ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅಗತ್ಯ ಹಣಕಾಸು ನೆರವು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಯಡಿಯೂರಪ್ಪ| ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ನೀಲನಕ್ಷೆಯನ್ನು ಮಂಡಿಸಿದ ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ್ ಪಾಟೀಲ್ ಸೇಡಂ|
ಬೆಂಗಳೂರು(ಆ.20): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದಿದ್ದು, ಅಗತ್ಯ ಹಣಕಾಸು ನೆರವು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಚರ್ಚೆ ವೇಳೆ ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ್ ಪಾಟೀಲ್ ಸೇಡಂ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ನೀಲನಕ್ಷೆಯನ್ನು ಮಂಡಿಸಿದ್ದಾರೆ.
ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರೊಫೆಸರ್‌ಗಳ ಹೊಡೆದಾಟ!
ಈ ಬಗ್ಗೆ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು ಅಭಿವೃದ್ಧಿಯ ನೀಲನಕ್ಷೆಯನ್ನು ಒಪ್ಪಿ ಹಂತಹಂತವಾಗಿ ಹಣಕಾಸು ಒದಗಿಸುವಂತೆ ಸೂಚಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರ್‌ಗೌಡ ಪಾಟೀಲ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.