ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಯಡಿಯೂರಪ್ಪ

By Suvarna News  |  First Published Feb 5, 2020, 1:35 PM IST

ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲು ಅವಕಾಶ ಮಾಡಿಕೊಟ್ಟ ಜನತೆಗೆ ತಲೆಬಾಗಿ ನಮಿಸುವೆ: ಸಿಎಂ|  ಶರಣರು, ಸೂಫಿ ಸಂತರ ನಾಡು ಕಲಬುರಗಿ ತನ್ನದೇ ಸಾಂಸ್ಕೃತಿಕ ಹಿರಿಮೆ ಹೊಂದಿದೆ| ನಾಡು, ನುಡಿ ರಕ್ಷಣೆಗೆ ನಮ್ಮ ಸರಕಾರ ಬದ್ಧ| 


ಕಲಬುರಗಿ(ಫೆ.05): 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಮುಖ್ಯಮಂತ್ರಿಯಾಗಿ ಉದ್ಘಾಟಿಸಲು ಅವಕಾಶ ಮಾಡಿಕೊಟ್ಟ ಜನತೆಗೆ ತಲೆಬಾಗಿ ನಮಿಸುವೆ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. 

ಕಲಬುರಗಿಯಲ್ಲಿ ಕನ್ನಡ ಕಹಳೆ: ಅಕ್ಷರ ಜಾತ್ರೆಗೆ ವಿದ್ಯುಕ್ತ ಚಾಲನೆ

Tap to resize

Latest Videos

undefined

ಬುಧವಾರ ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಉದ್ಘಾಟಿಸಿ ಭಾಷಣ ಮಾಡಿದ ಸಿಎಂ ಯಡಿಯೂರಪ್ಪ ಅವರು,  ಶರಣರು, ಸೂಫಿ ಸಂತರ ನಾಡು ಕಲಬುರಗಿ ತನ್ನದೇ ಸಾಂಸ್ಕೃತಿಕ ಹಿರಿಮೆಯನ್ನು ಹೊಂದಿದೆ. ನಾಡು, ನುಡಿ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಭಾಗ ಹಿಂದುಳಿದ ಭಾಗವಾಗಿದೆ. 371 ನೇ ತಿದ್ದುಪಡಿಯಿಂದ ಮಿಸಲಾತಿ ನೀಡಲಾಗುತ್ತಿದೆ. ಇದು ಈ ಭಾಗದ ಉಜ್ವಲ ಭವಿಷ್ಯಕ್ಕೆ ಬುನಾದಿಯಾಗಲಿದೆ ಎಂದು ಹೇಳಿದ್ದಾರೆ. 

ಕಲಬುರಗಿ ಸಾಹಿತ್ಯ ಸಮ್ಮೇಳನದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಫೆ.7 ರಂದು ಬೀದರ್‌ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ. ನಾಡಿನ ನೆಲ, ಜಲ ಅಸ್ಮಿತೆ ವಿಚಾರದಲ್ಲಿ ನಮ್ಮ ಸರಕಾರ ಯಾವುದೇ ಕಾರಣಕ್ಕೂ ರಾಜೀ ಮಾಡಿಕೊಳ್ಳುವುದಿಲ್ಲ. ಬೆಳಗಾವಿ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಗಡಿ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ನಾಡಿನ ನೆಲ, ಜಲ, ಗಡಿ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ. ಎರಡು ವರ್ಷಕ್ಕೊಮ್ಮೆ ಕಲ್ಯಾಣ ಕರ್ನಾಟಕ ಉತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ. 
 

click me!