ಒಟ್ಟು 30 ಕೋಟಿ ವೆಚ್ಚದಲ್ಲಿ ಬ್ರಾಡ್‌ವೇ ಆಸ್ಪತ್ರೆಯನ್ನು ಕೊರೋನಾ ಸೋಂಕಿತರಿಗಾಗಿ ಚಿಕಿತ್ಸೆ ನೀಡಲು ಸಿದ್ಧಪಡಿಸಲಾಗುತ್ತಿದೆ. ಒಟ್ಟು 112 ಹಾಸಿಗೆಗಳ ಸಾಮರ್ಥ್ಯ ಇದೆ. ಇದರಲ್ಲಿ 18 ವೆಂಟಿಲೇಟರ್‌ಗಳಿವೆ ಎಂದರು.
ಬೆಂಗಳೂರು(ಜು.31): ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಇಸ್ಫೋಸಿಸ್ ಫೌಂಡೇಷನ್ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು ಆ.5ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಪೂರ್ವ ವಲಯದ ಉಸ್ತುವಾರಿ ವಹಿಸಿರುವ ವಸತಿ ಸಚಿವ ವಿ.ಸೋಮಣ್ಣ ಅವರು ಗುರುವಾರ ಬ್ರಾಡ್ ವೇ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿತರ ಚಿಕಿತ್ಸೆ ನೀಡಲು ಸಿದ್ಧವಾಗಿರುವ ಬ್ರಾಡ್ ವೇ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಗಸ್ಟ್ 5ರಂದು ಉದ್ಘಾಟನೆ ಮಾಡಲಿದ್ದಾರೆ ಎಂದಿದ್ದಾರೆ.
ವರವ ಕೊಡೇ ಮಹಾಲಕ್ಷ್ಮೀ... ವರ ಮಹಾಲಕ್ಷ್ಮೀ ವ್ರತದ ಮಹತ್ವ, ಆಚರಣೆ ಬಗ್ಗೆ ಒಂದಷ್ಟು ಮಾಹಿತಿ
ಒಟ್ಟು 30 ಕೋಟಿ ವೆಚ್ಚದಲ್ಲಿ ಬ್ರಾಡ್‌ವೇ ಆಸ್ಪತ್ರೆಯನ್ನು ಕೊರೋನಾ ಸೋಂಕಿತರಿಗಾಗಿ ಚಿಕಿತ್ಸೆ ನೀಡಲು ಸಿದ್ಧಪಡಿಸಲಾಗುತ್ತಿದೆ. ಒಟ್ಟು 112 ಹಾಸಿಗೆಗಳ ಸಾಮರ್ಥ್ಯ ಇದೆ. ಇದರಲ್ಲಿ 18 ವೆಂಟಿಲೇಟರ್‌ಗಳಿವೆ ಎಂದರು.