ಸುರೇಶ್ ಅಂಗಡಿ ಇಲ್ಲ ಎನ್ನುವುದನ್ನು ಕಲ್ಪನೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ: ಯಡಿಯೂರಪ್ಪ

Suvarna News   | Asianet News
Published : Oct 07, 2020, 10:51 AM ISTUpdated : Oct 07, 2020, 10:59 AM IST
ಸುರೇಶ್ ಅಂಗಡಿ ಇಲ್ಲ ಎನ್ನುವುದನ್ನು ಕಲ್ಪನೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ: ಯಡಿಯೂರಪ್ಪ

ಸಾರಾಂಶ

ಸುರೇಶ್ ಅಂಗಡಿ ಇಲ್ಲ ಎನ್ನುವುದನ್ನು ಕಲ್ಪನೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ| ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಅಂಗಡಿ ಅವರ ಜೊತೆಗಿನ ನೆನಪುಗಳನ್ನ ನೆನಪಿಸಿಕೊಂಡ ಸಿಎಂ ಯಡಿಯೂರಪ್ಪ|  

ಬೆಳಗಾವಿ(ಅ.07): ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ದಿ. ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ,  ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. 

ಇಂದು(ಬುಧವಾರ) ನಗರದಲ್ಲಿರುವ ಸುರೇಶ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಸುರೇಶ್ ಅಂಗಡಿ ಇಲ್ಲ ಎನ್ನುವುದನ್ನು ಕಲ್ಪನೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಅಂಗಡಿ ಅವರ ಜೊತೆಗಿನ ನೆನಪುಗಳನ್ನ ನೆನಪಿಸಿಕೊಂಡಿದ್ದಾರೆ. 

ಗೆಳೆಯ ಅಂಗಡಿ ಸಾವಿ​ನಿಂದ ವಿಚ​ಲಿ​ತ​ನಾ​ಗಿ​ದ್ದೇನೆ: ಜಾರ​ಕಿ​ಹೊ​ಳಿ

ಸುರೇಶ್ ಅಂಗಡಿ ಈ ಬಾರಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದರು. ಅವರ ನಿಧನ ಈಗಲೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಗಡಿಯವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ನೆರವೇರಿಸಲಾಗಿದೆ. ಅದೇ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಇದ್ದರು. 
 

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!