ಮಾರ್ಚ್ 5 ರಂದು ಬಜೆಟ್ ಮಂಡನೆ| ರೈತರಿಗೆ, ಮಹಿಳೆಯರಿಗೆ ಅನುಕೂಲವಾಗುವ ಬಜೆಟ್ ಮಂಡಿಸುತ್ತೇನೆ| ಆಯವ್ಯದಲ್ಲಿ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಡಲಾಗುವುದು ಎಂದ ಯಡಿಯೂರಪ್ಪ|
ಕಲಬುರಗಿ(ಫೆ.05): ಮಾರ್ಚ್ 5 ರಂದು ಬಜೆಟ್ ಮಂಡಿಸುತ್ತೇನೆ. ರೈತರಿಗೆ, ಮಹಿಳೆಯರಿಗೆ ಅನುಕೂಲವಾಗುವ ಬಜೆಟ್ ಮಂಡಿಸುತ್ತೇನೆ. ಈ ಆಯವ್ಯದಲ್ಲಿ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಬುಧವಾರ ಕಲಬುರಗಿ ನಗರದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯದಮವರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಗುರುವಾರ(ಫೆ.6 ರಂದು ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ. ಸಂಪುಟಕ್ಕೆ ಎಷ್ಟು ಜನ ಸೇರುತ್ತಾರೆ ಅನ್ನೋದು ಇಂದು ಸಂಜೆ ಗೊತ್ತಾಗಲಿದೆ. ಹೈಕಮಾಂಡ್‌ನಿಂದ ಮಾಹಿತಿ ಬರುತ್ತೆ ಬಂದ ಮೇಲೆ ತಿಳಿಯಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಕಲಬುರಗಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಐಎಎಲ್ ಏರ್‌ಪೋರ್ಟ್‌ನಿಂದ ಕಲಬುರಗಿ ಏರ್‌ಪೋರ್ಟ್‌ಗೆ ವಿಶೇಷ ವಿಮಾನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಆಗಮಿಸಿದ್ದಾರೆ. ಸಿಎಂಗೆ ಡಿಸಿಎಂ ಗೋವಿಂದ ಕಾರಜೋಳ ಅವರು ಸ್ವಾಗತ ಕೋರಿ ಬರಮಾಡಿಕೊಂಡಿದ್ದಾರೆ.