ಆಲಮಟ್ಟಿ ಅಣೆಕಟ್ಟೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ| ಆಲಮಟ್ಟಿಯಲ್ಲಿ ಜಿಲ್ಲಾ ನೀರಾವರಿ ಯೋಜನೆಗಳ ಕುರಿತು ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಅಧಿಕಾರಿಗಳೊಂದಿಗೆ ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ| ಬೆಳಗ್ಗೆ 10-45ಕ್ಕೆ ಲಾಲಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಲಿದ್ದಾರೆ|
ವಿಜಯಪುರ(ಅ.5): ಸಂಪೂರ್ಣ ಭರ್ತಿಯಾದ ಆಲಮಟ್ಟಿ ಅಣೆಕಟ್ಟೆಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ಆಲಮಟ್ಟಿಯಲ್ಲಿ ಜಿಲ್ಲಾ ನೀರಾವರಿ ಯೋಜನೆಗಳ ಕುರಿತು ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಅಧಿಕಾರಿಗಳೊಂದಿಗೆ ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಬೆಳಗ್ಗೆ 10-45ಕ್ಕೆ ಲಾಲಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಲಿದ್ದಾರೆ. ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಡಿಸಿಎಂ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ, ಗಣಿ ಮತ್ತು ಭೂ ವಿಜ್ಞಾನ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಸೇರಿದಂತೆ ವಿಜಯಪುರ-ಬಾಗಲಕೋಟೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ನಂತರ ಬೆಳಗ್ಗೆ 11-15ಕ್ಕೆ ಆಲಮಟ್ಟಿಯಿಂದ ಹೊರಟು ಮುದ್ದೇಬಿಹಾಳದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ಮನೆಗೆ ಭೇಟಿ ನೀಡಿ, ನಂತರ ಮುದ್ದೇಬಿಹಾಳ ಮಾರ್ಗವಾಗಿ ಯಾದಗಿರಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.