ್ಟಾಚಾರದ ಸಮುದ್ರದಲ್ಲಿ ಮುಳುಗಿದೆ. ಪ್ರಜಾಪ್ರಭುತ್ವ ಮೌಲ್ಯವನ್ನು ಗಾಳಿಗೆ ತೂರಿದ ಬಿಜೆಪಿಯದ್ದು ಅನೈತಿಕ ಸರ್ಕಾರವಾಗಿದೆ. ಎರಡೂ ಕೈಯಲ್ಲಿ ಲಂಚ ತೆಗೆದುಕೊಳ್ಳುತ್ತ ಬಿಜೆಪಿ ರಾಜ್ಯದಲ್ಲಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.
Assembly electiion: ಮುಂದಿನ 75 ದಿನ ಬಿಜೆಪಿ ವಿರುದ್ಧ ತೀವ್ರ ಹೋರಾಟ: ಸುರ್ಜೇವಾಲ
ಶೇ. 40ರಿಂದ 50 ಪರ್ಸೆಂಟೇಜ್ ಭ್ರಷ್ಟಾಚಾರದಲ್ಲಿ ಬಿಜೆಪಿ ಮುಳುಗಿದೆ. ಮಠಗಳಿಗೆ ನೀಡುವ ಅನುದಾನದಲ್ಲಿಯೂ ಭ್ರಷ್ಟಾಚಾರ ನಡೆಸಿದೆ. ಶೇ. 05 ಪರ್ಸೆಂಟ್ ಡಿಸ್ಕೌಂಟ್ ನೀಡಿ 35 ಪರ್ಸೆಂಟ್ ಕಮಿಷನ್ ಹೊಡೆದಿದೆ. ಕರ್ನಾಟಕದಲ್ಲಿ ಶೇ. 40 ಹೊರತಾಗಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ರಾಜ್ಯದಲ್ಲಿ ನೌಕರಿಗಳನ್ನು ಬಿಕರಿಗೆ ಇಡಲಾಗಿದೆ. ಪಿಎಸ್‌ಐ ಹಗರಣ ನೇರವಾಗಿ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ಬಾಗಿಲಿಗೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿಜಿಪಿ ಮಟ್ಟದ ಅಧಿಕಾರಿಯೊಬ್ಬರ ಬಂಧನ ಆಗಿರುವುದು ಇತಿಹಾಸದಲ್ಲಿ ಇದೇ ಮೊದಲಾಗಿದೆ. ಡಿಜಿಪಿ ಮಟ್ಟದ ಅಧಿಕಾರಿಗೆ ಲಂಚ ಮುಟ್ಟಿದೆ ಅಂದರೆ ಮೇಲಿನ ಗೃಹ ಸಚಿವರಿಗೂ ಮುಟ್ಟಿದೆ ಎಂದರ್ಥ. ಇದರ ತನಿಖೆಯನ್ನು ಯಾರು ಮಾಡಬೇಕು? ಸರ್ಕಾರದಿಂದ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಇದೆಲ್ಲಕ್ಕೂ ಅಂತ್ಯ ಹಾಡುವ ಸಮಯ ಬಂದಿದೆ. ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಹ ಹೋರಾಟ ರೂಪಿಸುತ್ತಿದೆ ಎಂದರು.
ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ: ಸುರ್ಜೇವಾಲಾ
ಕೃಷ್ಣಾ ನದಿ ನೀರು ಬಳಕೆ ಕುರಿತಾಗಿ ಡಿ. 30ರಂದು ವಿಜಯಪುರದಲ್ಲಿ ಹೋರಾಟ ಹಾಗೂ ಮಹದಾಯಿ ವಿಚಾರವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಜ. 2ಕ್ಕೆ ಹೋರಾಟ, ಸಭೆ ನಡೆಸಲಾಗುತ್ತದೆ. ಅಲ್ಲದೇ ಎಸ್ಸಿ, ಎಸ್ಟಿಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಚಿತ್ರದುರ್ಗದಲ್ಲಿ ಬೃಹತ್ ರಾರಯಲಿ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.