ಅನರ್ಹ ರೇಶನ್ ಕಾರ್ಡ್ ಇದ್ರೆ.. ಸಿಎಂ ಕೊನೆ ಎಚ್ಚರಿಕೆ, ಇಟ್ಗೊಂಡ್ರೆ ಏನಾಗುತ್ತದೆ?

By Suvarna NewsFirst Published Jun 4, 2020, 7:16 PM IST
Highlights

ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಎಂ ಶಾಕ್/ ಅನರ್ಹ ಕಾರ್ಡ್ ರದ್ದು ಮಾಡಲು ಖಡಕ್ ಸೂಚನೆ/ ನೀವಾಗಿಯೇ ಬಂದು ರದ್ದು ಮಾಡಿಸಿಕೊಂಡರೆ ಉತ್ತಮ/ ರಾಜ್ಯದಲ್ಲಿ ಶುರುವಾಗಲಿದೆ ಅನರ್ಹ ಕಾರ್ಡ್ ರದ್ದು ಅಭಿಯಾನ

ಬೆಂಗಳೂರು(ಜೂ. 04)  ಸಿಎಂ ಬಿಎಸ್ ಯಡಿಯೂರಪ್ಪ ಕಟ್ಟು ನಿಟ್ಟಿನ ಸೂಚನೆ ನೀಡಿದ್ದು ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಕಚೇರಿ ಕೃಷ್ಣಾ ಸಭೆಯಲ್ಲಿ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ರ್ಹ ಫಲಾನುಭವಿಗಳಿಗೆ ಪಡಿತರ ಸೌಲಭ್ಯ ಸಮರ್ಪಕವಾಗಿ ತಲುಪಬೇಕಿದೆ ಎಂದಿದ್ದಾರೆ.

ಕಾರ್ಡ್ ವಾಪಸ್ ಮಾಡದಿದ್ದರೆ ಕ್ರಿಮಿನಲ್ ಕೇಸ್

ಕೋವಿಡ್ ಪ್ರಾರಂಭಕ್ಕೆ ಮೊದಲು 63 ಸಾವಿರ ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗಿತ್ತು. ಈಗ ಮತ್ತೆ ಅನರ್ಹ ಮತ್ತು ನಕಲಿ ಪಡಿತರ ಚೀಟಿಗಳ ರದ್ದುಪಡಿಸಲು ಅಭಿಯಾನ ನಡೆಸಬೇಕು ಎಂದು ತಿಳಿಸಿದರು.  ರಾಜ್ಯದ ಬೊಕ್ಕಸಕ್ಕೆ ಆಗುವ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಅಭಿಯಾನ ನೆರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಆಹಾರ ಮತ್ತು ನಾಗರಿಕರ ಸರಬರಾಜು ನಿಗಮಕ್ಕೆ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಖರೀದಿಗೆ ರೈತರಿಗೆ ಹಣ ಪಾವತಿಸಲು ಬಾಕಿ ಇರುವ 240 ಕೋಟಿ ರೂ. ಆವರ್ತ ನಿಧಿಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪಡಿತರ ವಿತರಣೆ ಮಾಡಲಾಗಿದೆ. ಶೇ. 95ರಷ್ಟು ಪಡಿತರಚೀಟಿದಾರರು ಪಡಿತರ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆ ಅಡಿ 98,079 ಫಲಾನುಭವಿಗಳಿಗೆ 3 ಅನಿಲ ಸಿಲಿಂಡರುಗಳನ್ನು ಉಚಿತವಾಗಿ ವಿತರಿಸಲು ಕ್ರಮ ವಹಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದರು.

 

click me!